ಬೆಂಗಳೂರೂ:ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ ಎಂದು ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ತಿಳಿಸಿದ್ದಾರೆ.
ಸರಣಿ ಟ್ವೀಟ್​ ಮಾಡಿರುವ ಅನಿತಾ ಕುಮಾರಸ್ವಾಮಿ, ರಾಮನಗರ ಕ್ಷೇತ್ರವನ್ನು ನನ್ನ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ನಾನು ಮತ್ತೆ ಸ್ಪರ್ಧಿಸುವ ಮಾತೆಲ್ಲಿ? 2008ರಲ್ಲಿ ಆಪರೇಷನ್‌ ಕಮಲದ ಉಪ ಚುನಾವಣೆಯಲ್ಲಿ ಮಾಜಿ ಪ್ರಧಾನಮಂತ್ರಿಗಳಾದ ಎಚ್​.ಡಿ. ದೇವೇಗೌಡ ಅವರು ಮತ್ತು ಎಚ್​.ಡಿ. ಕುಮಾರಸ್ವಾಮಿ ಅವರ ಆದೇಶ ಗೌರವಿಸಿ ನಾನು ಸ್ಪರ್ಧಿಸಿದ್ದೆ. ನಂತರದ ಚುನಾವಣೆಯಲ್ಲಿ ವೀರಭದ್ರಯ್ಯ ಅವರಿಗೆ ಮಧುಗಿರಿ ಕ್ಷೇತ್ರವನ್ನು ಸಂತೋಷದಿಂದ ಬಿಟ್ಟುಕೊಟ್ಟು ಪಕ್ಷದ ಕೆಲಸ, ಮನೆಗಷ್ಟೇ ಸೀಮಿತವಾದೆ.
ಇದನ್ನೂ ಓದಿ:80 ಲಕ್ಷ ರೂ. ಲಾಟರಿ ಬಹುಮಾನ ಗೆದ್ದ ಮಾರನೇ ದಿನವೇ ಯುವಕನ ಬದುಕು ದುರಂತ ಅಂತ್ಯ!
ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ, ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. 1/7
— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS)April 4, 2023

2013ರಲ್ಲಿ ಕೂಡ ಕಾರ್ಯಕರ್ತರ ಒತ್ತಡಕ್ಕೆ ಮಣಿಸು ಚನ್ನಪಟ್ಟಣದಲ್ಲಿ ಸ್ಪರ್ಧಿಸಬೇಕಾಯಿತು. ಆಗಲೂ ನಾನು ಪಕ್ಷ ಹಾಗೂ ವರಿಷ್ಠರ ಆದೇಶವನ್ನಷ್ಟೇ ಪಾಲಿಸಿದೆ. 2018ರ ಉಪ ಚುನಾವಣೆ ವೇಳೆ ರಾಮನಗರ ಕ್ಷೇತ್ರದಲ್ಲಿ ಕೆಲವರು ನಮ್ಮ ಪಕ್ಷದ ಬೆನ್ನಿಗೆ ಇರಿಯುವ ಕೃತ್ಯವೆಸಗಿದಾಗ ಮತ್ತೆ ಎಚ್​.ಡಿ. ದೇವೇಗೌಡ ಅವರು ಮತ್ತು ಎಚ್​.ಡಿ. ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ರಾಮನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದೆ.
ಹೀಗೆ ಪಕ್ಷ ಹಾಗೂ ವರಿಷ್ಠರ ಆದೇಶವನ್ನು ಶಿರಸಾ ಪಾಲಿಸಿದ್ದೇನೆ. ಅಂಥ ಕ್ಲಿಷ್ಟ ಪರಿಸ್ಥಿತಿಯಲ್ಲೂ ಮನೆಮಗಳೆಂದು ಭಾವಿಸಿ ನನ್ನನ್ನು ಗೆಲ್ಲಿಸಿದ ಮಧುಗಿರಿ, ರಾಮನಗರ ಕ್ಷೇತ್ರಗಳ ಮಹಾಜನತೆಗೆ ಆಜೀವ ಪರ್ಯಂತ ನಾನು ಆಭಾರಿ. ಚನ್ನಪಟ್ಟಣ ಕ್ಷೇತ್ರದ ಜನತೆಗೂ ಚಿರಋಣಿ. ಸಿಕ್ಕಿದ ಅವಕಾಶ ಬಳಸಿಕೊಂಡು ಈ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿದ್ದೇನೆ.
ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು ಮತ್ತೂ ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ.
ಇದನ್ನೂ ಓದಿ:ಕೊನೆಗೂ Instagram ಖಾತೆ ತೆರೆದ ವಿಜಯ್​: 1 ದಿನದಲ್ಲಿ ಗಳಿಸಿದ ಫಾಲೋವರ್ಸ್​ ಸಂಖ್ಯೆ ಹುಬ್ಬೇರಿಸುವಂತಿದೆ!
ಎಲ್ಲಾ ಚುಣಾವಣೆಗಳಲ್ಲಿ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು, ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ.ದೇವೇಗೌಡರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ದಯಮಾಡಿ ನನ್ನ ಭಾವನೆಗಳನ್ನು ಗೌರವಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಅನಿತಾ ಕುಮಾರಸ್ವಾಮಿ ಸರಣಿ ಟ್ವೀಟ್​ ಮೂಲಕ ವದಂತಿಗೆ ತೆರೆ ಎಳೆದಿದ್ದಾರೆ.
ಕೆಲವು ಕ್ಷೇತ್ರಗಳಿಗೆ ಅಚ್ಚರಿ ಅಭ್ಯರ್ಥಿಗಳ ಆಯ್ಕೆ: ಸಿಎಂ ಬಸವರಾಜ ಬೊಮ್ಮಾಯಿ‌ ಸ್ಪಷ್ಟ ಸುಳಿವು

ಮೊದಲ ಮೊಬೈಲ್ ಕರೆ ಮಾಡಿ 50 ವರ್ಷ; ಅಂದು ಮೊದಲು ಕರೆ ಮಾಡಿದ್ದು ಯಾರು!

ಆನ್‌ಲೈನ್ ಗೇಮಿಂಗ್ ಆ್ಯಪ್‌ನಲ್ಲಿ 49 ರೂ. ಹೂಡಿಕೆ ಮಾಡಿದ ವ್ಯಕ್ತಿ ರಾತ್ರೋರಾತ್ರಿ ಕೋಟಿ ರೂ. ಒಡೆಯನಾದ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:six + 14 =
Remember me
