ಬೆಂಗಳೂರು:ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್​ ಆಚರಣೆ ನಡೆಯುತ್ತಿದ್ದು, ಇಡೀ ರಾಜ್ಯವೇ ಸ್ತಬ್ಧವಾಗಿದೆ. ಆದರೆ, ಕೊಡಗು ಜಿಲ್ಲೆ ಮಾತ್ರ ಇದಕ್ಕೆ ಹೊರತಾಗಿದೆ. ಏಕೆಂದರೆ, ಕೊಡಗಿನಲ್ಲಿ ಯಾವುದೇ ಬಂದ್​ ನಡೆಯುತ್ತಿಲ್ಲ. ಮಾಮೂಲಿಯಂತೆಯೇ ಈ ದಿನವೂ ನಡೆಯುತ್ತಿದೆ.
ಕೊಡಗು ಜಿಲ್ಲೆಯಲ್ಲಿ ಯಾವುದೇ ಸಂಘಟನೆ ಬಂದ್​ಗೆ ಬೆಂಬಲ ಕೊಟ್ಟಿಲ್ಲ. ಎಂದಿನಂತೆ ವಾಹನ ಸಂಚಾರವಿದೆ. ಕೆಎಸ್​ಆರ್​ಟಿಸಿ ಹಾಗೂ ಖಾಸಗಿ‌ ಬಸ್​ಗಳು ಸಂಚಾರ ಮಾಡುತ್ತಿವೆ. ಶಾಲಾ-ಕಾಲೇಜುಗಳು ಸಹ ಎಂದಿನಂತೆ ನಡೆಯುತ್ತಿವೆ. ಅಂಗಡಿ-ಮುಂಗಟ್ಟುಗಳು ಎಲ್ಲ ತೆರೆದಿವೆ. ಜನಜೀವನ ಎಂದಿನಂತೆ ಸಾಮಾನ್ಯವಾಗಿದೆ. ಜಿಲ್ಲೆಯಲ್ಲಿ ಯಾವುದೇ ಪ್ರತಿಭಟನೆಗಳು ಸಹ ಇಲ್ಲ.
ಕಳೆದ ಮಂಗಳವಾರವಷ್ಟೇ ಬೆಂಗಳೂರು ಬಂದ್​ ಆಚರಿಸಲಾಯಿತು. ಯಶಸ್ವಿಯೂ ಆಯಿತು. ಇಂದು ಅಖಂಡ ಕರ್ನಾಟಕ ಬಂದ್​ ಆಚರಣೆ ಆರಂಭವಾಗಿದೆ. ಸಂಚಾರ ಸಹ ವಿರಳವಾಗಿದೆ. ಇಂದಿನ ಬಂದ್​ ಪರಿಣಾಮ ಹೆಚ್ಚಾಗಿರಲಿದೆ.
ಇದನ್ನೂ ಓದಿ:ಕರ್ನಾಟಕ ಬಂದ್​: ಇಂದಿನ ಕಾವೇರಿ ಪ್ರತಿಭಟನೆಯಲ್ಲಿ ಸುದೀಪ್​, ದರ್ಶನ್​, ಯಶ್​ ಭಾಗಿಯಾಗ್ತಾರಾ? ಇಲ್ಲಿದೆ ಉತ್ತರ…
ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್​​ ನೀರನ್ನು ಹರಿಸಬೇಕೆಂದು ಸೆ.12ರಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೆ.18ರಂದು ಆದೇಶ ಹೊರಡಿಸಿತ್ತು. ಇದರ ವಿರುದ್ಧ ಸುಪ್ರೀಂಕೋರ್ಟ್​ಗೆ ಕರ್ನಾಟಕ ಮೇಲ್ಮನವಿ ಸಲ್ಲಿಸಿತ್ತು. ಸೆ.21ರಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ CWMA ಆದೇಶವನ್ನು ಎತ್ತಿಹಿಡಿದಿತ್ತು. ಅದರಂತೆ ರಾಜ್ಯ ಸರ್ಕಾರ ನೀರು ಬಿಡುಗಡೆ ಸಹ ಮಾಡಿತು. ಅತ್ತ ಸಂಘಟನೆಗಳು ಬಂದ್​ ಸಹ ಆಚರಿಸಿದವು. ಇದರ ನಡುವೆ ಮತ್ತೆ 3000 ಸಾವಿರ ಕ್ಯೂಸೆಕ್​ ನೀರು ಹರಿಸಲು ಕಾವೇರಿ ನದಿ ನೀರು ಸಮಿತಿ ಶಿಫಾರಸು ಮಾಡಿರುವುದರಿಂದ ಇಂದಿನ ಕರ್ನಾಟಕ ಬಂದ್​ ತೀವ್ರತೆ ಪಡೆದುಕೊಳ್ಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ.
ಇಂದು ರಾಜ್ಯದೆಲ್ಲೆಡೆ ಭಾರೀ ಪ್ರತಿಭಟನೆಗಳು ನಡೆಯಲಿದೆ. ಅದರಲ್ಲಿ ರಸ್ತೆ ತಡೆಯೇ ಪ್ರಮುಖವಾಗಿರಲಿದ್ದು, ಎಲ್ಲ ಹೆದ್ದಾರಿಗಳನ್ನು ಬಂದ್​ ಮಾಡಲು ಕನ್ನಡ ಪರ ಸಂಘಟನೆಗಳು ಪ್ಲಾನ್​ ಮಾಡಿವೆ. ಹೀಗಾಗಿ ರಸ್ತೆಗಿಳಿಯುವ ಮುನ್ನ ವಾಹನ ಸವಾರರು ತುಂಬಾ ಎಚ್ಚರಿಕೆ ವಹಿಸುವುದು ಸೂಕ್ತ. ಇಲ್ಲವಾದಲ್ಲಿ ಪ್ರತಿಭಟನೆಯ ನಡುವೆ ಸಿಲುಕಿ ಪರದಾಡಬೇಕಾಗುತ್ತದೆ.
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್​ ಬಿ ರಿಲೀಸ್​ ಡೇಟ್​ನಲ್ಲಿ ಬದಲಾವಣೆ!

VIDEO | ನ್ಯಾಯ ದೇವತೆಯ ಕಣ್ಣು ಕಟ್ಟಿದಂತೆ, ನಮ್ಮ ಕಣ್ಣೂ ಕಟ್ಟಿದ್ದಾರೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − 13 =
Remember me
