ಬೆಂಗಳೂರು:ನೈತಿಕ ಪೊಲೀಸ್‌ಗಿರಿಯನ್ನು ಸರ್ಕಾರ ಸಹಿಸುವುದಿಲ್ಲ. ಅಂತಹ ಘಟನೆಗಳನ್ನು ಹತ್ತಿಕ್ಕಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.
ನೈತಿಕ ಪೊಲೀಸ್‌ಗಿರಿ ವಿಷಯವಾಗಿ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಕಾನೂನು ಕೈಗೆತ್ತಿಕೊಳ್ಳುವರು ಯಾರೇ ಆಗಿದ್ದರು ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಅಂತಹ ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಗುಡುಗಿದರು.
ರಾಜ್ಯದಲ್ಲಿ ಪದೇ ಪದೇ ಇಂತಹ ಪ್ರಕರಣ ವರದಿಯಾಗುತ್ತಿವೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಎಲ್ಲೇ ಆಗಲೀ, ಯಾರೇ ಆಗಲಿ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಇರಬಾರದು. ಇಂತಹುದ್ದೆನ್ನೆಲ್ಲ ಮಟ್ಟ ಹಾಕಬೇಕೆನ್ನುವುದು ಸರ್ಕಾರದ ನಿಲುವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸೂಚನೆ ನೀಡಲಾಗಿದೆ. ಪೊಲೀಸರು ಅದನ್ನು ಪಾಲನೆ ಮಾಡುತ್ತಾರೆ. ಸಂಬಂಧಪಟ್ಟ ಪ್ರಕರಣಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಾರೆ ಎಂದು ಡಾ.ಪರಮೇಶ್ವರ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
