ಬೆಂಗಳೂರು:ಕರೊನಾ ವೈರಸ್‌ ಭೀತಿ ಸದ್ಯ ಪ್ರತಿಯೊಬ್ಬರನ್ನೂ ಕಾಡುತ್ತಿರುವ ಭಯಾನಕ ಸ್ವಪ್ನ. ಯಾರಿಗೆ, ಯಾವಾಗ, ಹೇಗೆ ಈ ಸೋಂಕು ತಗುಲುತ್ತದೆಯೋ ಹೇಳುವುದೇ ಕಷ್ಟ.ಇದು ಒಂದೆಡೆಯಾದರೆ, ರೋಗಲಕ್ಷಣಗಳು ಇಲ್ಲದಿದ್ದರೂ ಸೋಂಕು ಕಾಣಿಸಿಕೊಳ್ಳುವ ಸಮಸ್ಯೆ ಮತ್ತೊಂದೆಡೆ. ಇದೇ ರೀತಿಯ ಸಂದಿಗ್ಧ ಪರಿಸ್ಥಿತಿಯಲ್ಲಿ ಇದ್ದಾರೆ ಸಚಿವ ಸಿ.ಟಿ.ರವಿ.
ಇವರಿಗೆ ಒಂದೇ ವಾರದಲ್ಲಿ ಒಮ್ಮೆ ಸೋಂಕು ಇದೆ ಎಂಬ ಪಾಸಿಟಿವ್‌ ವರದಿ ಬಂದಿದ್ದು, ಇನ್ನೊಮ್ಮೆ ನೆಗೆಟಿವ್‌ ಬಂದಿದೆ. ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ರವಿ, ಒಂದು ವಾರದೊಳಗಿನ ಎರಡು ಟೆಸ್ಟ್‌ನಲ್ಲಿ ಒಮ್ಮೆ ನೆಗೆಟಿವ್, ಒಮ್ಮೆ ಪಾಸಿಟಿವ್ ಬಂದಿದೆ, ಅದಕ್ಕಾಗಿ ನಾನು ಇಂದು 3ನೇ ಟೆಸ್ಟ್ ಮಾಡಿಸಿದ್ದೇನೆ. ಥರ್ಡ್ ಅಂಪೈರ್ ರಿಸಲ್ಟ್‌ಗಾಗಿ ಕಾಯುತ್ತಿದ್ದೇನೆ ಎಂದಿದ್ದಾರೆ.
ನಾನು ಬೆಳಗ್ಗೆ ಸೂರ್ಯ ನಮಸ್ಕಾರ, ಅರ್ಧಕಟಿ ಚಕ್ರಾಸನ, ನಾಡಿಶುದ್ದಿ ಕ್ರಿಯೆಗಳು, ಅನುಲೋಮ ವಿಲೋಮ ಪ್ರಾಣಾಯಾಮ ಪೂರ್ಣಗೊಳಿಸಿದ್ದೇನೆ. ಒಂದು ಗಂಟೆಯ ವಿವಿಧ ಯೋಗಾಭ್ಯಾಸದ ನಂತರ 10 ನಿಮಿಷ ಶವಾಸನ ಹಾಕಿದ್ದೇನೆ. ಮೇಲ್ನೋಟಕ್ಕೆ ಯಾವುದೇ ವ್ಯತ್ಯಾಸ ನನಗೆ ಗೊತ್ತಾಗಿಲ್ಲ ಎಂದಿರುವ ಸಚಿವರು, ಈ ಮೂಲಕ ತಾವು ಆರೋಗ್ಯದಿಂದ ಇದ್ದು, ಯಾವುದೇ ಸಮಸ್ಯೆ ಇಲ್ಲ ಎಂಬುದಾಗಿ ಹೇಳಿದ್ದಾರೆ.
ಬೆಳಿಗ್ಗೆ ಸೂರ್ಯ ನಮಸ್ಕಾರ, ಅರ್ಧಕಟಿ ಚಕ್ರಾಸನ, ನಾಡಿಶುದ್ದಿ ಕ್ರಿಯೆಗಳು, ಅನುಲೋಮ ವಿಲೋಮ ಪ್ರಾಣಾಯಾಮ ಪೂರ್ಣಗೊಳಿಸಿದ್ದೇನೆ. ಒಂದು ಗಂಟೆಯ ವಿವಿಧ ಯೋಗಾಭ್ಯಾಸದ ನಂತರ 10 ನಿಮಿಷ ಶವಾಸನ ಹಾಕಿದ್ದೇನೆ. ಮೇಲ್ನೋಟಕ್ಕೆ ಯಾವುದೇ ವ್ಯತ್ಯಾಸ ನನಗೆ ಗೊತ್ತಾಗಿಲ್ಲ.
— C T Ravi 🇮🇳 ಸಿ ಟಿ ರವಿ (@CTRavi_BJP)July 12, 2020

ಬೆಂಗಳೂರಿನಲ್ಲಿ ಮಾಸ್ಕ್‌ ಹಾಕದವರಿಗೆ ಬಿದ್ದದ್ದು ಒಂದು ಕೋಟಿ ರೂಪಾಯಿ ದಂಡ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 − 14 =
Remember me
