ಬೆಂಗಳೂರು:ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಸುಗ್ರೀವಾಜ್ಞೆ ರಾಜ್ಯಪಾಲರಿಂದ ವಾಪಸ್ ಬಂದಿರುವುದಕ್ಕೆ ಯಾವುದೇ ರಾಜಕೀಯ ಕಾರಣ ಇಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದಾರೆ.
ಬುಧವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿಧೇಯಕಕ್ಕೆ ಯಾರಿಂದಲೂ ವಿರೋಧವಿಲ್ಲ. ಬಜೆಟ್ ಅಧಿವೇಶನದ ದಿನಾಂಕ ನಿಗದಿಯಾಗಿರುವುದರಿಂದ ಎರಡೂ ಸದನದಲ್ಲಿ ವಿಧೇಯಕ ಮಂಡಿಸಿ ಒಪ್ಪಿಗೆ ಪಡೆಯುವಂತೆ ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿದ್ದಾರೆ. ನಾವು ಅಧಿವೇಶನದ ದಿನಾಂಕ ನಿಗದಿ ಮುನ್ನವೇ ಜ.5ರಂದೇ ರಾಜ್ಯಪಾಲರಿಗೆ ವಿಧೇಯಕ ಕಳುಹಿಸಿದ್ದೆವು. ಆದರೆ ರಾಜ್ಯಪಾಲರ ಅನಾರೋಗ್ಯ ಹಾಗೂ ಅವರು ಊರಲ್ಲಿ ಇಲ್ಲದ ಕಾರಣ ಸಹಿ ಹಾಕುವುದು ಅವರಿಂದ ತಡ ಆಗಿದೆ. ಇದೀಗ ಅಧಿವೇಶನದ ದಿನಾಂಕ ನಿಗದಿಯಾಗಿದೆ. ಎರಡು ಸದನದಲ್ಲಿ ವಿಧೇಯಕ ಮಂಡಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ತಿಳಿಸಿದರು.
ರಾಜ್ಯದ ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ರಾಜ್ಯಪಾಲರು ಬೇರೆ ರೀತಿ ನಡೆದುಕೊಳ್ಳುವುದಿಲ್ಲ. ಈ ವಿಚಾರದಲ್ಲಿ ರಾಜಕಾರಣ ಮಾಡುವ ಅಗತ್ಯವಿಲ್ಲ. ತಾಂತ್ರಿಕ ಕಾರಣದಿಂದ ರಾಜ್ಯಪಾಲರು ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೇಸರಿ ಶಾಲು ಯಾರಪ್ಪನದ್ದು ಅಲ್ಲ. ಆಂಜನೇಯ ಇವರ ಸ್ವಂತದ್ದು ಎಂದು ಬಿಜೆಪಿಗರು ಭಾವಿಸಿದ್ದಾರೆ. ರಾಮನ ದೇವಸ್ಥಾನ ಕಟ್ಟಿ ಪ್ರಚಾರ ತೆಗೆದುಕೊಳ್ಳುವುದಲ್ಲ. ನಾವು ರಾಮ ಹಾಗೂ ಆಂಜನೇಯನ ಭಕ್ತರೆ. ವರ್ಷಕ್ಕೊಮ್ಮೆ ನಾನು ಮಾಲೆ ಹಾಕುತ್ತೇನೆ. ಇದೆಲ್ಲವೂ ಇವರದ್ದಲ್ಲ. ನಾನು ಕೂಡ ಹಿಂದೂ. ಹಿಂದುತ್ವವನ್ನು ಗುತ್ತಿಗೆ ಪಡೆದಿದ್ದಾರೆಯೆ? ಇದೆಲ್ಲ ಬಹಳ ದಿನ ನಡೆಯುವುದಿಲ್ಲ. ಜನ ಬುದ್ಧಿವಂತರಿದ್ದು, ಬಿಜೆಪಿ ನಾಯಕರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಛೇಡಿಸಿದರು.ಅನಗತ್ಯವಾಗಿ ಮಂಡ್ಯ ಜಿಲ್ಲೆ ಕೆರೆಗೋಡುದಲ್ಲಿ ವಿಪಕ್ಷ ನಾಯಕರು ಬೆಂಕಿ ಹಚ್ಚಿದ್ದಾರೆ. ಧ್ವಜದ ಸಲುವಾಗಿ ಬಿಜೆಪಿಗರ ಮುಖಂಡರು ಪಾದಯಾತ್ರೆ ಮಾಡುತ್ತಿದ್ದಾರೆ. ಇವರಿಗೆ ಹಸಿವಿನ ಬಗ್ಗೆ ಅರಿವಿಲ್ಲ. ಸಿ.ಟಿ.ರವಿ, ಬಡವರ ಪರ ಮಾತನಾಡಲಿ. ಕೇಂದ್ರದ ಯೋಜನೆಗಳ ಬಗ್ಗೆ ಮಾತನಾಡಲಿ, ಧ್ವಜ, ದರ್ಗಾ, ಆಂಜನೇಯ, ಧರ್ಮದ ಬಗ್ಗೆ ಮಾತನಾಡುತ್ತಾರೆ. ಬೆಂಕಿ ಹಚ್ಚುವುದು, ಜನರ ಮನಸ್ಸು ಕೆಡಿಸುವುದೇ ಆ ಪಕ್ಷದ ಕಾಯಕವಾಗಿದೆ ಎಂದು ದೂರಿದರು.
ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗಿರುವ ಐದು ಐತಿಹಾಸಿಕ ಗ್ಯಾರಂಟಿಗಳನ್ನು ರದ್ದುಗೊಳಿಸುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ನಾವು ಜನರ ಜೀವನದ ಜತೆ ನಡೆಯುತ್ತಿದ್ದರೆ, ಬಿಜೆಪಿಗರು ಜನರ ಭಾವನೆಗಳ ಜತೆ ಹೋಗುತ್ತಿದ್ದಾರೆ. ಗ್ಯಾರಂಟಿಗಳ ಬಗ್ಗೆ ಟೀಕೆ ಮಾಡಿದ ಪ್ರಧಾನ ಮಂತ್ರಿ ಅವರು ಗ್ಯಾರಂಟಿ ಹೆಸರಿನಲ್ಲಿ ಪ್ರಚಾರ ಮಾಡಲು ಮುಂದಾಗಿದ್ದಾರೆ. ಗ್ಯಾರಂಟಿ ಮಹತ್ವ ಇದೀಗ ಬಿಜೆಪಿ ಅವರಿಗೆ ತಿಳಿದಿದೆ ಎಂದು ಹೇಳಿದರು.
ಅಭಿವೃದ್ಧಿ ವಿಷಯವಾಗಿ ಮಾತನಾಡುವುದು ಇವರಿಗೆ ಬೇಡ. ಇವರಿಗೆ ನಿಜವಾಗಿಯೂ ತಾಕತ್ತಿದ್ದರೆ ಕೇಂದ್ರದ ಅಭಿವೃದ್ಧಿ ಬಗ್ಗೆ ಮಾತನಾಡಲಿ ಎಂದು ಸವಾಲೆಸೆದರು.ಚುನಾವಣಾ ಸಮಯದಲ್ಲಿ ಜನರ ಮನಸ್ಸು ಕೆಡಿಸುವುದು ಬಿಜೆಪಿ ಕೆಲಸ. ಜನರ ಮನಸ್ಸು ಗೆಲ್ಲುವುದು ಕಾಂಗ್ರೆಸ್ ಕೆಲಸ ಎಂದು ತಂಗಡಗಿ ಹೇಳಿದರು.
ಕಾಂತರಾಜು ವರದಿ ಸ್ವೀಕಾರ ಮಾಡಲು ಮುಖ್ಯಮಂತ್ರಿಗಳಿಗೆ ತಾಕತ್ತಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಕಿಡಿಕಾರಿದ ಸಚಿವ ಶಿವರಾಜ್ ತಂಗಡಗಿ, ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ವರದಿ ಸ್ವೀಕರಿಸಲು ತಾಕತ್ತು ಇರಲಿಲ್ಲವೇ ಎಂದು ಪ್ರಶ್ನಿಸಿದರು.ಸಿದ್ದರಾಮಯ್ಯ ಅವರಿಗೆ ತಾಕತ್ತು ಇದ್ದ ಕಾರಣಕ್ಕೆ ಸಮೀಕ್ಷೆ ಮಾಡಿಸಿದ್ದು, ತಾಕತ್ತು ಇದ್ದಿದ್ದಕ್ಕೆ168 ಕೋಟಿ ಹಣ ಕೊಟ್ಟಿದ್ದು, ತಾಕತ್ತು ಇರುವುದಕ್ಕೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ಸ್ವೀಕಾರ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದು ನಮ್ಮ, ಸಿದ್ದರಾಮಯ್ಯ ಅವರ ನಿಜವಾದ ತಾಕತ್ತು ಎಂದು ಕುಮಾರಸ್ವಾಮಿ ವಿರುದ್ಧ ತಂಗಡಗಿ ವಾಗ್ದಾಳಿ ನಡೆಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + twelve =
Remember me
