ಹುಬ್ಬಳ್ಳಿ:ವಾಟ್ಸ್​ಆ್ಯಪ್​ನಲ್ಲಿ ಅವಹೇಳನಕಾರಿ ಸ್ಟೇಟಸ್​ ಹಾಕಿಕೊಂಡಿದ್ದ ಆರೋಪಿ, ಆನಂದನಗರ ನಿವಾಸಿ ಅಭಿಷೇಕ ಹಿರೇಮಠಗೆ ಪೊಲೀಸ್​ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ.
ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಅಭಿಷೇಕ ಅವಹೇಳನಕಾರಿ ಸ್ಟೇಟಸ್​ ಇಟ್ಟಿದ್ದ ಆರೋಪದಡಿ ಬಂಧಿತನಾಗಿದ್ದಾನೆ. ಈತನಿಗೆ ಏ.22ರಿಂದ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಕೀಲ ಸಂಜು ಬಡಸ್ಕರ 4ನೇ ಅಧಿಕ ದಿವಾಣಿ ಮತ್ತು ಜೆಎಂಎಫ್​ಸಿ ನ್ಯಾಯಾಲಯಕ್ಕೆ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ:ಭೀಕರ ಅಪಘಾತ, ಆರು ಮಂದಿ ಸ್ಥಳದಲ್ಲೇ ಸಾವು; ಮದುವೆ ಮುಗಿಸಿಕೊಂಡು ಮರಳುವಾಗ ಅವಘಡ..
ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಜಾಮೀನು ಅರ್ಜಿ ವಜಾಗೊಳಿಸಿದೆ. ಆದರೆ, ಅಭಿಷೇಕನಿಗೆ ಪರೀಕ್ಷೆ ಬರೆಯಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಜೈಲಿನಲ್ಲೇ ಅಭ್ಯಾಸ ಮಾಡಲು ಪುಸ್ತಕ, ಮತ್ತಿತರ ವ್ಯವಸ್ಥೆ ಮಾಡಬೇಕು. ಸೂಕ್ತ ಬಂದೋಬಸ್ತ್​ ಮೂಲಕ ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ ಎಂದು ಅಭಿಷೇಕ ಪರ ವಕೀಲ ಸಂಜು ಬಡಸ್ಕರ “ವಿಜಯವಾಣಿ’ಗೆ ತಿಳಿಸಿದ್ದಾರೆ.
ಮೊನ್ನೆ ಎಚ್​ಡಿಕೆ, ನಿನ್ನೆ ಡಿಕೆಶಿ, ಇಂದು ಮೊಯ್ಲಿ!; ಏನದು?

ರಾಜ್ಯದಲ್ಲಿ ಇನ್ನೂ 4 ದಿನ ಮಳೆ; ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 8 =
Remember me
