ಬೆಂಗಳೂರು :ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರವಾಹನಗಳನ್ನೇ ಗುರಿಯಾಗಿಸಿ ಕಳ್ಳತನ ನಡೆಸುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ. ಹನುಮಂತ ಬಂಧಿತ ಆರೋಪಿ.
ದೂರುದಾರರು ತಮ್ಮ ದ್ವಿಚಕ್ರ ವಾಹನವನ್ನು ಜೂನ್ 10 ರಂದು ರಾತ್ರಿ ಮುದ್ದಿನಪಾಳ್ಯದಲ್ಲಿರುವ ಮನೆಯ ಮುಂದೆ ನಿಲ್ಲಿಸಿದ್ದಾಗ ಆರೋಪಿ ಕಳವು ಮಾಡಿಕೊಂಡು ಹೋಗಿದ್ದ. ಈ ಬಗ್ಗೆ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ಇನ್ಸ್​ಪೆಕ್ಟರ್ ಲೋಹಿತ್ ಮತ್ತು ಸಿಬ್ಬಂದಿಯವರು ಜುಲೈ 10 ರಂದು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ಇದನ್ನೂ ಓದಿ:ಒಟ್ಟಿಗೇಎರಡು ಕರೊನಾ ರೂಪಾಂತರಿಗಳ ಸೋಂಕು ತಗುಲಿದ ಮಹಿಳೆ!
ಆರೋಪಿಯು ನೀಡಿದ ಮಾಹಿತಿ ಮೇರೆಗೆ ಅನ್ನಪೂರ್ಣೇಶ್ವರಿನಗರ, ಜ್ಞಾನಭಾರತಿ, ಕೆಂಗೇರಿ, ನಂದಿನಿ ಲೇಔಟ್ ಹಾಗೂ ಬ್ಯಾಡರಹಳ್ಳಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಕಳವು ಮಾಡಿದ್ದ ಸುಮಾರು 4 ಲಕ್ಷ ರೂ. ಬೆಲೆ ಬಾಳುವ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಅನ್ನಪೂರ್ಣೇಶ್ವರಿನಗರ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಆರೋಪಿಯು ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರವಾಹನಗಳನ್ನೇ ಗುರಿಯಾಗಿಸಿ ಕಳ್ಳತನ ನಡೆಸುತ್ತಿದ್ದ. ಹ್ಯಾಂಡ್ ಲಾಕ್ ಮುರಿದು ಸುಲಭವಾಗಿ ಕಳ್ಳತನ ಮಾಡಿ, ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ. ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ಎಂದು ವಿಚಾರಣೆಯಲ್ಲಿ ತಿಳಿದು ಬಂದಿದೆ.
ಎರಡು ಕರೊನಾ ರೂಪಾಂತರಿಗಳ ಸೋಂಕು ಒಟ್ಟಿಗೇ ತಗುಲಿದ ಮಹಿಳೆ!

ಎರಡು ಮಕ್ಕಳು ಹೊಂದಿದವರಿಗೆ ಹೆಚ್ಚಿನ ಇಂಕ್ರಿಮೆಂಟು, ಗೃಹ ಖರೀದಿ ಸೌಕರ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 15 =
Remember me
