ಬೆಂಗಳೂರು:ದಿಶಾ ಸಮಿತಿ ಸಭೆ ಹೊರತುಪಡಿಸಿ ಕೇಂದ್ರ ಸಚಿವರು ನೇರವಾಗಿ ರಾಜ್ಯ ಸರ್ಕಾರದ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲು ಅವಕಾಶವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಕುಮಾರಸ್ವಾಮಿ ರಾಜಕೀಯ ಕಾರಣಕ್ಕಾಗಿ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಹಾಗೂ ರಾಜ್ಯದ ಸಚಿವರನ್ನು ಹೊರತುಪಡಿಸಿ ಕೇಂದ್ರ ಸಚಿವರಿಗೆ ರಾಜ್ಯದ ಅಧಿಕಾರಿಗಳ ಸಭೆ ಕರೆದು ಪ್ರಗತಿ ಪರಿಶೀಲನೆ ನಡೆಸಲು ಅವಕಾಶಗಳಿಲ್ಲ. ಈ ಹಿಂದೆ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ಕುಮಾರಸ್ವಾಮಿಯವರಿಗೆ ಈ ವಿಚಾರ ಚೆನ್ನಾಗಿ ಗೊತ್ತಿದೆ. ಆದರೂ ರಾಜಕೀಯ ಕಾರಣಕ್ಕಾಗಿ ಆರೋಪ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಕುಮಾರಸ್ವಾಮಿ ಕೇಂದ್ರದ ಸಚಿವರಾಗಿದ್ದಾರೆ. ಅವರಿಗೆ ಪ್ರತ್ಯೇಕ ಶಿಷ್ಟಾಚಾರಗಳಿರುತ್ತವೆ. ರಾಜ್ಯ ಸರ್ಕಾರದ ಸಚಿವರು ನಡೆಸುವ ಸಭೆಗಳಲ್ಲಿ ಅವರು ಭಾಗವಹಿಸಬಹುದು. ಅವರೇ ನೇರವಾಗಿ ಸಭೆ ಕರೆದು ಪ್ರಗತಿ ಪರಿಶೀಲನೆ ನಡೆಸಲು ಅವಕಾಶವಿಲ್ಲ. ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಇದೇ ರೀತಿಯ ನಿಯಮಾವಳಿಗಳ ಪಾಲನೆಯಾಗಿತ್ತು ಎಂದರು.
ಮುಡಾ ನಿವೇಶನ ಹಂಚಿಕೆ ಹಗರಣ ಬಯಲಾಗಿರುವುದರ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಎಂದು ಕುಮಾರಸ್ವಾಮಿಯವರು ಮಾಡಿರುವ ಆರೋಪ ಆಧಾರರಹಿತ. ಈ ಬಗ್ಗೆ ಖುದ್ದು ಡಿ.ಕೆ.ಶಿವಕುಮಾರ್‌ರವರೇ ಸ್ಪಷ್ಟನೆ ನೀಡಿ ತಮಗೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಗತ್ಯ ಕಂಡುಬಂದರೆ ಮಾಜಿ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸವರಾಜ ದದ್ದಲ್ ಅವರನ್ನು ವಿಚಾರಣೆಗೊಳಪಡಿಸಲಿದೆ ಎಂದರು.ಮಾಹಿತಿ ಪಡೆಯುವ ಸಲುವಾಗಿ ನೊಟೀಸ್ ಕೊಟ್ಟು ವಿಚಾರಣೆಗೆ ಕರೆಯುತ್ತಾರೆ. ನಾಗೇಂದ್ರ ಅವರ ಮೂರ್ನಾಲ್ಕು ಜನ ಆಪ್ತ ಸಹಾಯಕರಿಗೆ ಈಗಾಗಲೇ ನೊಟೀಸ್ ಕೊಟ್ಟು ವಿಚಾರಣೆ ನಡೆಸಲಾಗಿದೆ. ಅಗತ್ಯ ಬಿದ್ದರೆ ನಾಗೇಂದ್ರ ಅವರಿಗೂ ನೊಟೀಸ್ ನೀಡಲಾಗುವುದು ಎಂದು ಡಾ.ಪರಮೇಶ್ವರ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − six =
Remember me
