ಬೆಂಗಳೂರು:ರಾಜಿ ಸಂಧಾನ ಪ್ರಕರಣಗಳಲ್ಲಿ ಹೆಚ್ಚುತ್ತಿರುವ ವಂಚನೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವ್ಯಾಜ್ಯಕ್ಕೆ ಸಂಬಂಧಿಸಿದ ವ್ಯಕ್ತಿಗಳ ನೈಜತೆ ಪತ್ತೆಹಚ್ಚಲು ಲೋಕ್ ಅದಾಲತ್ ಹಾಗೂ ನ್ಯಾಯಾಲಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಚಿಸಿ ಹೈಕೋರ್ಟ್ ಆದೇಶಿಸಿದೆ. ಮುಂಬೈನ ರೇಣುಕಾ (63) ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ರಾಜಿ ಪ್ರಕರಣಗಳಲ್ಲಿ ಅನುಸರಿಸಬೇಕಾದ ಕೆಲ ಮಾರ್ಗಸೂಚಿಗಳನ್ನು ರಚಿಸಿದೆ. ಜತೆಗೆ, ಅರ್ಜಿದಾರರಿಗೆ ಸಂಬಂಧಿಸಿದಂತೆ 2014ರ ಜು.26ರಂದು ಲೋಕ್ ಅದಾಲತ್ ಅಂಗೀಕರಿಸಿದ ರಾಜಿ ಆದೇಶವನ್ನು ರದ್ದುಗೊಳಿಸಿದ್ದು, ಮೂಲ ದಾವೆಯ ಮರುಸ್ಥಾಪನೆಗೆ ಆದೇಶಿಸಿದೆ. ಇತ್ತೀಚಿನ ದಿನಗಳಲ್ಲಿ ವಿಚಾರಣಾ ನ್ಯಾಯಾಲಯಗಳಲ್ಲಿನ ಆಸ್ತಿ ವಿವಾದಗಳಲ್ಲಿ ನಕಲಿ ದಾಖಲೆಗಳನ್ನು ಆಧರಿಸಿ ರಾಜಿ ತೀರ್ಪಗಳನ್ನು ಜಾರಿಗೊಳಿಸಲಾಗುತ್ತಿದೆ. ಇದರಿಂದ, ವಂಚನೆ ಕುರಿತು ಹಲವು ಅರ್ಜಿಗಳು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿವೆ. ಆದ್ದರಿಂದ, ಇನ್ನು ಮುಂದೆ ವಿಚಾರಣಾ ನ್ಯಾಯಾಲಯಗಳು ಹಾಗೂ ಲೋಕ ಅದಾಲತ್​ಗಳಲ್ಲಿನ ರಾಜಿ ಸಂಧಾನ ಪ್ರಕರಣಗಳನ್ನು ಇತ್ಯರ್ಥಪಡಿಸುವಾಗ ಹೈಕೋರ್ಟ್ ರಚಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ನ್ಯಾಯಪೀಠ ನಿರ್ದೇಶಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 6 =
Remember me
