ಬೆಂಗಳೂರು: ಜಲ ವಿವಾದ ಬಿಕ್ಕಟ್ಟು ಹಿನ್ನೆಲೆ ಬುಧವಾರ ಬೆಳಗ್ಗೆ 11 ಗಂಟೆಗೆ ಸರ್ಕಾರ ಸರ್ವ ಪಕ್ಷ ಸಭೆ ಕರೆದಿದ್ದು, ಹಿರಿಯ ರಾಜಕೀಯ ನಾಯಕರನ್ನು ಆಹ್ವಾನಿಸಿದೆ.
ಇದೇ ವೇಳೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಕಾವೇರಿ ಹಾಗೂ ಮಹದಾಯಿ ಜಲ ವಿವಾದಗಳ ಬಗ್ಗೆ ಚರ್ಚಿಸಿ ಪರಿಹಾರ ಸೂತ್ರಗಳನ್ನು ಕಂಡುಕೊಳ್ಳಲು ಸರ್ವಪಕ್ಷಗಳ ಸಭೆ ಕರೆದಿದ್ದೇವೆ ಎಂದು ಹೇಳಿದ್ದಾರೆ.
ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ಕೃಷಿ ಹಾಗೂ ಕುಡಿಯುವ ನೀರಿನ ಉದ್ದೇಶಕ್ಕೆ ಅಗತ್ಯವಾದ ಪ್ರಮಾಣಕ್ಕಿಂತ ಕಡಿಮೆ ನೀರಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಕೂಡ ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಗಳ ಆದೇಶ ಪಾಲನೆ ಮಾಡಬೇಕಾಗಿದೆ ಎಂದು ತಮಗೆ ಎದುರಾಗಿರುವ ಪರಿಸ್ಥಿತಿ ವಿವರಿಸಿದ್ದಾರೆ.
ಒಂದೆಡೆ ಕನ್ನಡಿಗರ ಹಿತರಕ್ಷಣೆ, ಇನ್ನೊಂದೆಡೆ ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕಾದ ಸಂದಿಗ್ಧ ಸಮಯದಲ್ಲಿ ನಾವಿರುವುದರಿಂದ ಸರ್ವಪಕ್ಷ ಸಭೆಯಲ್ಲಿ ರಾಜ್ಯದ ಎಲ್ಲಾ ಪಕ್ಷಗಳ ಮುಖಂಡರು, ಸಂಸತ್ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ರಚನಾತ್ಮಕ ಸಲಹೆ, ಸಹಕಾರ ನೀಡುವ ಮೂಲಕ ನಾಡಿನ ಹಿತರಕ್ಷಣೆಗೆ ನಮ್ಮೊಂದಿಗೆ ಕೈಜೋಡಿಸುತ್ತಾರೆಂಬ ಭರವಸೆಯಿದೆ ಎಂದು ಹೇಳಿಕೊಂಡಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 + 2 =
Remember me
