ಬೆಂಗಳೂರುಮಂಡ್ಯದಲ್ಲಿ ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ಯಾವುದಕ್ಕೆ ಅನುಮತಿ ಪಡೆದಿರುತ್ತಾರೋ ಅದನ್ನು ಹಾರಿಸಬೇಕು. ರಾಷ್ಟ್ರ ಧ್ವಜ ಹಾರಿಸಲು ಅನುಮತಿ ಪಡೆದು ಭಾಗವಧ್ವಜ ಹಾರಿಸಿರುವುದರಿಂದ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಆಯೋಜಿಸಿದ್ದ ಜಿಎಎ್ಎಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಒಬ್ಬ ಹಿಂದು, ಎಲ್ಲ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದರು.
ಚುನಾವಣೆ ಸಮೀಪಿಸುತ್ತಿರುವುದರಿಂದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ನೀಡುತ್ತಿದ್ದಾರೆ. ಪಂಚಾಯತಿಯವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದರೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ ಎಂದು ಸ್ಪಷ್ಟನೆ ನೀಡಿದರು.
ಸಿದ್ದರಾಮಯ್ಯ ಹಿಂದು ವಿರೋಧಿ ಎಂದು ಘೋಷಣೆ ಕೂಗುತ್ತಿರುವ ಬಗ್ಗೆ ಮಾತನಾಡಿ, ಅವರಿಗೆ ನನ್ನ ಬಗ್ಗೆ ಮಾತನಾಡಲು ಬೇರೆನಿದೆ, ಅದಕ್ಕೆ ಈ ರೀತಿ ಹೇಳುತ್ತಾರೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 3 =
Remember me
