ವಿಜಯಪುರ :ಒಂದು ಎಲೆಕ್ಷನ್​​ಗಿಂತ ಇನ್ನೊಂದು ಎಲೆಕ್ಷನ್ ಭಿನ್ನವಾಗಿರುವುದರಿಂದ ಎಲ್ಲರಿಗೂ ನೂರಕ್ಕೆ ನೂರು ಟಿಕೆಟ್ ಕೊಟ್ಟ ಉದಾಹರಣೆಗಳಿಲ್ಲ, ಸಮೀಕ್ಷೆ, ಶಾಸಕರ ಕಾರ್ಯವೈಖರಿ ಸೇರಿ ಎಲ್ಲಾ ಮಾನದಂಡಗಳನ್ನು ನೋಡಿಕೊಂಡು ಟಿಕೆಟ್ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.
ವಿಜಯಪುರದ ಚಿಕ್ಕಗಲಗಲಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಲಿ ಶಾಸಕರಿಗೆ ಟಿಕೆಟ್ ತಪ್ಪಲಿದೆ ಎನ್ನುವ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಯಡಿಯೂರಪ್ಪನವರು ಸಂಸದೀಯ ಮಂಡಳಿ ಸದಸ್ಯರು. ಅವರಿಗೆ ಮಾಹಿತಿ ಇರಬಹುದು. 70 ವಯಸ್ಸು ದಾಟಿದವರಿಗೆ ಟಿಕೆಟ್ ನೀಡಬೇಕೇ? ಬೇಡವೇ? ಎನ್ನುವ ವಿಚಾರ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರತಿಯೊಂದು ಕ್ಷೇತ್ರದ ಕುರಿತು ಸಂಸದೀಯ ಮಂಡಳಿಯಲ್ಲಿ ಚರ್ಚೆ ನಡೆಯುತ್ತಿದೆ. ಆದರೆ, ನೂರಕ್ಕೆ ನೂರರಷ್ಟು ಎಲ್ಲರಿಗೂ ಟಿಕೆಟ್ ಸಿಗುತ್ತದೆ ಅಂತ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.
ಇದನ್ನೂ ಓದಿ:ಬೆಂಕಿ ಶಮನ ಕಾರ್ಯ ಬಿರುಸು, ಮೂರು ದಿನ ಕಳೆದರೂ ಆರದ ಕಾಡ್ಗಿಚ್ಚು, ಚಾರ್ಮಾಡಿ ಘಾಟ್‌ನಲ್ಲಿ ನೂರಾರು ಪ್ರಾಣಿ, ಪಕ್ಷಿಗಳು ಆಹುತಿ ಶಂಕೆ
ಇದೇ ವೇಳೆ ಶಾಸಕ ಮಾಡಾಳ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ಕುರಿತಂತೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಪ್ರಕರಣದ ವಿಚಾರದಲ್ಲಿ ತನಿಖೆ ನಡೆಸಲು ಲೋಕಾಯುಕ್ತರು ಸರ್ವ ಸ್ವತಂತ್ರರು. ನ್ಯಾಯಾಲಯ ತೀರ್ಮಾನಕ್ಕೆ ನಾವೆಲ್ಲಾ ತಲೆ ಬಾಗಬೇಕಾಗುತ್ತದೆ. ಇದರ ನಂತರ ಲೋಕಾಯುಕ್ತರು ಮುಂದಿನ ತನಿಖೆ ನಡೆಸಲಿದ್ದಾರೆ. ಇದರಲ್ಲಿ ಯಾವುದನ್ನೂ ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಕಾಂಗ್ರೆಸ್ ಸುಖಾಸುಮ್ಮನೆ ನಮ್ಮ ಮೇಲೆ ಆರೋಪ ಮಾಡುತ್ತಿದೆ. ಈ ಥರ ಆಪಾದನೆ ಮಾಡುವ ಮೂಲಕ ಅವರು ಮಾಡಿರುವ ಕರ್ಮ, ಪಾಪ, ಭ್ರಷ್ಟಾಚಾರ ತೊಳೆದು ಹೋಗುವುದಿಲ್ಲ, ಅದು ಮತ್ತೆ ಬಂದೆ ಬರುತ್ತದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಕಾಂಗ್ರೆಸ್ ಅವಧಿಯಲ್ಲಾದ ಭ್ರಷ್ಟಾಚಾರದ 59 ಪ್ರಕರಣಗಳನ್ನು ಎಸಿಬಿಗೆ ಕೊಟ್ಟದ್ದು, ಲೋಕಾಯುಕ್ತಕ್ಕೆ ಕೊಡುತ್ತೇವೆ. ಅಲ್ಲಿ ಕಾಂಗ್ರೆಸ್ ಬಣ್ಣ ಬಹಳಷ್ಟು ಬಯಲಾಗುತ್ತದೆ ಎಂದರು. ಇದೇ ವೇಳೆ ಮಾಡಾಳ್​ ವಿರೂಪಾಕ್ಷಪ್ಪ ಮೆರವಣಿಗೆಗೆ ಇದು ಸರಿಯಲ್ಲ ಎಂಬ ಸ್ಪಷ್ಟ ಸೂಚನೆ ಕೊಟ್ಟಿದ್ದಾಗಿ ಹೇಳಿದರು.
ಇದನ್ನೂ ಓದಿ:ಮದ್ವೆಯಾದ ಮರುದಿನವೇ ಬೆಂಗ್ಳೂರು ಟ್ರಾಫಿಕ್​ನಲ್ಲಿ ಪತ್ನಿ ಬಿಟ್ಟು ಪತಿ ಎಸ್ಕೇಪ್​! ಕಾರಣ ಕೇಳಿ ನವವಿವಾಹಿತೆ ಶಾಕ್​
ತಮ್ಮ ಮೇಲೆ ಡಿ.ಕೆ.ಶಿವಕುಮಾರ್ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಬೊಮ್ಮಾಯಿ, ಆ ಪುಣ್ಯಾತ್ಮನಿಗೂ ಭ್ರಷ್ಟಾಚಾರಕ್ಕೂ ಬಿಡದ ನಂಟಿದೆ. ಅವರ ಬಾಯಲ್ಲಿ ಈ ರೀತಿ ಬರುವುದು ಸಹಜ ಎಂದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ‌ಕಾರ್ಯದರ್ಶಿ ಸಿ.ಟಿ. ರವಿಯವರನ್ನು ಹಿಂದೂ ಉಗ್ರ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ ಸಿಎಂ, ಕಾಂಗ್ರೆಸ್​ನವರಿಗೆ ದೇಶಭಕ್ತರು ಉಗ್ರರ ಹಾಗೆ ಕಾಣುತ್ತಾರೆ, ನಮಗೆ ದೇಶದ್ರೋಹಿಗಳು ಉಗ್ರರ ಹಾಗೇ ಕಾಣುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಶಾಸಕ ಸತೀಶ್ ರೆಡ್ಡಿ, ಮುನಿರೆಡ್ಡಿ ವಿರುದ್ಧ ಭೂ ಕಬಳಿಕೆ ಆರೋಪ: ಉಮಾಪತಿ ಶ್ರೀನಿವಾಸಗೌಡರಿಂದ ದಾಖಲೆ ಬಿಡುಗಡೆ

ನಿರೀಕ್ಷಣಾ ಜಾಮೀನು ಆದೇಶ ಪ್ರತಿ ಕೈ ಸೇರುತ್ತಿದ್ದಂತೆ ಲೋಕಾಯುಕ್ತ ಕಚೇರಿಗೆ ಮಾಡಾಳ್​ ವಿರೂಪಾಕ್ಷಪ್ಪ ಹಾಜರ್​!

VIDEO | ಬಸ್‌ ಸೀಟಿಗಾಗಿ ಜುಟ್ಟು ಹಿಡಿದು ಹೊಡೆದಾಡಿದ ಮಹಿಳೆಯರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + four =
Remember me
