ಬೆಂಗಳೂರು:ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿರುವ ಬಿಬಿಎಂಪಿಗೆ ಸೇರಿದ ಕಟ್ಟಡವನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ಸಜ್ಜುಗೊಳಿಸಲಾಗುತ್ತಿದೆ.
ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಸುಧಾಕರ್, ಆಸ್ಪತ್ರೆಗೆ ಅಗತ್ಯವಿರುವ 30 ಕೋಟಿ ರೂ. ವೆಚ್ಚದ ಮೂಲಸೌಕರ್ಯವನ್ನು ಪ್ರತಿಷ್ಠಿತ ಇನ್ಫೋಸಿಸ್ ಫೌಂಡೇಷನ್​ನಿಂದ ಒದಗಿಸಲಾಗುತ್ತಿದೆ. ಶೀಘ್ರವೇ ಪೂರ್ಣ ಪ್ರಮಾಣದ ಕೋವಿಡ್ ಆಸ್ಪತ್ರೆಯಾಗಿ ರೂಪುಗೊಳ್ಳಲಿದೆ ಎಂದು ತಿಳಿಸಿದರು.ಇದನ್ನೂ ಓದಿರಿಶಾಸಕ ಶರತ್ ಬಚ್ಚೇಗೌಡ ದಂಪತಿಗೆ ಕರೊನಾ ಸೋಂಕು
ಆರಂಭದಲ್ಲಿ ಹೈ ಫ್ಲೋ ಆಕ್ಸಿಜೆನ್ ಹೊಂದಿರುವ 180 ಹಾಸಿಗೆಗಳ ಸೌಕರ್ಯ ಒದಗಿಸಲಾಗುತ್ತಿದೆ. ಅಗತ್ಯವಿದ್ದಲ್ಲಿ ವೆಂಟಿಲೇಟರ್ ಅಳವಡಿಸುವ ವ್ಯವಸ್ಥೆ ಹೊಂದಿರುತ್ತದೆ ಎಂದು ಸಚಿವರು ಹೇಳಿದರು. ಆಸ್ಪತ್ರೆಗೆ 30 ವೆಂಟಿಲೇಟರ್ ಒದಗಿಸಲಾಗುತ್ತಿದ್ದು, ನ್ಯೂರೋ ಸರ್ಜರಿ ಓಟಿ, ಕಾರ್ಡಿಯೋ ಓಟಿ, ಸಿಟಿ ಸ್ಕ್ಯಾನ್ ಸೌಲಭ್ಯವನ್ನು ಈ ಆಸ್ಪತ್ರೆ ಒಳಗೊಂಡಿರುತ್ತದೆ. ಮುಂದಿನ 10 ದಿನದೊಳಗೆ ಸಂಪೂರ್ಣವಾಗಿ ಸಿದ್ಧವಾಗಲಿದೆ ಎಂದು ತಿಳಿಸಿದರು.
ನಂತರ ಬೌರಿಂಗ್ ಮತ್ತು ಲೇಡಿ ಕರ್ಜ಼ನ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಸುಧಾಕರ್, ಚಿಕಿತ್ಸಾ ಸೌಲಭ್ಯ ಸೇರಿ ಇಲ್ಲಿ ಪಾಲಿಸಲಾಗುತ್ತಿರುವ ಸುರಕ್ಷತಾ ಕ್ರಮಗಳ ಪರಾಮರ್ಶೆ ನಡೆಸಿದರು. ಸೋಂಕಿತರೊಂದಿಗೆ ವಿಡಿಯೋ ಸಂವಾದ ನಡೆಸಿ ಯೋಗಕ್ಷೇಮ ವಿಚಾರಿಸಿದರು.
ಚಿಕಿತ್ಸಾ ಸೌಲಭ್ಯಗಳ ಕುರಿತು ಇಲ್ಲಿನ ರೋಗಿಗಳು ತೃಪ್ತಿ ವ್ಯಕ್ತಪಡಿಸಿದ್ದಾರೆ. ಇದೇ ಆಸ್ಪತ್ರೆಯಲ್ಲಿ ಕೋವಿಡ್ ಮರಣ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಮರಣ ಮೌಲ್ಯಮಾಪನಾ ವರದಿ (Death Audit Report) ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರಲ್ಲಿ 1928ರಲ್ಲೇ ಕಾಣಿಸಿಕೊಂಡಿತ್ತೊಂದು ರೋಗ… ಆಗಿನ ಕೌನ್ಸಿಲ್ ಆಡಳಿತ ಹೊರಡಿಸಿದ್ದ ಆದೇಶ ಪ್ರತಿ ಈಗ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − ten =
Remember me
