ಬೆಳಗಾವಿ:ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಸಮೀಪದ ಹೊಸೂರ ಗ್ರಾಮದ ಶಾಖಾ ಮೂರುಸಾವಿರಮಠದಲ್ಲಿ ನಿನ್ನೆ ರಾತ್ರಿ ಕಳ್ಳತನಕ್ಕೆ ಯತ್ನ ನಡೆದಿದೆ. ಈ ಸಂದರ್ಭದಲ್ಲಿ ಎಚ್ಚರಗೊಂಡ ಮಠದ ಗಂಗಾಧರ ಸ್ವಾಮೀಜಿ ಅವರ ಮೇಲೆ ಕಳ್ಳ ತೀವ್ರತರದಲ್ಲಿ ಹಲ್ಲೆ ನಡೆಸಿದ್ದು, ಸ್ವಾಮೀಜಿ ಅವರಿಗೆ ಗಂಭೀರ ಗಾಯಗಳಾಗಿವೆ.
ನಿನ್ನೆ ಮಧ್ಯರಾತ್ರಿ ಈ ಘಟನೆ ನಡೆದಿದೆ. ಆರೋಪಿಯನ್ನು ಮಲ್ಲಿಕಾರ್ಜುನ ಬುಡಶೆಟ್ಟಿ ಎಂದು ಗುರುತಿಸಲಾಗಿದೆ. ಈತ ಸಮೀಪದ ಹೊಸೂರು ಗ್ರಾಮದ ನಿವಾಸಿ ಎನ್ನಲಾಗಿದೆ.
ಇದನ್ನೂ ಓದಿ:ಇದು ಫೋನ್‌ಇನ್ ಅಲ್ಲ, ಫೋನ್‌ಔಟ್!
ಕಳ್ಳತನ ಮಾಡುವ ಸಮಯದಲ್ಲಿ ಶ್ರೀಗಳು ಪ್ರತಿರೋಧ ತೋರಿದ್ದಕ್ಕೆ, ಹಲ್ಲೆ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಕೊಲೆಗೂ ಯತ್ನಿಸಲಾಗಿದೆ ಎಂದು ಹೇಳಲಾಗುತ್ತಿದ್ದು, ಪೊಲೀಸರಿಂದ‌ ಸತ್ಯ ಇನ್ನಷ್ಟೇ ತಿಳಿಯಬೇಕಿದೆ.
ತಲೆಗೆ ಹಾಗೂ ಕೈಗೆ ಬಲವಾದ ಪೆಟ್ಟು ಬಿದ್ದಿದೆ.‌ ಸ್ವಾಮೀಜಿ ಅವರನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ‌ಸದ್ಯ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ.
ಇದನ್ನೂ ಓದಿ:ಅಸಾಧ್ಯ ಎಂದು ಸರ್ಕಾರವೇ ಕೈಚೆಲ್ಲಿದಾಗ, ಈ ಅಪ್ಪ-ಮಗ ಮಾಡಿ ತೋರಿಸಿದರೊಂದು ಅದ್ಭುತ!
ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈತನ ವಿರುದ್ಧ ಈ ಹಿಂದೆ ಅನೇಕ‌ ಪ್ರಕರಣಗಳು ಇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:six + 7 =
Remember me
