ಧಾರವಾಡ:ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಚೈತ್ರಾ ಕುಂದಾಪುರ ಮತ್ತಿತರ ಆರೋಪಿಗಳು ಸಿಕ್ಕಿಬಿದ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ.
ಚೈತ್ರಾ ಕುಂದಾಪುರ ಬಂಧನದ ಹಿಂದೆ ಷಡ್ಯಂತ್ರವಿದೆ. ಅವರು ಯಾವುದೋ ಷಡ್ಯಂತ್ರಕ್ಕೆ ಸಿಲುಕಿದ್ದಾರೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇಂದು ಧಾರವಾಡದಲ್ಲಿ ಈ ವಿಚಾರವಾಗಿ ಅವರು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.
ಪುನೀತ್ ಕೆರೆಹಳ್ಳಿ ಮೇಲೆ ಗೂಂಡಾ ಕಾಯ್ದೆ ಹಾಕಿದ್ದಾರೆ. ಇದು ಅವಶ್ಯಕತೆ ಇರಲಿಲ್ಲ. ಚೈತ್ರಾ ಕುಂದಾಪುರ ಕೃತ್ಯದ ಹಿಂದೆ ಸಂಶಯಾಸ್ಪದ ಚಟುವಟಿಕೆ ನಡೆದಿದೆ. ರಾಜ್ಯದಲ್ಲಿ ಅನೇಕ ಹಿಂದೂ ಕಾರ್ಯಕರ್ತರ ಮೇಲೆ ಪಿತೂರಿ ನಡೆಯುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಹೇಗೆ ಸಂಬಂಧ?: ಇಲ್ಲಿದೆ ಕಾಂಗ್ರೆಸ್​ ವಿವರಣೆ
ಹಾಲಪ್ಪಜ್ಜ ಸ್ವಾಮೀಜಿ ಅವರ ಹೆಸರೂ ಇದರಲ್ಲಿ ಕೇಳಿ ಬಂದಿದೆ. ಅವರನ್ನು ಹತ್ತಿರದಿಂದ ನಾನು ಬಲ್ಲೆ. ಅವರದ್ದೂ ದೊಡ್ಡ ಮಠ, ಅವರೂ ನಿರ್ದೋಷಿಯಾಗಿದ್ದಾರೆ. ವ್ಯವಸ್ಥಿತವಾಗಿ ಸಿಕ್ಕಿಸುವ ಪ್ರಯತ್ನ ನಡೆದಿದೆ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಯಲಿ. ಇದರ ಹಿಂದೆ ಏನೋ ಇದೆ. ಚೈತ್ರಾ ಈ ಕೃತ್ಯ ಮಾಡಿಲ್ಲ ಎಂಬುದು ನನ್ನ ಅಭಿಪ್ರಾಯ. ಅವರು ನಿರ್ದೋಷಿಯಾಗಿ ಹೊರಬರುತ್ತಾರೆ. ಪ್ರಕರಣದ ಕುರಿತು ಸಂಪೂರ್ಣ ತನಿಖೆ ಆಗಲಿ. ಅವರು ತಪ್ಪಿತಸ್ಥರಾಗಿದ್ದರೆ ಶಿಕ್ಷೆಯಾಗಲಿ. ಕೋರ್ಟ್ ಏನು ತೀರ್ಪು ನೀಡುತ್ತದೋ ಅದಕ್ಕೆ ನಾನು ಬದ್ಧ ಎಂದು ಮುತಾಲಿಕ್ ಹೇಳಿದ್ದಾರೆ.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ಹಿಂದೂ ಕಾರ್ಯಕರ್ತರನ್ನು ಕಾಂಗ್ರೆಸ್‌ನವರು ಸಿಲುಕಿ ಹಾಕಿಸುತ್ತಿದ್ದಾರೆ. ಕಾಂಗ್ರೆಸ್‌ನವರೇ ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದಿದ್ದರು. ಮತಾಂತರ, ಗೋಹತ್ಯೆ ಕಾನೂನು ವಾಪಸ್ ಪಡೆದುಕೊಳ್ಳುತ್ತೇವೆ ಎಂದಿದ್ದರು. ಈ ಬಗ್ಗೆ ಪ್ರಣಾಳಿಕೆಯಲ್ಲಿ ಹೇಳಿದ್ದರು. ಬಜರಂಗದಳ ಒಂದು ನೆಪ ಮಾತ್ರ. ಹಿಂದೂ ಸಂಘಟನೆಗಳನ್ನು ಬ್ಯಾನ್ ಮಾಡುವ ವಿಚಾರ ಅವರದ್ದಾಗಿದೆ ಎಂದು ಮುತಾಲಿಕ್ ಹೇಳಿದ್ದಾರೆ.
ಗೋವಿಂದಬಾಬು ಪೂಜಾರಿ ಇಂದಿರಾ ಕ್ಯಾಂಟೀನ್ ಸಂಬಂಧ ಇದು ನಡೆದಿದೆ. ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ ಕೂಸು. ಇದನ್ನು ಬಿಜೆಪಿಯವರಿಗೆ ಏಕೆ ಟೆಂಡರ್ ಕೊಟ್ಟರು? ಎಂದೂ ಮುತಾಲಿಕ್ ಪ್ರಶ್ನೆ ಮಾಡಿದ್ದಾರೆ.

ಪ್ರೀತಿ ಇದ್ದರೂ ಪತ್ನಿ ಯಾಕೆ ಪತಿಯಿಂದ ವಿಮುಖಳಾಗುತ್ತಾಳೆ?; ಇದು ವಿವಾಹಿತರಿಗೊಂದು ಕಿವಿಮಾತು, ಎಚ್ಚರಿಕೆ ಕೂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 3 =
Remember me
