ಬೆಂಗಳೂರು:ಕರ್ನಾಟಕ ಇಡೀ ಏಷ್ಯಾದಲ್ಲೇ ಅತೀ ಹೆಚ್ಚು ಎಥನಾಲ್ ಉತ್ಪಾದನೆ ಮಾಡುವ ರಾಜ್ಯವಾಗಿದ್ದು, ಈ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಉದ್ಯಮಿಗಳು ಮುಂದೆ ಬರಬೇಕು ಎಂದು ಎಂಆರ್‌ಎನ್ ಸಮೂಹದ ವ್ಯವಸ್ಥಾಪಕ ನಿರ್ದೇಶಕ ವಿಜಯ್ ನಿರಾಣಿ ಮನವಿ ಮಾಡಿದ್ದಾರೆ.
ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಇಂಧನ ಕ್ಷೇತ್ರ ಕುರಿತ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡೀಸೆಲ್‌ ಮತ್ತು ಪೆಟ್ರೋಲ್ ದರ ದಿನೇದಿನೇ ಹೆಚ್ಚುತ್ತಿದ್ದು, ಈ ತೈಲಗಳ ಮೇಲಿನ ಅವಲಂಬನೆ ಕಡಿಮೆ ಆಗಬೇಕು. ಅದಕ್ಕಿರುವ ಪರ್ಯಾಯ ಮಾರ್ಗ ಎಥನಾಲ್ ಬಳಕೆ. ಪರಿಸರ ಸ್ನೇಹಿ ಎಥನಾಲ್‌ ಹೆಚ್ಚುತ್ತಿರುವ ಜಾಗತಿಕ ತಾಪಮಾನ ತಡೆಗಟ್ಟಲು ಸಹಕಾರಿ ಎಂದು ಹೇಳಿದರು.
ಕಬ್ಬಿನಿಂದ ಸಕ್ಕರೆ ಉತ್ಪಾದನೆ ಮಾತ್ರವಲ್ಲದೇ, ಎಥೆನಾಲ್ ಸೇರಿದಂತೆ ಕಬ್ಬಿನ ಹಲವಾರು ಉಪ ಉತ್ಪನ್ನಗಳನ್ನು ತಯಾರಿಸಬಹುದು. ಪೆಟ್ರೋಲ್‌, ಡೀಸೆಲ್‌ ಜತೆಗೆ 20 ಪ್ರತಿಶತ ಎಥೆನಾಲ್ ಮಿಶ್ರಣದ ಗುರಿಯನ್ನು ಸಾಧಿಸುವ ಪ್ರಧಾನಿ ಮೋದಿಯವರ ಆಶಯವನ್ನು ನಾವು ಈಗಾಗಲೇ ಸಾಧಿಸಿದ್ದೇವೆ. ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಪೂರೈಸುವ ಸಾಮರ್ಥ್ಯವನ್ನು ಗಳಿಸಿದ್ದೇವೆ ಎಂದರು.
ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಎಂಆರ್‌ಎನ್‌ ಸಮೂಹ ಕೆಲಸ ಮಾಡುತ್ತಿದೆ. ಕಬ್ಬಿನ ಉಪ ಉತ್ಪನ್ನಗಳ ಬಳಕೆ, ಕೃಷಿ ಆಧಾರಿತ ಉದ್ಯಮಕ್ಕೆ ಒತ್ತು ನೀಡಿದ್ದೇವೆ. ಜತೆಗೆ, ಡೀಸೆಲ್ ಇಂಜಿನ್‌ಗಳನ್ನು ಬಯೋ-ಸಿಎನ್‌ಜಿ ಇಂಜಿನ್‌ ಟ್ರ್ಯಾಕ್ಟರ್‌ಗಳಾಗಿ ಪರಿವರ್ತಿಸುವ ಮೂಲಕ ಅವರ ರೈತರ ಆರ್ಥಿಕ ಹೊರೆ ತಗ್ಗಿಸುವಲ್ಲಿ ನೆರವಾಗುತ್ತಿದ್ದೇವೆ ಎಂದರು.
ಮುಂಬರುವ ದಿನಗಳಲ್ಲಿ ಎಲೆಕ್ಟ್ರಾನಿಕ್ ವಸ್ತು ರಫ್ತು ಮಾಡುವಲ್ಲಿ ಭಾರತ ಮುಂಚೂಣಿಗೆ ಬರುವ ಕನಸು ನನಸು ಆಗುವಲ್ಲಿ ಕರ್ನಾಟಕ ಪ್ರಮುಖ ಪಾತ್ರ ವಹಿಸಲಿದೆ. ಮುಖ್ಯವಾಗಿ, ಎಲೆಕ್ಟ್ರಾನಿಕ್ಸ್ ವಸ್ತುಗಳ ಆಮದನ್ನು ತಗ್ಗಿಸುವುದು ನಮ್ಮ ಮುಂದಿನ ಗುರಿಯಾಗಬೇಕು.ಈ ಮೊದಲು ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಕೋಟಿ ರೂ. ಬಂಡವಾಳ ಹರಿದು ಬರುವ ನಿರೀಕ್ಷೆ ಇತ್ತು. ಈಗ ನಮ್ಮ ನಿರೀಕ್ಷೆಗೂ ಮೀರಿ ಮೊತ್ತ ದುಪ್ಪಟ್ಟಾಗುವ ಸಾಧ್ಯತೆ ಇದೆ. ಇದರಿಂದ ಕರ್ನಾಟಕ ‌ಉದ್ಯಮ ಸ್ನೇಹಿ ರಾಜ್ಯ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಅಗ್ರಮಾನ್ಯ ಉದ್ಯಮಿಗಳನ್ನು ಒಂದೇ ವೇದಿಕೆಯಡಿ ಕರೆ ತರುವಲ್ಲಿ ಈ ಸಮಾವೇಶ ಯಶಸ್ವಿಯಾಗಿದೆ ಎಂದರು.
ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯ್ಕ್, ಪೆಟ್ರೋನಸ್ ಹೈಡ್ರೋಜನ್ ಕಂಪನಿ ಸಿಇಓ ಅದ್ಲಾನ್ ಅಹ್ಮದ್, ಹಿಟಾಚಿ ಎನರ್ಜಿ ಕಂಪನಿ ವ್ಯವಸ್ಥಾಪಕ ನಿರ್ದೇಶಕ ವೇಣು ನುಗೂರಿ ಭಾಗವಹಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 4 =
Remember me
