ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರ ಹೆಸರಿನಲ್ಲಿ ಅಭಿಮಾನಿಗಳ ಸಂಘ, ಟ್ರಸ್ಟ್ ಕಟ್ಟಲು ಯಾರಾದ್ರೂ ಪ್ಲ್ಯಾನ್​ ಮಾಡಿದ್ದರೆ ಅದನ್ನು ಕೂಡಲೇ ನಿಲ್ಲಿಸಿಬಿಡಿ. ಅಪ್ಪಿತಪ್ಪಿ ನೀವೇನಾದ್ರೂ ಸಂಘ ಕಟ್ಟಿದ್ರೆ ಕಾನೂನು ಕ್ರಮ ಎದುರಿಸಬೇಕಾದೀತು ಜೋಕೆ!
ಹೌದು, ಈ ಬಗ್ಗೆ ಸ್ವತಃ ಡಿ.ಕೆ. ಶಿವಕುಮಾರ್​ ಅವರೇ ಹೇಳಿದ್ದು, ‘ನನ್ನ ಹೆಸರು ಬಳಸಿಕೊಂಡು ಯಾರೂ ಕೂಡ ಅಭಿಮಾನಿಗಳ ಸಂಘ, ಟ್ರಸ್ಟ್​, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳುವಂತಿಲ್ಲ’ ಎಂದು ಖಡಕ್​ ವಾರ್ನಿಂಗ್​ ಕೊಟ್ಟಿದ್ದಾರೆ.
ಇದನ್ನೂ ಓದಿರಿಪಡುಬಿದ್ರಿ ಕಡಲ್ಕೊರೆತ, ಪ್ರಾಣಾಪಾಯದಿಂದ ಸಚಿವ ಪಾರು !
‘ಈಗಾಗಲೇ ಅಸ್ತಿತ್ವದಲ್ಲಿರುವ ಎಂ.ಎಸ್​ ಅಂಗಡಿ ನೇತೃತ್ವದ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್​ ಅಭಿಮಾನಿಗಳ ಸಂಘ ಹೊರತುಪಡಿಸಿ ನನ್ನ ಹೆಸರಿನ ಅಭಿಮಾನಿ ಸಂಘ, ಸಂಸ್ಧೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಬೇಕು’ ಎಂದು ಡಿಕೆಶಿ ಮನವಿ ಮಾಡಿದ್ದಾರೆ.
ಒಂದೊಮ್ಮೆ ಯಾರಾದರೂ ನನ್ನ ಹಾಗೂ ನನ್ನ ಸಹೋದರ ಡಿ.ಕೆ. ಸುರೇಶ್​ ಹೆಸರಿನ ಸಂಘ ಸಂಸ್ಥೆಗಳ ಮೂಲಕ ಚಟುವಟಿಕೆ ನಡೆಸಿದರೆ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಹಿಂದು ದೇಗುಲದಲ್ಲಿ ಏಸುಕ್ರಿಸ್ತನ ಫೋಟೋ ಇಟ್ಟು ಅರ್ಚಕನಿಂದ ಪೂಜೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + thirteen =
Remember me
