ಬೆಂಗಳೂರು:ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ ಪ್ರಕರಣ ಸಂಬಂಧ ಸಿಐಡಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಒಟ್ಟು 1,576 ಸಾಲದ ಖಾತೆಗಳ ಪೈಕಿ ಶೇ.78 ಸಾಲಗಳಿಗೆ ಸೂಕ್ತ ದಾಖಲೆಗಳು ಇಲ್ಲ ಎಂಬ ಸತ್ಯ ಬಯಲಾಗಿದೆ.
ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿಯೇ ಚರ್ಚೆಗೆ ಗ್ರಾಸವಾದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ ಪ್ರಕರಣ ಸಂಬಂಧ ಸಿಐಡಿ ತನಿಖೆ ವೇಳೆ ಹೆಚ್ಚಿನ ಮಾಹಿತಿಗಳು ಬೆಳಕಿಗೆ ಬರುತ್ತಿವೆ. 24 ಮುಖ್ಯ ಫಲಾನುಭವಿಗಳಿಗೆ (ಸಾಲಗಾರರಿಗೆ) 892 ಕೋಟಿ ರೂ. ಸಾಲ ಮಂಜೂರು ಮಾಡಿ ಆ ನಂತರ ಬ್ಯಾಂಕ್ ಮುಖ್ಯಸ್ಥರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ. ಅಲ್ಲದೆ 1,576 ಸಾಲದ ಖಾತೆಗಳ ಪೈಕಿ 1,224 ಖಾತೆಗಳಿಗೆ ಸಂಬಂಧಪಟ್ಟಂತೆ ದಾಖಲೆಗಳು/ಕಡತಗಳು ಇಲ್ಲದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಠೇವಣಿ ಇಲ್ಲದಿದ್ದರೂ ಠೇವಣಿ ಇದೆ ಎಂದು ಸಾಲ ಮಂಜೂರು ಹಾಗೂ ಠೇವಣಿದಾರರ ಒಪ್ಪಿಗೆ ಸಹಿ ಪಡೆಯದೆ ಅವರ ಹೆಸರಿನಲ್ಲಿ ಸಾಲ ನೀಡಲಾಗಿದೆೆ. ಈ ಮೂಲಕ ಆದಾಯ ಗುರುತಿಸುವಿಕೆ-ಆಸ್ತಿ ವರ್ಗೀಕರಣ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಬ್ಯಾಂಕ್‌ನಲ್ಲಿ 40,661 ಗ್ರಾಹಕರಿದ್ದು, ಒಟ್ಟು 231 ಕೋಟಿ ರೂ. ಠೇವಣಿ ಇಟ್ಟಿದ್ದಾರೆ. ಸಿಐಡಿ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಗ್ರಾಹಕರಿಗೆ ತೊಂದರೆ ಉಂಟಾಗಿದೆ.
ಸಹಕಾರ ಸಂಘಗಳ ಅಧಿನಿಯಮ 1959ರ ನಿಯಮದಡಿ ಸಿಐಡಿ ತನಿಖೆ ನಡೆಸುತ್ತಿದೆ. 2014 ರಿಂದ 2019ರವರೆಗಿನ ಸಾಲುಗಳ ಮರುಲೆಕ್ಕ ಪರಿಶೋಧನೆ ನಡೆಯುತ್ತಿದೆ. ಜತೆಗೆ ಹಣಕಾಸು ಸಂಸ್ಥೆಗಳ ಠೇವಣಿದಾರರ ಹಿತಾಸಕ್ತಿ ಅಧಿನಿಯಮ ಅನ್ವಯ ಸಹ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗಳ ಸಂಖ್ಯೆ 38ಕ್ಕೆ ಏರಿಕೆ:ಸಿಐಡಿ ತನಿಖೆ ವೇಳೆ ಆರೋಪಿಗಳ ಸಂಖ್ಯೆ 38ಕ್ಕೆ ಏರಿಕೆ ಆಗಿದೆ. ಇದರಲ್ಲಿ ಬ್ಯಾಂಕ್‌ನ ಹಾಲಿ, ಮಾಜಿ ಪದಾಧಿಕಾರಿಗಳು, ರಿಯಲ್ ಎಸ್ಟೇಟ್ ಉದ್ಯಮಿಗಳು, ಸಾಲಗಾರರು, ನಿವೃತ್ತ ಸರ್ಕಾರಿ ಅಧಿಕಾರಿಗಳು ಇದ್ದಾರೆ.

‘ದೇಗುಲಗಳನ್ನು ಧ್ವಂಸ ಮಾಡಿ ಕಟ್ಟಿರುವ ಮಸೀದಿಗಳನ್ನು ಒಡೆಯಿರಿ’- ಪ್ರಧಾನಿಗೆ ಮುಸ್ಲಿಂ ಮುಖಂಡನ ಪತ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 11 =
Remember me
