ಬೆಂಗಳೂರು:ರಾಜ್ಯದಲ್ಲಿ ಶಾಲೆಗಳ ಪುನರಾರಂಭಕ್ಕೆ ತರಾತುರಿಯಿಲ್ಲ. ಈ ಕುರಿತು ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಆಮೂಲಕ ಜನರ ಸಂಶಯ ನಿವಾರಿಸಿದ್ದಾರೆ.
ಇಲಾಖೆ ಸುತ್ತೋಲೆ ಮುಂದಿಟ್ಟುಕೊಂಡು ಹಾಗೂ ಶಾಲೆ ಆರಂಭದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆ ಕುರಿತಂತೆ ಸಚಿವರು ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಶಾಲೆಗಳ ಪುನರಾರಂಭದ ಕುರಿತು ಪಾಲಕರು, ಆಸಕ್ತರೊಂದಿಗೆ ರ್ಚಚಿಸಿ ಸಂಗ್ರಹಿಸಿದ ಅಭಿಪ್ರಾಯಗಳನ್ನು ಜುಲೈ ಒಳಗೆ ಕಳುಹಿಸಲು ಕೇಂದ್ರ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಜೂ.10 ರಿಂದ 12ರವರೆಗೆ ಶಾಲಾಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಕ್ಕೆ ದಿನಾಂಕ ನಿಗದಿಪಡಿಸಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು, ಎಸ್​ಡಿಎಂಸಿ ಮಾರ್ಗದರ್ಶನ ನೀಡುವುದು ಸುತ್ತೋಲೆ ಮುಖ್ಯ ಉದ್ದೇಶವಾಗಿತ್ತೇ ಹೊರತು ಶಾಲೆ ಪುನಾರಂಭದ ಉದ್ದೇಶಕ್ಕಲ್ಲ ಎಂಬ ಸಮಜಾಯಿಷಿ ನೀಡಿದ್ದಾರೆ.
ಕರೊನಾ ಭೀತಿ ಕಡಿಮೆ ಆಗುವವರೆಗೆ ಶಾಲೆ ಆರಂಭಿಸುವುದು ಬೇಡ ಎಂಬುದು ಕೆಲವರ ವಾದವಾದರೆ, ವಿಳಂಬವಾದಲ್ಲಿ ಮಕ್ಕಳು ಶಾಲೆಗೆ ಹೋಗುವುದನ್ನೇ ಮರೆತು ಬಿಡುತ್ತಾರೆಂಬು ಹಲವರ ಅಭಿಪ್ರಾಯ. ಅದೇನೇ ಇದ್ದರೂ ಪಾಲಕರ ಆತಂಕಕ್ಕೆ ಸರ್ಕಾರ ಸಂವೇದನಾಶೀಲವಾಗಿ ಸ್ಪಂದಿಸುತ್ತದೆ ಎಂದು ಸಚಿವರು ಭರವಸೆ ನೀಡಿದ್ದಾರೆ.
ಗ್ಲೋಬಲ್ ವ್ಯಾಕ್ಸಿನ್ ಅಲಯನ್ಸ್ “ಗವಿ” ಖಾತೆಗೆ 15 ದಶಲಕ್ಷ ಡಾಲರ್ : ಪ್ರಧಾನಿ ಮೋದಿ ವಾಗ್ದಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 6 =
Remember me
