ಮೈಸೂರು:ಸರ ಕಳ್ಳರಿಗೆ ಪಾದಚಾರಿ ಮಹಿಳೆಯರೇ ಟಾರ್ಗೆಟ್​. ಹಾದಿ-ಬೀದೀಲಿ ಹೊಂಚು ಹಾಕುವ ದುಷ್ಕರ್ಮಿಗಳು ಒಂಟಿ ಮಹಿಳೆಯನ್ನು ಕಂಡ ಕೂಡಲೇ ತಾವೂ ದಾರಿಹೋಕರಂತೆ ಅವರನ್ನೇ ಹಿಂಬಾಲಿಸುತ್ತಾರೆ. ಅತ್ತಿರ ಬರುತ್ತಿದ್ದಂತೆ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಕ್ಷಣಾರ್ಧದಲ್ಲೇ ಸರ ಕಸಿದುಕೊಂಡು ಪರಾರಿಯಾಗ್ತಾರೆ.
ಇದೀಗ 70 ವರ್ಷದ ವೃದ್ಧೆಯ ಚಿನ್ನದ ಸರವನ್ನು ಕಳ್ಳರು ಕಸಿದುಕೊಂಡಿದ್ದು, ಆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೈಸೂರಿನ ಸೋಮನಾಥಪುರದಲ್ಲಿ 70 ವರ್ಷದ ವೃದ್ಧೆ ಶಾಂತಮ್ಮ ವಾಕಿಂಗ್​ ಮಾಡುತ್ತಿದ್ದ ವೇಳೆ ಯುವಕನೊಬ್ಬ ಅವರನ್ನೇ ಹಿಂಬಾಲಿಸಿಕೊಂಡು ಬಂದು ಸರ ಕಸಿದುಕೊಂಡು ಎಸ್ಕೇಪ್​ ಆಗಿದ್ದಾನೆ.
ಇದನ್ನೂ ಓದಿರಿಲೇಡಿ ತಹಸೀಲ್ದಾರ್​ಗೆ ಯುವಕರ ಅವಾಜ್​! ವಿಡಿಯೋ ವೈರಲ್​
ತನ್ನ ಕೊರಳಿಗೆ ಕೈ ಹಾಕಿ ಸರ ಕಸಿದುಕೊಂಡ ದುಷ್ಕರ್ಮಿಯನ್ನು ಹಿಡಿಯಲು ವೃದ್ಧೆ ಶಾಂತಮ್ಮ ಯತ್ನಿಸಿದರೂ ಸಾಧ್ಯವಾಗಿಲ್ಲ. ಕ್ಷಣಾರ್ಧದಲ್ಲೇ ಅಲ್ಲಿಗೆ ಮತ್ತೊಬ್ಬ ಬೈಕ್‌ನಲ್ಲಿ ಬಂದಿದ್ದಾನೆ‌. ಸರಗಳ್ಳ ಬೈಕ್ ಹತ್ತಿ ಪರಾರಿಯಾಗಿದ್ದಾನೆ. ಈ ಎಲ್ಲ ದೃಶ್ಯವೂ ಘಟನೆ ನಡೆದ ಸ್ಥಳದಲ್ಲಿ ಮನೆಯೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.facebook.com/982407188453946/videos/813313279407085
ದೇವರಿಗೆ ಕೈಮುಗಿಯುತ್ತಿದ್ದಾಗಲೇ ವ್ಯಕ್ತಿಯ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ!

ಕಿರುಕುಳಕ್ಕೆ ಯುವ ವಕೀಲ ಬಲಿ, ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
