ಬೆಂಗಳೂರು:ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ 3ನೇ ಸಂಚು ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್​ ಮೂಲಕ ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
3ನೇ ಸಂಚು ಸಫಲಗೊಳಿಸಲು ಯತ್ನಅಮುಲ್ ಜತೆ ನಂದಿನಿ ವಿಲೀನ ಎಂಬ ಕೇಂದ್ರ ಗೃಹ ಸಚಿವ ಅಮಿತ್​ ಷಾ ಹೇಳಿಕೆ ಮೊದಲನೇ ಸಂಚು, ಮೊಸರಿನ ಪ್ಯಾಕೆಟ್​ ಮೇಲೆ ಹಿಂದಿಯ ದಹಿ ಪದ ಮುದ್ರಣ ಎರಡನೇ ಸಂಚು. ಆದರೆ, ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲವಾಯಿತು. ಇದೀಗ 3ನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಸರಕಾರ ಹೊರಟಿದೆ.
ಇದನ್ನೂ ಓದಿ:ಮಂಗನ ಹಿಂದೆ ಮರದಿಂದ ಮರಕ್ಕೆ ಜಿಗಿದ ಚಿರತೆ; ಐಎಫ್​ಎಸ್​ ಅಧಿಕಾರಿಯ ವಿಡಿಯೋ ವೈರಲ್
ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ನಡೆದಿದೆ 3ನೇ ಸಂಚು.
ಸಂಚು1: ಅಮುಲ್ ಜತೆ ನಂದಿನಿ ವಿಲೀನ; ಕೇಂದ್ರ ಗೃಹ ಸಚಿವ@AmitShahಹೇಳಿಕೆಸಂಚು2: ಮೊಸರಿನ ಮೇಲೆ ಹಿಂದಿಯ 'ದಹಿ' ಪದ ಮುದ್ರಣ
ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲ. 3ನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಸರಕಾರ ಹೊರಟಿದೆ. 1/10#ನಂದಿನಿಉಳಿಸಿ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)April 8, 2023

ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ ಎನ್ನುವುದು ಕೇಂದ್ರ ಸರಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್​​ಗೆ ಒತ್ತಾಸೆಯಾಗಿ ನಿಂತು ಕೆಎಂಎಫ್ ಕತ್ತು ಹಿಚುಕುತ್ತಿದೆ. ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ.
ಆಪೋಶನ ತೆಗೆದುಕೊಳ್ಳುವುದು ಖಚಿತಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್​​ನಲ್ಲಿಯೇ ಕರ್ನಾಟಕದಲ್ಲಿಯೇ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ. ವಿಲೀನಕ್ಕೆ, ಹಿಂದಿ ಹೇರಿಕೆಗೆ ಪ್ರಬಲ ಪ್ರತಿರೋಧ ಒಡ್ಡುತ್ತಿರುವ ಕನ್ನಡಿಗರು ಮತ್ತು ಕೆಎಂಎಫ್​​ನ ಕಥೆ ಮುಗಿಸಲೇಬೇಕು ಎಂದು ಅಮುಲ್ ಪಣ ತೊಟ್ಟಂತಿದೆ.
ಯಾರಿಗೂ ಹಿತವಲ್ಲಕೆಎಂಎಫ್ ಜತೆ ಅಮುಲ್ ಅನಗತ್ಯ ಸ್ಪರ್ಧೆ ನಡೆಸಿ ದಿನದಿಂದ ದಿನಕ್ಕೆ ನಂದಿನಿಯನ್ನು ತುಳಿಯುವ ಹುನ್ನಾರ ನಡೆಸುತ್ತಿದೆ, ಇದು ಸ್ಪಷ್ಟ. ಸಹಕಾರಿ ಕ್ಷೇತ್ರದ ಪ್ರಸಿದ್ಧ ಸೋದರ ಸಂಸ್ಥೆಗಳ ನಡುವೆ ಅನಾರೋಗ್ಯಕರ ಪೈಪೋಟಿ ಯಾರಿಗೂ ಹಿತವಲ್ಲ. ಕೆಎಂಎಫ್ ರಾಜ್ಯದ ಸಾವಿರಾರು ಗ್ರಾಮಗಳ ಸಹಕಾರ ಸಂಘಗಳ ಮೂಲಕ ರೈತರಿಂದಲೇ ಹಾಲನ್ನು ನೇರವಾಗಿ ಖರೀದಿಸುತ್ತದೆ.
ಹಲವು ಅನುಮಾನಬಿಜೆಪಿ ಡಬಲ್ ಎಂಜನ್ ಸರಕಾರ ನಮ್ಮ ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ. ಇದುರೆಗೂ ಇಷ್ಟೆಲ್ಲಾ ಆದರೂ ರಾಜ್ಯ ಬಿಜೆಪಿ ಸರ್ಕಾರದ ದಿವ್ಯಮೌನ, ಕೆಎಂಎಫ್ ನಿಷ್ಕ್ರಿಯತೆ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇದನ್ನೂ ಓದಿ:ಥಿಯೇಟರ್​ ಒಳಗೆ ನೋಡ ನೋಡ್ತಿದ್ದಂತೆ ಯುವಕ.. ಕಹಿ ಘಟನೆ ಬಿಚ್ಚಿಟ್ಟ ಲೈಂಗಿಕ ಶಿಕ್ಷಣದ ಯೂಟ್ಯೂಬರ್​
ಅಸಹಕಾರವನ್ನೇ ನಂಬಿದೆಗುಜರಾತಿನಲ್ಲಿ ಎಂದೂ ಕೆಎಂಎಫ್ ಹಾಲು ಮಾರಿದ್ದಿಲ್ಲ. ಅದು ಅಮುಲ್​​ನ ಸ್ಥಳೀಯ ಮಾರುಕಟ್ಟೆ ಹಿತ, ಸಹಕಾರಿ ತತ್ವವನ್ನು ಗೌರವಿಸಿದೆ. ಹಾಲು ಸಮೃದ್ಧಿ ಇರುವ ಯಾವುದೇ ಮಹಾಮಂಡಳದ ಸ್ಥಳೀಯ ವ್ಯಾಪ್ತಿಯಲ್ಲಿ ಕೆಎಂಎಫ್ ತನ್ನ ಹಾಲನ್ನು ಮಾರಲ್ಲ. ಕರ್ನಾಟಕ ನೈಜ ಸಹಕಾರ ತತ್ತ್ವ ನಂಬಿದ್ದರೆ, ಗುಜರಾತ್ ಅಸಹಕಾರವನ್ನೇ ನಂಬಿದೆ.
ಕನ್ನಡಿಗರಿಗೆ ಋಣಿಕನ್ನಡಿಗರಿಗೆ ಅಮುಲ್ ಋಣಿ ಇರಬೇಕು. ಎಚ್​.ಡಿ. ದೇವೇಗೌಡರು ಪ್ರಧಾನಿ ಆಗಿದ್ದಾಗ, ಎಚ್​.ಡಿ. ರೇವಣ್ಣ ಅವರು ಕೆಎಂಎಫ್ ಅಧ್ಯಕ್ಷರಾಗಿದ್ದಾಗ ಯಲಹಂಕ ಮದರ್ ಡೈರಿಯಲ್ಲಿ ವಿಶೇಷ ಐಸ್ ಕ್ರೀಮ್ ಘಟಕ ಸ್ಥಾಪಿಸಿ, ಈ ಘಟಕದಿಂದ ದಶಕಗಳಿಂದ ನಿತ್ಯವೂ ಕೆಎಂಎಫ್ ದೊಡ್ಡ ಪ್ರಮಾಣದಲ್ಲಿ ಅಮುಲ್ ಬ್ರ್ಯಾಂಡ್ ಐಸ್​ಕ್ರೀಮ್ ತಯಾರಿಸಿ ಈಗಲೂ ಕೊಡುತ್ತಿದೆ.
ಕೆಎಂಎಫ್​​ಗೆ ದೊಡ್ಡ ಖೆಡ್ಡಾಅಷ್ಟೇ ಅಲ್ಲ,‌ ರಾಜ್ಯ ಸರಕಾರವು ಗುಜರಾತ್ ಹಾಲು ಮಹಾಮಂಡಳಿ ಅಮುಲ್​ಗೆ ಬೆಂಗಳೂರಿನ ಕೋರಮಂಗಲದಲ್ಲಿ ಅತೀ ಕಡಿಮೆ ದರಕ್ಕೆ ಬೆಲೆ ಬಾಳುವ ಬೃಹತ್ ಜಾಗ ನೀಡಿದೆ. ಇಷ್ಟು ಔದಾರ್ಯ ತೋರಿದ ಕರ್ನಾಟಕ ಹಾಲು ಉತ್ಪಾದಕರು ಮತ್ತು ಕೆಎಂಎಫ್​​ಗೆ ದೊಡ್ಡ ಖೆಡ್ಡಾ ತೋಡಲು ಅಮುಲ್ ಹೊರಟಿದೆ.
ರೈತರ ಬದುಕನ್ನು ಕಾಪಾಡಬೇಕುಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ-ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು.
ಇದನ್ನೂ ಓದಿ:ನದಿಯಲ್ಲಿ ಬೈಕ್​ ಚಾಲನೆ! ಸವಾರನ ಹುಚ್ಚು ಸಾಹಸಕ್ಕೆ ಬೆರಗಾದ ನೆಟ್ಟಿಗರು, ವಿಡಿಯೋ ವೈರಲ್​
ಕನ್ನಡಿಗರು ಸಿಡಿದೇಳಬೇಕುಇಲ್ಲಿನ ಡಬಲ್ ಎಂಜಿನ್ ಬಿಜೆಪಿ ಸರಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್​ನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು ಎಂದು ಮಾಜಿ ಸಿಎಂ ಎಚ್​ಡಿಕೆ ಕರೆ ನೀಡಿದ್ದಾರೆ.
ಮಹತ್ವಾಕಾಂಕ್ಷೆಯ ಮುನ್ನೋಟ: ನೂತನ ಬಾಹ್ಯಾಕಾಶ ನೀತಿ ಅನಾವರಣ

ಪಿಯುಸಿ ಹಂತದಲ್ಲಿ ಇನ್ನಿರಲ್ಲ ಸೈನ್ಸ್, ಕಾಮರ್ಸ್, ಆರ್ಟ್ಸ್!

ಆಕಾಂಕ್ಷಿಗಳ ಪಟ್ಟು, ಕೈ ಇಕ್ಕಟ್ಟು: ದತ್ತ ಸವಾಲ್, ಜೆಡಿಎಸ್​ನತ್ತ ಆಚಾರ್, ತಹಸೀಲ್ದಾರ್…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 2 =
Remember me
