|ಪಿ.ಬಿ.ಹರೀಶ್ ರೈಮಂಗಳೂರು
ಬಿಜೆಪಿ ವಶದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ 3, ಉಡುಪಿ ಜಿಲ್ಲೆಯ 5 ಕ್ಷೇತ್ರಗಳ ಪೈಕಿ 1 ಕ್ಷೇತ್ರ ಕಾಂಗ್ರೆಸ್ ಪಾಲಾಗುವ ಸಾಧ್ಯತೆಗಳಿವೆ ಎನ್ನುವ ಪಕ್ಷದ ಆಂತರಿಕ ಸಮೀಕ್ಷೆ ವಿವರ ಕೇಸರಿ ಪಕ್ಷಕ್ಕೆ ಆತಂಕವನ್ನು ಉಂಟು ಮಾಡಿದೆ. ಈ ಸಮೀಕ್ಷೆ ವರದಿಯಿಂದ ಕಮಲ ಪಾಳಯ ಕೊಂಚ ಆತಂಕದಲ್ಲಿದ್ದು, ಇದೇ ಹಿನ್ನೆಲೆಯಲ್ಲಿ ಕೇಸರಿ ಪಾಳಯಕ್ಕೆ ರಣೋತ್ಸಾಹ ತುಂಬಲು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಮಹತ್ವದ ಸಭೆ ಮಂಗಳೂರಿನಲ್ಲಿ ಶನಿವಾರ ನಿಗದಿಯಾಗಿದೆ. ಷಾ ತಂತ್ರಗಾರಿಕೆಯಿಂದ ಉಂಟಾಗಬಹುದಾದ ಸಂಚಲನದ ಬಗ್ಗೆ ಕಾಂಗ್ರೆಸ್ ವಲಯದಲ್ಲೂ ಕುತೂಹಲವಿದೆ.
ರಾಜ್ಯದಲ್ಲಿ ಶತಾಯಗತಾಯ ಮತ್ತೆ ಅಧಿಕಾರದ ಗದ್ದುಗೆ ಏರುವುದು ಬಿಜೆಪಿಯ ಗುರಿ. ಆದರೆ ಪಕ್ಷದ ವತಿಯಿಂದ ಇತ್ತೀಚೆಗೆ ನಡೆದ ಆಂತರಿಕ ಸಮೀಕ್ಷೆಗಳ ಪ್ರಕಾರ ಬಿಜೆಪಿ ಗೆಲ್ಲುವ ಕ್ಷೇತ್ರಗಳ ಸಂಖ್ಯೆ 90ರ ಆಸುಪಾಸಿನಲ್ಲಿದೆ. ಬಿಜೆಪಿಯ ಶಕ್ತಿ ಕೇಂದ್ರ ಎಂದೇ ಬಿಂಬಿತವಾದ ಕರಾವಳಿಯಲ್ಲೂ ಕೆಲವು ಸ್ಥಾನ ಕಳಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದ್ದು, ಆಂತರಿಕ ಸರ್ವೆಯ ಮಾಹಿತಿ ‘ವಿಜಯವಾಣಿ’ಗೆ ಲಭ್ಯವಾಗಿದೆ.
ತಲಾ 4 ಕ್ಷೇತ್ರ ಸಲೀಸು:2018ರ ಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಕರಾವಳಿಯ ಅವಳಿ ಜಿಲ್ಲೆಗಳಲ್ಲಿ ಪಾರಮ್ಯ ಮೆರೆದಿತ್ತು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯ ಬೇಕಿದ್ದರೆ ಕರಾವಳಿಯಲ್ಲಿ ಗರಿಷ್ಠ ಪ್ರಮಾಣದ ಕ್ಷೇತ್ರಗಳನ್ನು ಮತ್ತೆ ವಶಪಡಿಸಿಕೊಳ್ಳಲೇ ಬೇಕು ಎನ್ನುವುದು ವರಿಷ್ಠರ ನಿಲುವು. ಅದರೆ ಬಿಜೆಪಿ ನಡೆಸಿರುವ ಆಂತರಿಕ ಸಮೀಕ್ಷೆ ಪ್ರಕಾರ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ತಲಾ 4 ಕ್ಷೇತ್ರಗಳಲ್ಲಿ ಸಲೀಸಾಗಿ ಗೆಲುವು ಸಾಧಿಸಬಹುದು. ದ.ಕ. ಜಿಲ್ಲೆಯ 3 ಹಾಗೂ ಉಡುಪಿಯ ಒಂದು ಕ್ಷೇತ್ರದಲ್ಲಿ ಜಿದ್ದಾಜಿದ್ದಿಯ ಹೋರಾಟವಿದ್ದು, ಸೋಲುವ ಸಾಧ್ಯತೆಯೂ ಇದೆ ಎಂದು ಸಮೀಕ್ಷೆ ತಿಳಿಸಿದೆ.
