ಆನೇಕಲ್:ಹೊಸ ವರ್ಷದ ಹಿನ್ನೆಲೆಯಲ್ಲಿ ವಿವಿಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಕುಟುಂಬ ಸಮೇತರಾಗಿ ಆಗಮಿಸುತ್ತಿದ್ದಾರೆ. ಈ ಬಾರಿಯ ವಾರಾಂತ್ಯದ ಸಂಭ್ರಮಕ್ಕೆ ಹೊಸ ವರ್ಷಾಚರಣೆ ಹೆಚ್ಚಿಸಿದೆ. ಹೀಗಾಗಿ ಇಂದು ಬಹುತೇಕ ಮಂದಿ ಸುತ್ತಾಟದಲ್ಲಿ ಬಿಝಿಯಾಗಿದ್ದಾರೆ. ವಿವಿಧ ಸ್ಥಳಗಳಿಗೆ ತೆರಳಿ ಹೊಸ ವರ್ಷವನ್ನು ಸಂಭ್ರಮಿಸುತ್ತಿದ್ದಾರೆ.
ಕರೋನಾ, ಲಾಕ್​ಡೌನ್ ಕಾರಣಗಳಿಂದ ಕಳೆದ ಎರಡು ವರ್ಷಗಳಿಂದ ಹೊಸ ವರ್ಷದ ಸಂಭ್ರಮಾಚರಣೆ ಕಳೆಗುಂದಿತ್ತು. ಆದರೆ 2023ರ ಸಂಭ್ರಮಾಚರಣೆ ಜೋರಾಗಿ ನಡೆಯುತ್ತಿದೆ. ಇದೇ ಕಾರಣದಿಂದ ಇದೀಗ ಪ್ರವಾಸಿ ಸ್ಥಳಗಳಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಅದರಲ್ಲೂ ಪ್ರವಾಸಿಗರ ಆಕರ್ಷಣೀಯ ಸ್ಥಳವಾದ ಬನ್ನೇರುಘಟ್ಟ ಉದ್ಯಾನವನಕ್ಕೆ ಇಂದು (ಜ.01) ದಾಖಲೆಯ 15 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದಾರೆ.
ಬೆಳಗ್ಗೆಯಿಂದಲೇ ಸಾಗರೋಪಾದಿಯಲ್ಲಿ ಪ್ರವಾಸಿಗರು ಬನ್ನೇರುಘಟಕ್ಕೆ ಆಗಮಿಸುತ್ತಿದ್ದಾರೆ. ಸಂಜೆಯ ವೇಳೆಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ 20 ಸಾವಿರ ದಾಟಬಹುದು ಎಂದು ಹೇಳಲಾಗುತ್ತಿದೆ. ಕಳೆದ ಅಕ್ಟೋಬರ್​ನಲ್ಲಿ ದಸರಾ ಹಬ್ಬದ ರಜೆಯ ಸಂದರ್ಭದಲ್ಲಿ ದಾಖಲೆಯ ಸಂಖ್ಯೆಯಲ್ಲಿ ಬನ್ನೇರುಘಟಕ್ಕೆ ಪ್ರವಾಸಿಗರು ಆಗಮಿಸಿದ್ದರು.
ಇದೀಗ ಒಂದೇ ದಿನ ಸುಮಾರು 15 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಹೊಸ ವರ್ಷದಂದು ಭೇಟಿ ನೀಡಿದ್ದಾರೆ. ಬೆಳಗ್ಗೆಯಿಂದಲೇ ಕುಟುಂಬ ಸಮೇತರಾಗಿ ಪ್ರವಾಸಿಗರು ಬನ್ನೇರುಘಟ್ಟಕ್ಕೆ ಆಗಮಿಸುತ್ತಿರುವುದರಿಂದ ಒಂದೇ ದಿನ ಬರೋಬ್ಬರಿ 35 ಲಕ್ಷ ರೂ. ಆದಾಯ ಸಂಗ್ರಹವಾಗಿದೆ. ದಿನದ ಮುಕ್ತಾಯದ ವೇಳೆಗೆ 40 ಲಕ್ಷ ರೂ. ದಾಟುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + three =
Remember me
