ಬೆಂಗಳೂರು:ಲಾಕ್​ಡೌನ್ ವೇಳೆ ಮನೆ ಬೀಗ ಒಡೆದು ನಗದು ಹಾಗೂ ಚಿನ್ನಾಭರಣ ದೋಚಿದ್ದ ಕಳ್ಳನನ್ನು ಸದ್ದ್ದುಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರ್.ಟಿ.ನಗರ ನಿವಾಸಿ ಸೈಯದ್ ಮಸೂದ್ (36) ಬಂಧಿತ. ಆರೋಪಿಯಿಂದ 171 ಗ್ರಾಂ ಚಿನ್ನ, 6 ಲಕ್ಷ ರೂ ಹಾಗೂ ಕೃತ್ಯ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾಕ್​ಡೌನ್ ಹಿನ್ನೆಲೆಯಲ್ಲಿ ಬಿಟಿಎಂ ಲೇಔಟ್​ನ ಬಿಇಎಂ ಕಾಲನಿ ನಿವಾಸಿ ಅಬ್ದಲ್ ರಶೀದ್ ಎಂಬುವರು ಮನೆ ಬಾಗಿಲಿಗೆ ಬೀಗ ಹಾಕಿಕೊಂಡು ಕುಟುಂಬದ ಜತೆ ಊರಿಗೆ ತೆರಳಿದ್ದರು. ಏ.27ರಂದು ವಾಪಸ್ ಆದ ಬಳಿಕ ಮನೆ ಬಾಗಿಲು ಮುರಿದು ಚಿನ್ನಾಭರಣ, ನಗದು ಹಾಗೂ ಆಸ್ತಿಪತ್ರವಿದ್ದ ಬ್ಯಾಗ್ ಕಳ್ಳತನ ಮಾಡಿಕೊಂಡು ಹೋಗಿರುವುದು ಗೊತ್ತಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಬೈಕ್​ನಿಂದ ಕಳ್ಳನ ಸುಳಿವು:ಸಿಸಿ ಕ್ಯಾಮರಾಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ, ಕಳ್ಳತನ ಮಾಡಿ ಬೈಕ್​ನಲ್ಲಿ ಪರಾರಿಯಾದವನ ಮುಖಚಹರೆ ಸಿಕ್ಕಿತ್ತು. ಇದನ್ನು ಆಧರಿಸಿ ತನಿಖೆ ಮುಂದುವರಿಸಿದಾಗ, ಕೃತ್ಯಕ್ಕೂ ಮುನ್ನ ಹಲವು ಬಾರಿ ಬಂದು ಹೋಗಿರು ವುದು ಕಂಡುಬಂದಿತ್ತು. ಬಳಿಕ ಆರೋಪಿ ಪರಾರಿ ಯಾಗಿದ್ದ ಮಾರ್ಗದಲ್ಲಿನ ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ತನಿಖೆ ಕೈಗೊಂಡ ಪೊಲೀಸರಿಗೆ, ಗುರಪ್ಪನಪಾಳ್ಯದಲ್ಲಿರುವ ಸಹೋದರಿ ಮನೆಗೆ ಬಂದು ಹೋಗಿರುವುದು ಖಚಿತವಾಗಿತ್ತು. ಈ ಕುರಿತು ಮಾಹಿತಿ ಪಡೆದು ಆರ್.ಟಿ. ನಗರದಲ್ಲಿ ನೆಲೆಸಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಮನೆಯಲ್ಲೇ ಬಚ್ಚಿಟ್ಟಿದ್ದ
ವಾಹನ ಚಾಲಕನಾಗಿರುವ ಸೈಯದ್ ಬಿಟಿಎಂ ಲೇಔಟ್​ನಲ್ಲಿರುವ ಸಹೋದರಿ ಮನೆಗೆ ಬಂದಿದ್ದಾಗ, ಕಳ್ಳತನ ಮಾಡುವ ಮನೆ ಗುರುತಿಸಿಕೊಂಡಿದ್ದ. ಮನೆಗೆ ಬೀಗ ಹಾಕಿರುವುದನ್ನು ನೋಡಿಯೇ, ಯಾರೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಕೃತ್ಯ ಎಸಗಿದ್ದ. ಲಾಕ್​ಡೌನ್ ಹಿನ್ನೆಲೆಯಲ್ಲಿ ಕದ್ದ ಚಿನ್ನಾಭರಣವನ್ನು ಮಾರಾಟ ಮಾಡಲು ಸಾಧ್ಯವಾಗದೆ ಪತ್ನಿ ಹಾಗೂ ಮಕ್ಕಳಿಗೂ ಗೊತ್ತಾಗದಂತೆ ಮನೆಯಲ್ಲೇ ಬಚ್ಚಿಟ್ಟಿದ್ದ. ಮನೆ ಮೇಲೆ ದಾಳಿ ನಡೆಸಿದಾಗ ಕೃತ್ಯ ಒಪ್ಪಿಕೊಂಡು ಕದ್ದ ಚಿನ್ನಾಭರಣವಿದ್ದ ಬ್ಯಾಗ್ ಒಪ್ಪಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಲಂಚಕೋರ ವೈದ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 18 =
Remember me