ಗೆಲ್ಲುವ ವಿಶ್ವಾಸ:ಪಕ್ಷ ಸಂಘಟನಾತ್ಮಕವಾಗಿ ಬೂತ್ ಮಟ್ಟದಿಂದಲೇ ಬಲಿಷ್ಠವಾಗಿದ್ದು, ಎಲ್ಲ ಕ್ಷೇತ್ರಗಳಲ್ಲೂ ಗೆಲುವು ಸಾಧಿಸುವ ವಿಶ್ವಾಸ ಹೊಂದಿದ್ದೇವೆ. ಚುನಾವಣೆಗೆ ಪಕ್ಷ ಎಲ್ಲ ರೀತಿಯಲ್ಲಿ ಸಜ್ಜಾಗಿದೆ ಎಂದು ಬಿಜೆಪಿ ದ.ಕ. ಜಿಲ್ಲಾ ಅಧ್ಯಕ್ಷ ಸುದರ್ಶನ ಮೂಡುಬಿದಿರೆ, ಉಡುಪಿ ಜಿಲ್ಲಾ ಅಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹೊಸ ಪ್ರಯೋಗದ ಆತಂಕ:ಬಿಜೆಪಿಯ ಭದ್ರಕೋಟೆ ಎಂದು ಗುರುತಿಸಿ ಕೊಂಡ ಸುಳ್ಯ ಮತ್ತು ಪುತ್ತೂರು ಕ್ಷೇತ್ರಗಳಲ್ಲೇ ಪಕ್ಷ ಆತಂಕ ಎದುರಿಸುತ್ತಿದೆ. ಸುಳ್ಯದಲ್ಲಿ ಸತತ 6 ಬಾರಿ ಗೆದ್ದಿರುವ ಎಸ್.ಅಂಗಾರ ಬದಲು ಹೊಸ ಅಭ್ಯರ್ಥಿ ಕಣಕ್ಕಿಳಿಸುವ ವದಂತಿ ಇದೆ. ಹೊಸ ಪ್ರಯೋಗ ನಡೆಸಿದರೆ ಕ್ಷೇತ್ರ ಕೈ ತಪ್ಪುವ ಸಾಧ್ಯತೆ ಇದೆ ಎನ್ನುವ ಆತಂಕ ಇದೆ. ಪುತ್ತೂರು ಕ್ಷೇತ್ರದಲ್ಲೂ ಪಕ್ಷ ಎಚ್ಚರಿಕೆ ಹೆಜ್ಜೆ ಇರಿಸಬೇಕಾದ ಸ್ಥಿತಿಯಲ್ಲಿದೆ. ಅಲ್ಪಸಂಖ್ಯಾತರ ಮತ ಹೆಚ್ಚಿರುವ ಮಂಗಳೂರು ನಗರ ಉತ್ತರ, ಬಂಟ್ವಾಳ ಹಾಗೂ ಉಡುಪಿ ಜಿಲ್ಲೆಯ ಬೈಂದೂರು, ಕಾಪು ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಬಲ ಹೋರಾಟ ನೀಡಲಿದೆ. ಮಂಗಳೂರು ಕ್ಷೇತ್ರದಲ್ಲಿ ಈ ಬಾರಿಯೂ ಬಿಜೆಪಿಗೆ ಗೆಲುವು ಅಸಾಧ್ಯ ಎನ್ನುವ ಸ್ಥಿತಿ ಇದೆ ಎಂದು ಸಮೀಕ್ಷೆಯಲ್ಲಿ ವಿವರಿಸಲಾಗಿದೆ.
ತನ್ನ ನೆಚ್ಚಿನ ನಾಯಕ ಸಿಎಂ ಆಗಲೆಂದು 25 ವರ್ಷದಿಂದ ಗಡ್ಡ ಬಿಟ್ಟ ಅಭಿಮಾನಿ!

ಭೀಕರ ಅಪಘಾತ: ಕೆಟ್ಟು ನಿಂತಿದ್ದ ಕ್ಯಾಂಟರ್​ಗೆ ಬುಲೆಟ್ ಡಿಕ್ಕಿ, ಯುವಕ-ಯುವತಿ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + fifteen =
Remember me
