ಬೆಂಗಳೂರು:ಲಾಕ್​ಡೌನ್​ನಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಕುಸಿದಿರುವ ಹಿನ್ನೆಲೆಯಲ್ಲಿ ಪ್ರಮುಖ ಆದಾಯ ಮೂಲವಾದ ‘ಮದ್ಯ’ ವಹಿವಾಟು ಪುನರಾರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ನಿರ್ಬಂಧಗಳಲ್ಲಿ ಕೆಲವು ಏ.20ರ ಬಳಿಕ ಸಡಿಲುಗೊಳ್ಳಲಿವೆ ಎಂಬ ಸುಳಿವು ಈ ನಿರ್ಧಾರಕ್ಕೆ ಮೂಲ ಕಾರಣ. ಕೆಲವು ಸಚಿವರು, ಅಧಿಕಾರಿಗಳು ಇದಕ್ಕೆ ಒತ್ತಾಸೆಯಾಗಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಏ.20ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ.
ಈ ಹಿಂದೆ ಎಂಎಸ್​ಐಎಲ್ ಮಳಿಗೆಗಳಲ್ಲಿ ಪಾರ್ಸೆಲ್ ಮಾರಾಟಕ್ಕೆ ಅನುಮತಿ ನೀಡಬೇಕೆಂಬ ಹಂತದವರೆಗೆ ಪ್ರಸ್ತಾವನೆ ತಲುಪಿತ್ತು. ಆದರೆ ಕೇಂದ್ರ ಸರ್ಕಾರದ ನಿರ್ದೇಶನದ ಬಳಿಕ ಮುಂದಿನ ನಿರ್ಧಾರ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿ, ವಿಷಯದ ಚರ್ಚೆಗೆ ತೆರೆ ಎಳೆದಿದ್ದರು. ಪರಿಸ್ಥಿತಿ ಅವಲೋಕಿಸಿ ಏ.20ರ ಬಳಿಕ ಲಾಕ್​ಡೌನ್ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವುದನ್ನು ಕೇಂದ್ರ ಆಯಾ ರಾಜ್ಯಗಳ ವಿವೇಚನೆಗೆ ಬಿಟ್ಟಿದ್ದು, ವಿವಿಧ ದುಷ್ಪರಿಣಾಮಗಳಿಗೆ ಪರಿಹಾರ ಹಾಗೂ ರಾಜ್ಯದ ಆದಾಯದ ದೃಷ್ಟಿಯಿಂದ ಮದ್ಯದ ಸೀಮಿತ ವಹಿವಾಟಿಗೆ ಅನುಮತಿ ಸಿಗಬಹುದು ಎಂದು ಕೆಲವರು ಆಸೆಗಣ್ಣಿನಿಂದ ನೋಡುತ್ತಿದ್ದಾರೆ.
ಮೂರು ತಿಂಗಳ ಮನೆ ಬಾಡಿಗೆ ತಗೋಬೇಡಿ: ಮಾಲೀಕರಿಗೆ ಮಹಾರಾಷ್ಟ್ರ ಸರ್ಕಾರದ ತಾಕೀತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
