ಬೆಂಗಳೂರು:ದೇಶದಲ್ಲಿನ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಸಾವಿರಾರು ವರ್ಷಗಳಿಂದ ನಿರಂತರ ಹೋರಾಟ ನಡೆಯುತ್ತಿದೆ. ಆದರೆ ದಿನೇ ದಿನೇ ಜಾತಿವ್ಯವಸ್ಥೆ ಮತ್ತಷ್ಟು ಗಟ್ಟಿಯಾಗುತ್ತಿರುವುದು ವಿಷಾದಕರ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಕಳವಳ ವ್ಯಕ್ತಪಡಿಸಿದ್ದಾರೆ.
ನಗರದ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ರಾಜ್ಯ ಸವಿತಾ ಕಲಾ ಸಂಘ ಆಯೋಜಿಸಿದ್ದ ರಾಜ್ಯ ಮಟ್ಟದ ಸವಿತಾ ಕಲಾ ಸಮ್ಮೇಳನ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಭಾರತ ರತ್ನ ದಿ.ಕರ್ಪೂರಿ ಠಾಕೂರ್ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವೃತ್ತಿ ಆಧಾರದ ಮೇಲೆ ಜಾತಿ ವ್ಯವಸ್ಥೆ ಹುಟ್ಟಿಕೊಂಡಿದೆ. ಆದರೆ, ಮನುಷ್ಯನ ಹುಟ್ಟನ್ನು ಜಾತಿಯಿಂದ ಅಳೆಯಲಾಗುತ್ತಿದೆ. ಸವಿತಾ ಸಮಾಜದ ಬಂಧುಗಳಿಗೆ ಕೃಷಿ ಚಟುವಟಿಕೆ ಮಾಡಲು ಜಮೀನು ಇಲ್ಲ. ವೃತ್ತಿಯನ್ನೇ ಆಧರಿಸಿ ಬದುಕು ಸಾಗಿಸುತ್ತಿದ್ದಾರೆ. ಶೋಷಿತ ಸಮುದಾಯವಾಗಿರುವ ಇವರು ಸಮಾಜದಲ್ಲಿ ಕುಹಕಕ್ಕೆ ಒಳಗಾಗುತ್ತಿರುವುದು ಸರಿಯಲ್ಲ. ಸಾಮಾಜಿಕ ನ್ಯಾಯ ಮತ್ತು ಸಮಾನತೆ ಕೇವಲ ಬಾಯಿ ಮಾತಿಗೆ ಸೀಮಿತವಾಗಿದೆ.ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದ ಬಿಹಾರದ ಮಾಜಿ ಮುಖ್ಯಮಂತ್ರಿ ದಿ.ಕರ್ಪೂರಿ ರಾಠೋಡ್ ಅವರಿಗೆ ಭಾರತ ರತ್ನ ಕೊಟ್ಟಿರುವುದು ಸಂತಸದ ವಿಚಾರ ಎಂದು ಸಚಿವರು ವಿವರಿಸಿದರು.
ಸಮ್ಮೇಳನದಲ್ಲಿ ಸಮಾಜದ ಗಣ್ಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕುಂಚೂರಿನ ಸವಿತಾ ಪೀಠದ ಸವಿತಾನಂದ ಸ್ವಾಮೀಜಿ, ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್.ಪಾಟೀಲ್, ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಜಮೀರ್ ಅಹ್ಮದ್ ಖಾನ್, ಕರ್ನಾಟಕ ಚಿತ್ರಕಲಾ ಪರಿಷತ್‌ನ ಅಧ್ಯಕ್ಷ ಬಿ.ಎಲ್.ಶಂಕರ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜೈಪ್ರಕಾಶ್ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.
ಹಿಂದುಳಿದವರ ಕಲ್ಯಾಣಕ್ಕೆ ಜಾತಿಗಣತಿ:ರಾಜ್ಯದಲ್ಲಿ ಸರ್ಕಾರದ ಸವಲತ್ತು ಮತ್ತು ಅವಕಾಶಗಳಿಂದ ವಂಚಿತರಾದವರ ಸಂಖ್ಯೆ ಎಷ್ಟಿದೆ ಎಂಬುದನ್ನು ತಿಳಿಯಲು ಜಾತಿಗಣತಿ ನಡೆಸಲಾಗಿದೆ. ಇದಕ್ಕೆ ಸರ್ಕಾರವು 168 ಕೋಟಿ ರೂ. ಖರ್ಚು ಮಾಡಿದೆ. ಹಿಂದುಳಿದವರಿಗೆ ವಿಶೇಷ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಲು ವರದಿ ಸಹಕಾರಿಯಾಗಲಿದೆ. ವರದಿ ಸರ್ಕಾರದ ಕೈಸೇರುವ ಮುಂಚೆಯೇ ವಿರೋಧ ಮಾಡುವುದು ಸರಿಯಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.
2ಎ ವರ್ಗದಲ್ಲಿರುವ ಸವಿತಾ ಸಮುದಾಯ 114 ಜಾತಿಗಳ ನಡುವೆ ಕಳೆದುಹೋಗಿದೆ. ಸಮುದಾಯವನ್ನು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಮೇಲೆತ್ತಲು 1ಬಿ ವರ್ಗಕ್ಕೆ ಸೇರಿವುದು ಹಾಗೂ ಸವಿತಾ ಸಮಾಜದ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ರೂ. ಅನುದಾನ ನೀಡುವ ಬೇಡಿಕೆಯನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು. ಸಮುದಾಯದ ಪ್ರತಿಭಾವಂತರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡಲಾಗುವುದು
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen + 9 =
Remember me
