
ಬೆಂಗಳೂರು:ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯಲು ಸರ್ಕಾರ ತರಾತುರಿ, ಅವಸರ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಶಾಲೆಗಳ ಆರಂಭಕ್ಕೆ ಕುರಿತು ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳಿಗೆ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು ಎಂದು ಹೇಳಿದ್ದಾರೆ.‘‘ರಾಜ್ಯದ ಶಾಲಾ ಮಕ್ಕಳ ಪೋಷಕರಿಗೆ ಒಂದು ಮಾಹಿತಿ ನೀಡಬಯಸುತ್ತೇನೆ. ತರಾತುರಿಯಲ್ಲಿ ನಮ್ಮ ರಾಜ್ಯದ ಶಾಲೆಗಳನ್ನು ತೆರೆಯುವುದಿಲ್ಲ’’ ಎಂದೂ ಅವರು ಹೇಳಿದ್ದಾರೆ.
ಇದನ್ನೂ ಓದಿ:ಕ್ವಾರಂಟೈನ್​ ಕೇಂದ್ರಗಳಾಗಿ ಬದಲಾದ ಶಾಲೆಗಳು
‘‘ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿಯು ಅಧಿಕೃತವಾಗಿ ಸರ್ಕಾರ ಘೋಷಿಸಿರುವ ಮಾಹಿತಿಯಲ್ಲ. ಶಾಲೆ ತೆರೆಯುವ ಬಗ್ಗೆ ಸರ್ಕಾರ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ’’ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಜೋಗದಲ್ಲಿ ಜಿಪ್​ಲೈನ್ ಸಾಹಸಕ್ಕೆ ವೇದಿಕೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
