ಉಡುಪಿ:ರಾಜ್ಯದಲ್ಲಿ ಕೆಲವು ದಿನಗಳಲ್ಲಿ ಮೇಲಿಂದ ಮೇಲೆ ನಡೆದ ಹತ್ಯೆಗಳ ಹಿನ್ನೆಲೆಯಲ್ಲಿ ಇಂದು ಉಡುಪಿಯಲ್ಲಿ ಮಾತನಾಡಿರುವ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದು, ಎಲ್ಲ ಕೊಲೆಗಳಲ್ಲೂ ಒಂದು ಸಾಮ್ಯತೆ ಇರುವುದರ ಕುರಿತು ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಈ ಕೊಲೆಗಳಿಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ್ದರ ಬಗ್ಗೆಯೂ ಹೇಳಿಕೊಂಡಿರುವ ಅವರು, ಈ ಕೊಲೆಗಳಿಗೆ ತರಬೇತಿ ಎಲ್ಲಿ ಸಿಗುತ್ತಿದೆ, ಇವುಗಳಿಗೆ ಹಣಕಾಸಿನ ನೆರವು ನೀಡುತ್ತಿರುವವರು ಯಾರು, ಕರ್ನಾಟಕದಲ್ಲಿ ಅವರಿಗೆ ಸ್ಥಳೀಯವಾಗಿ ಬೆಂಬಲಿಸುತ್ತಿರುವವರು ಯಾರು ಎಂಬ ವಿಚಾರಗಳ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕೋರಿದ್ದಾಗಿ ತಿಳಿಸಿದರು. ಅಲ್ಲದೆ ರಾಜ್ಯದಲ್ಲಿ ಪೊಲೀಸರ ಸಂಖ್ಯೆಯನ್ನು ಹೆಚ್ಚಿಸಬೇಕು ಎಂಬುದೂ ಸೇರಿದಂತೆ ಹಲವಾರು ಬೇಡಿಕೆಗಳನ್ನು ಷಾ ಅವರ ಮುಂದಿಟ್ಟಿದ್ದು, ಅವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂಬುದನ್ನು ತಿಳಿಸಿದ್ದಾರೆ.
ನಿರಂತರವಾಗಿ ಹಿಂದು ಯುವಕರನ್ನು ಮತಾಂಧರು ಕಗ್ಗೊಲೆಗೈಯುತ್ತಿದ್ದಾರೆ. ಈ ಎಲ್ಲ ಕೊಲೆಗಳಲ್ಲೂ ಒಂದು ಸಾಮ್ಯತೆ ಇದೆ, ಎಲ್ಲರನ್ನೂ ಕತ್ತು ಕತ್ತರಿಸಿ ಕೊಲೆ ಮಾಡಲಾಗಿದೆ, ಕರ್ನಾಟಕದಲ್ಲಿ ಕೇರಳ ಮಾದರಿಯ ಹತ್ಯೆ ನಡೆಯುತ್ತಿದೆ ಎಂಬುದಾಗಿ ಸಂಸದೆ ಶೋಭಾ ಅಭಿಪ್ರಾಯಪಟ್ಟಿದ್ದಾರೆ.
ಮನೆ ಮೇಲೇ ಕುಸಿದ ಗುಡ್ಡ, ಮಕ್ಕಳಿಬ್ಬರು ಮಣ್ಣಿನಡಿ ಸಿಲುಕಿ ಸಾವು..

ಜಿರಳೆ ಸಾಯಿಸಲು ಹೋಗಿ ಆರು ವರ್ಷದ ಬಾಲಕಿಯ ಸಾವಿಗೆ ಕಾರಣನಾದ ಮನೆ ಮಾಲೀಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 2 =
Remember me
