ಬೆಂಗಳೂರು:ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಹೊತ್ತಿನಲ್ಲೇ ಕಾಂಗ್ರೆಸ್​ನಲ್ಲಿ ಗೊಂದಲ ಗೋಜಲು ಸೃಷ್ಟಿಯಾಗಿದ್ದು, ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಇಂದು (ಜ.26) ಮಹತ್ವದ ಸಭೆ ನಡೆಯಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಪಕ್ಷದ ಕಚೇರಿಯಲ್ಲಿ ಪ್ರಮುಖರ ಜತೆ ಸಮಾಲೋಚಿಸಲಿದ್ದಾರೆ. ಪ್ರಮುಖವಾಗಿ ನಿಗಮ, ಮಂಡಳಿ ನೇಮಕಕ್ಕೆ ಸಂಬಂಧಿಸಿದಂತೆ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ಇದು ಅಂತಿಮಗೊಳ್ಳುವ ಸಾಧ್ಯತೆ ಇದೆ.
ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ವಿರುದ್ಧವೇ ಸಚಿವರು ಅಸಮಾಧಾನ ಹೊರಹಾಕಿದ್ದು, ಇದು ಇನ್ನಷ್ಟು ತೀವ್ರಗೊಳ್ಳುವ ಮೊದಲು ಪರಿಸ್ಥಿತಿ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಅನಿವಾರ್ಯತೆ ಅಧ್ಯಕ್ಷರಿಗೆ ಎದುರಾಗಿದೆ. ನಿಗಮ, ಮಂಡಳಿ ನೇಮಕದಲ್ಲಿ ನಮ್ಮನ್ನೂ ಪರಿಗಣಿಸಬೇಕೆಂಬ ಸಂಪುಟದ ಅರ್ಧದಷ್ಟು ಸಚಿವರ ಬೇಡಿಕೆಯೂ ಪಕ್ಷಕ್ಕೆ ತಲೆಬೇನೆ ತಂದಿದೆ.
ಇನ್ನೊಂದು ಮಹತ್ವದ ಸಂಗತಿ ಎಂದರೆ, ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಸರ್ವೆ ಆರಂಭಿಸಲಾಗುತ್ತಿದೆ. ಈ ವೇಳೆ, ಸಮರ್ಥರು ಸಿಗದೇ ಹೋದರೆ ಸಚಿವರೇ ಕಣಕ್ಕಿಳಿಯಬೇಕೆಂಬ ಸುರ್ಜೆವಾಲಾ ಅವರ ತಾಕೀತು ಅನೇಕ ಸಚಿವರಿಗೆ ಅಸಮಾಧಾನ ತಂದಿದೆ. ನಾವು ಚುನಾವಣೆಯಲ್ಲಿ ಗೆದ್ದು ಸಚಿವರಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಗೆಲ್ಲಿಸಲು ಪ್ರಯತ್ನ ಮಾಡುತ್ತೇವೆ. ಸೋತರೆ ತಲೆ ದಂಡ ಅಥವಾ ಸಚಿವರೇ ಕಣಕ್ಕಿಳಿಯಬೇಕೆಂಬ ಹಠ ಒಪ್ಪಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ಕ್ರೋಡೀಕರಿಸುವ ಕಾರ್ಯವೂ ನಡೆದಿದೆ.
ಕೆಲವು ಸಚಿವರು ಸುರ್ಜೆವಾಲಾ ವಿರುದ್ಧ ಗುರುತರ ಆರೋಪ ಪಟ್ಟಿ ಕೂಡ ಸಿದ್ಧ ಮಾಡಿಕೊಂಡಿದ್ದಾರೆ ಎಂಬ ಚರ್ಚೆ ನಡೆದಿದೆ. ವಿಧಾನಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವೇಳೆ ನಡೆದಿರುವ ಬೆಳವಣಿಗೆ ಬಗ್ಗೆ ರಂಗುರಂಗಿನ ಚರ್ಚೆ ಕೆಪಿಸಿಸಿ ಕಚೇರಿಯಲ್ಲೇ ನಡೆಯುತ್ತಿದೆ. ಇತ್ತೀಚಿನ ಬೆಳವಣಿಗೆ ಕುರಿತು ಗೃಹ ಸಚಿವ ಜಿ.ಪರಮೇಶ್ವರ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ಸಹಕಾರ ಸಚಿವ ರಾಜಣ್ಣ ಕೂಡ ಬಹಿರಂಗವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಕುಳಿತು ಪಟ್ಟಿ ಮಾಡಿ ಲಾಟರಿ ಟಿಕೆಟ್ ಹಂಚಿದಂತೆ ನಿಗಮ ಮಂಡಳಿ ಹಂಚಿದರೆ ಹೇಗೆ, ದೆಹಲಿಯಲ್ಲಿ ಕುಳಿತು ಪಟ್ಟಿ ಮಾಡುವುದಾ ಅಥವಾ ನಮ್ಮನ್ನು ಕೇಳಿ ಪಟ್ಟಿ ಮಾಡುವುದಾ? ಒಂದು ಮಾತಾದರೂ ಕೇಳಬೇಕಲ್ಲ ಎಂದು ಸುರ್ಜೆವಾಲಾ ವಿರುದ್ಧ ಅಸಹನೆ ಹೊರಹಾಕಿದ್ದಾರೆ. ಸವಾರಿ ಮಾಡುವುದನ್ನು ಸಹಿಸುವುದಿಲ್ಲ ಎಂಬ ಅವರ ಕಠೋರ ಪದ ಬಳಕೆ, ಪರಿಸ್ಥಿತಿಯ ಗಂಭೀರತೆ ಅರ್ಥಮಾಡಿಸುವಂತಿಲ್ಲ.
ಸುಮ್ಮನಿರಲು ನಾವೇನು ಗುಲಾಮರಲ್ಲ!:ನಿಗಮ, ಮಂಡಳಿ ಅಧ್ಯಕ್ಷರ ನೇಮಕಾತಿಯಲ್ಲಿ ಹಸ್ತಕ್ಷೇಪ ವಿಚಾರವಾಗಿ ಪಕ್ಷದ ಹೈಕಮಾಂಡ್ ವಿರುದ್ಧ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಿಡಿದೆದ್ದಿದ್ದು, ನಾವೇನು ಗುಲಾಮರಲ್ಲ. ಇಂಥದ್ದನ್ನೆಲ್ಲ ಸಹಿಸುವುದೂ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ದೆಹಲಿಯಲ್ಲಿ ಕುಳಿತು ಪಟ್ಟಿ ಮಾಡಿ ಲಾಟರಿ ಟಿಕೆಟ್ ಹಂಚಿದರೆ ಹೇಗೆ? ಸ್ಥಳೀಯವಾಗಿ ಯಾರು ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿರುತ್ತದೆ. ನಾವು ಅದನ್ನೆಲ್ಲಾ ಸಹಿಸೋದಿಲ್ಲ, ಸುಮ್ಮನೆ ಕುಳಿತುಕೊಳ್ಳಲು ನಾವೇನು ಗುಲಾಮರಲ್ಲ ಎಂದು ಎಚ್ಚರಿಸಿದರು. ಸಿಎಂ ಹಾಗೂ ಪಕ್ಷದ ಅಧ್ಯಕ್ಷರು ರ್ಚಚಿಸಿ ನೇಮಕಾತಿ ಮಾಡುವುದು ಸಂಪ್ರದಾಯ, ದೆಹಲಿಯಿಂದ ಪಟ್ಟಿ ಕಳುಹಿಸುವುದು ಸಂಪ್ರದಾಯವಲ್ಲ, ಅಲ್ಲಿಂದಲೇ ಮಾಡುವುದಾದರೇ ಅವರೇ ಸಿಎಂ ಆಗಲಿ, ಯಾರು ಬೇಡ ಎಂದಿದ್ದಾರೆ ಎಂದು ಗುಡುಗಿದರು.
ಪಕ್ಷದ ಹೈಕಮಾಂಡ್ ಒಪ್ಪಿಗೆ ಸೂಚಿಸಿದ ಕೂಡಲೇ ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು. ನೇಮಕಾತಿ ಎಲ್ಲ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹೈಕಮಾಂಡ್ ಒಪ್ಪಿಗೆ ಮಾತ್ರ ಬಾಕಿ ಇದೆ.
| ಸಿದ್ದರಾಮಯ್ಯ ಮುಖ್ಯಮಂತ್ರಿ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:10 + seventeen =
Remember me
