ಬೆಂಗಳೂರು:ಪಡಿತರ ಅಕ್ರಮ ತಡೆಯುವ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಜಾಗೃತ ದಳ ರಚನೆ ಮಾಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ‌ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.
ಚನ್ನರಾಯಪಟ್ಟಣ ದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಪಡಿತರ ಅಕ್ರಮ ದಾಸ್ತಾನು ಮಾರಾಟ ಮಾಡುತ್ತಿರುವ ದೂರುಗಳು‌ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಜಾಯಿಂಟ್ ಡೈರೆಕ್ಟರ್ ನೇತೃತ್ವದಲ್ಲಿ ಜಾಗೃತದಳ ರಚನೆಗೆ ಚಿಂತನೆ ನಡೆಸಲಾಗಿದೆ ಈ ಮೂಲಕ ಅಕ್ರಮ ತಡೆಗೆ ಕಠಿಣ ಕ್ರಮವಹಿಸಲಾಗಿದೆ ಎಂದರು.
ಇದನ್ನೂ ಓದಿ:ರಕ್ಷಣಾ ಇಲಾಖೆ ಭೂಮಿ ಮೆಟ್ರೋಗೆ ಮಾರಾಟ; ಚರ್ಚ್​ ಆಫ್​ ಸೌತ್​ ಇಂಡಿಯಾದ 59.52 ಕೋಟಿ ರೂ. ಇ.ಡಿ. ವಶಕ್ಕೆ
ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನಲ್ಲಿ ೮೦೦ ಚೀಲ ರಾಗಿ ಅಕ್ರಮ ಸಾಗಾಣೆ ಬಗ್ಗೆ ಮಾಹಿತಿ ಪಡೆಯಲಾಗಿದೆ ಅಲ್ಲದೆ ಜಿಲ್ಲಾ ಆಹಾರ ಉಪ ನಿರ್ದೇಶಕ ರೊಂದಿಗೆ ಮಾತನಾಡಿದ್ದು ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ ಎಲ್ಲೆ ಅಕ್ರಮ ಪಡಿತರ ಮಾರಾಟ ದಾಸ್ತಾನು ಮಾಡಿದವರ ವಿರುದ್ಧ ಹಾಗೂ ದಾಸ್ತಾನು ಮಾಡಲು ಸಹಕರಿಸುವ ವ್ಯಕ್ತಿಗಳ ವಿರುದ್ಧ ವೂ ಕಾನೂನು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
VIDEO: ಡ್ರಗ್ಸ್ ಮಾಫಿಯಾ ವಿರೋಧಿಸಿ ಎಬಿವಿಪಿ ಸಹಿಸಂಗ್ರಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
