ಬೆಂಗಳೂರು:‘ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ, ಕಾಂಗ್ರೆಸ್ ವೋಟುಗಳಿಂದಲೇ ಗೆದ್ದಿದ್ದು’ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಸಿಎಂ ನೀಡಿರುವ ಹೇಳಿಕೆಯನ್ನು ಲೇವಡಿ ಮಾಡಿರುವ ಕುಮಾರಸ್ವಾಮಿ, 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ. ನಿಮ್ಮದೇ ಮಾತುಗಳಲ್ಲಿ ಹೇಳುವುದಾದರೆ. ಇದಲ್ಲವೇ ನಂಬಿಕೆದ್ರೋಹ..? ಎಂದು ಪ್ರಶ್ನಿಸಿದ್ದಾರೆ.
ಕೊನೆಗೂ ಸತ್ಯ ನುಡಿದಿದ್ದೀರಿ! ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ ಕಕ್ಕಿದ್ದೀರಿ! ಎಂದು ವ್ಯಂಗ್ಯವಾಡಿದ್ದಾರೆ.ಅಂದು ಕಾಂಗ್ರೆಸ್ ಮೈತ್ರಿ ಪಕ್ಷ, ನಿಖಿಲ್ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ. ಅವರ ಜತೆಯಲ್ಲೇ ಪ್ರಚಾರದ ಸೋಗಿನಾಟವಾಡಿ, ಮಾಧ್ಯಮಗಳ ಮುಂದೆ ಗೆಲ್ಲಿಸುತ್ತೇವೆಂದು ಪೋಸು ಕೊಡುತ್ತಲೇ ನಿಖಿಲ್ ಸುತ್ತ ಶಕುನಿವ್ಯೆಹ ರಚಿಸಿದ ಕಲಿಯುಗ ಶಕುನಿ ನೀವಲ್ಲದೆ ಮತ್ತಾರು ಸಿದ್ದರಾಮಯ್ಯನವರೇ? ಎಂದು ಕೆಣಕಿದ್ದಾರೆ.
5 ವರ್ಷಗಳ ನಂತರವಾದರೂ ಸತ್ಯ ಕಕ್ಕಿದ್ದೀರಿ ಹಾಗೂ ನಂಬಿದವನ ಮನೆ ನಾಶವಾಗಲಿ ಎನ್ನುವ ನಿಮ್ಮಹೇಯತನ ಬಯಲಾಗಿದೆ. ಸತ್ಯಮೇಯ ಜಯತೆ. ಇದಿಷ್ಟೇ ನನ್ನ ಕಳಕಳಿ ಮತ್ತು ನಂಬಿಕೆ ಎಂದು ಟಾಂಗ್ ಕೊಟ್ಟಿದ್ದಾರೆ.
ಸಕ್ಕರೆ ಕಾರ್ಖಾನೆ ಬಗ್ಗೆ ಹೇಳಿದ್ದೀರಿ. ಬಜೆಟ್‌ನಲ್ಲಿ ೋಷಣೆ ಮಾಡಿದ್ದೀರಿ, ದುಡ್ಡು ಎಲ್ಲಿಟ್ಟಿದ್ದೀರಿ? ನಾನು 2019ರ ಬಜೆಟ್ ನಲ್ಲಿಯೇ ಈ ಕಾರ್ಖಾನೆಗೆ 100 ಕೋಟಿ ತೆಗೆದಿರಿಸಿದ್ದೆ. ಎಲ್ಲಿ ಹೋಯಿತು ಆ ದುಡ್ಡು? ಇದರ ಬಗ್ಗೆ ಗ್ಯಾರಂಟಿ ಸಮಾವೇಶದಲ್ಲಿ ಚಕಾರ ಎತ್ತಿಲಿಲ್ಲವೇಕೆ ಸಿದ್ದರಾಮಯ್ಯನವರೇ? ಇಂಥ ಆತ್ಮವಂಚನೆ ಏತಕ್ಕೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
