ಬೆಂಗಳೂರು:ಗ್ಯಾಸ್ ಕಟರ್ ಬಳಸಿ, ಎಟಿಎಂ ಮಷಿನ್ ಒಡೆದು ಕಳ್ಳತನ ಮಾಡಲು ಯತ್ನಿಸಿದ ಘಟನೆ ಆನೇಕಲ್ ತಾಲ್ಲೂಕಿನ ಜಿಗಣಿ ಸಮೀಪದ ಶ್ರೀರಾಮಪುರದಲ್ಲಿನ ನಡೆದಿದೆ.
ಖಾಸಗಿ ಬ್ಯಾಂಕ್​ನ ಎಟಿಎಂ ಒಡೆದು ಹಣ ದೋಚಲು ಆರೋಪಿಗಳು ಸಂಚು ರೂಪಿಸಿದ್ದರು. ಅದರಂತೆ ಗ್ಯಾಸ್ ಕಟರ್ ಬಳಸಿ ಎಟಿಎಂ ಬಾಕ್ಸ್​ ತೆರೆಯಲು ಪ್ರಯತ್ನ ಪಟ್ಟಿದ್ದಾರೆ. ಈ ವೇಳೆ ಕಳ್ಳರ ಕೃತ್ಯವನ್ನ ಸ್ಥಳೀಯರು ಗಮನಿಸಿದ್ದಾರೆ.
ಎಟಿಎಂ ಒಡೆದು ಹಣ ದರೋಡೆ ಮಾಡಲು ಯತ್ನಿಸುತ್ತಿರುವುದು ಸ್ಥಳೀಯರ ಗಮನಕ್ಕೆ ಬರುತ್ತಿದ್ದಂತೆ, ಗ್ಯಾಸ್​ ಕಟರ್​ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಹಣ ದೋಚುವ ಪ್ರಯತ್ನ ವಿಫಲವಾಗಿದ್ದು, ಎಟಿಎಂ ಮಷಿನ್​ನ್ನು ಧ್ವಂಸಗೊಳಿಸಿದ್ದಾರೆ.
ಕಳ್ಳರ ಈ ಕೃತ್ಯ ಜಿಗಣಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಎಸ್​​ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಜಿಗಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 14 =
Remember me
