ಬೆಂಗಳೂರು:ರಾಜ್ಯದಲ್ಲಿ ಆ್ಯಸಿಡ್ ನಿಷೇಧದ ಕುರಿತು ಚಿಂತನೆ ನಡೆಸಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.
ಇದನ್ನು ಓದಿ:ಶ್ರೀನಗರ: 6400 ಕೋಟಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಸದಾಶಿವನಗರದ ತಮ್ಮ ನಿವಾಸದ ಬಳಿ‌ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ್ಯಸಿಡ್ ದುರ್ಬಳಕೆಯಾಗುತ್ತಿದೆ. ಇದರಿಂದ ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಎಲ್ಲರ ಕೈಗೂ ಸುಲಭವಾಗಿ ಆ್ಯಸಿಡ್ ಸಿಗಬಾರದು. ಅಗತ್ಯತೆ ಇರುವರಿಗೆ ಮಾತ್ರ ಸಿಗಬೇಕು. ಈ ಕುರಿತು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು, ಇನ್ನೆರಡು ದಿನದಲ್ಲಿ ಸಂಬಂಧಪಟ್ಟ ಇಲಾಖೆ ಹಾಗೂ ಇಂಡಸ್ಟ್ರಿಗಳಿಗೆ ಪತ್ರ ಬರೆದು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಕೆಲ ದಿನಗಳ ಹಿಂದೆಯಷ್ಟೇ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಕೇರಳ ಮೂಲದ ಅಭಿನ್‌ ಎಂಬಾತ ಈ ಕೃತ್ಯ ಎಸಗಿದ್ದ. ಕಡಬದ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ ಸಂಬಂಧ ಆರೋಪಿ ಅಭಿನ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ದಾಳಿಗೆ ಒಳಗಾದ ವಿದ್ಯಾರ್ಥಿನಿಯರಿಗೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡುವುದುದಾಗಿ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿದೆ. ಅಲ್ಲದೆ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಯರನ್ನು ಅವರು ಭೇಟಿ ಮಾಡಿ ಸಾಂತ್ವನ ಹೇಳಿದ್ದರು‌.
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಕುರಿತು ಕೆಲವು ಮಹತ್ವದ ಸುಳಿವು ಸಿಕ್ಕಿವೆ. ಘಟನೆಯ ನಂತರ ಬಟ್ಟೆ ಬದಲಾಯಿಸಿಕೊಂಡು, ಬಸ್ಸಿನಲ್ಲಿ ಹೋಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ. ಪ್ರಕರಣದ ಎಲ್ಲ ವಿಷಯಗಳನ್ನು ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ. ಆದಷ್ಟು ಶೀಘ್ರ ಆರೋಪಿಯನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ವಿಶ್ವಾಸ ವ್ಯಕ್ತಪಡಿಸಿದರು.
ರಾಕ್ಷಸಿ ತಾಯಿಯಿಂದಲೇ ಚಿತ್ರಹಿಂಸೆಗೊಳಗಾದ ಮಗುವನ್ನು ನೋಡಬೇಕು ಎಂದಿದ್ದೇಕೆ ಧ್ರುವ ಸರ್ಜಾ! ಹೀಗ್ಯಾಕೆ ಹೇಳಿದ್ರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 4 =
Remember me
