ಯಾದಗಿರಿ:ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಹತ್ತು ವರ್ಷಗಳಲ್ಲಿ ಜನರ ಭಾವನೆಗಳನ್ನು ಕೆರಳಿಸಿ ಜಾತಿ, ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ:ಪ್ರಜ್ವಲ್ ಚಾಲಕ ಕಾರ್ತಿಕ್​ನನ್ನು ಮಲೇಷ್ಯಾಗೆ ಕಳಿಸಿದ್ದು ಯಾರು?: ಎಚ್​ಡಿಕೆ ಪ್ರಶ್ನೆ
ಯಾದಗಿರಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯರನ್ನು ಹಿಂದೂ, ಮುಸಲ್ಮಾನರು, ಕ್ರಿಶ್ಚಿಯನ್ನರ ಹೆಸರಿನಲ್ಲಿ ವಿಭಜಿಸಿ ಬೆಂಕಿ ಹಚ್ಚುವ ಬಿಜೆಪಿ ಕೃತ್ಯದ ವಿರುದ್ಧ ಸಮಾಜವನ್ನು ಮಾನವೀಯವಾಗಿ ಬೆಸೆಯುವ ಕೆಲಸಕ್ಕೆ ರಾಹುಲ್ ಗಾಂಧಿ ಅವರು ಮುಂದಾಗಿದ್ದಾರೆ. ದೇಶದ ಐಕ್ಯತೆ ಮರು ಸ್ಥಾಪಿಸಲು, ಸಾರ್ವಭೌತ್ವವನ್ನು ಕಾಪಾಡಲು ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ, ಮಣಿಪುರದಿಂದ ಮುಂಬೈವರೆಗೆ ಪಾದಯಾತ್ರೆ ಮಾಡಿದರು. ಭಾರತ್ ಜೋಡೋ ಹೆಸರಿನಲ್ಲಿ ದೇಶದ ಜನರನ್ನು ಪ್ರೀತಿ, ವಿಶ್ವಾಸದಿಂದ ಒಗ್ಗೂಡಿಸುವ ಪ್ರಯತ್ನ ಮಾಡಿದರು ಎಂದರು.
ಮುಸಲ್ಮಾನರಿಗೆ ಮೀಸಲಾತಿ 30 ವರ್ಷಗಳಿಂದ ನೀಡಲಾಗುತ್ತಿದೆ:ಮೀಸಲಾತಿ ಪರವಾಗಿರುವ ಏಕೈಕ ಪಕ್ಷವೆಂದರೆ ಕಾಂಗ್ರೆಸ್ ಪಕ್ಷ. ಬಿಜೆಪಿಯವರು ಎಲ್ಲ ಕಾಲದಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಮೀಸಲಾತಿಯ ವಿರೋಧವಾಗಿ ಕೆಲಸ ಮಾಡಿದ್ದಾರೆ. ಗ್ರಾಮ ಪಂಚಾಯತಿ, ನಗರಸಭೆ ಸೇರಿದಂತೆ ವಿವಿಧ ಸ್ತರಗಳಲ್ಲಿ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿ ನೀಡುವುದನ್ನು ಕೇಂದ್ರ ಬಿಜೆಪಿ ಅವರು ವಿರೋಧಿಸಿದ್ದರು. ಬಿಜೆಪಿಯ ರಾಮ ಜೋಯಿಸ್ ಅವರು ಈ ಮೀಸಲಾತಿ ನೀಡಿಕೆಯನ್ನು ಸಂವಿಧಾನ ಬಾಹಿರ ಎಂದು ನ್ಯಾಯಾಲಯದಲ್ಲೇ ವಾದಿಸಿದ್ದರು, ಮುಸಲ್ಮಾನರಿಗೆ ಮೀಸಲಾತಿಯನ್ನು ಕಳೆದ 30 ವರ್ಷಗಳಿಂದ ನೀಡಲಾಗುತ್ತಿದೆ. ದಲಿತರಿಗೆ, ಹಿಂದುಳಿದವರಿಗೆ ನೀಡಲಾದ ಮೀಸಲಾತಿಯನ್ನು ರದ್ದುಪಡಿಸಿ ಮುಸಲ್ಮಾನರಿಗೆ ಕಾಂಗ್ರೆಸ್ ನೀಡಲಿದೆ ಎಂದು ಮೋದಿ ಅವರು ನಿರಂತರವಾಗಿ ಸುಳ್ಳು ಹೇಳುತ್ತಾ ಓಡಾಡುತ್ತಿದ್ದಾರೆ. ಈ ಸುಳ್ಳನ್ನು ನಂಬಬಾರದು ಎಂದು ಮನವಿ‌ ಮಾಡುತ್ತೇನೆ ಎಂದು ಹೇಳಿದರು.
ನರೇಂದ್ರ ಮೋದಿಯವರ ಬಳಿ ಹಣ ಜಾಸ್ತಿ ಇದ್ದರೆ, ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ತುಂಬಲು ಏನು ಅಡ್ಡಿಯಾಗಿತ್ತು? ಅದನ್ನು ತುಂಬಿದ್ದರೆ ಸುಮಾರು 50% ಹಿಂದುಳಿದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಕೆಲಸ ದೊರಕುತ್ತಿತ್ತು. ಇನ್ನುಳಿದ 50% ಇತರರಿಗೆ ದೊರಕುತ್ತಿತ್ತು. ಈ ಖಾಲಿ ಹುದ್ದೆಗಳನ್ನು ಏಕೆ ತುಂಬಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಮೋದಿ ಅವರ ರಾಜಕೀಯ ಅಂತ್ಯ ಕಾಲವಿದು:ರಾಜ್ಯ ಸರ್ಕಾರದ ಬಳಿ ಸಂಬಳ ಕೊಡಲು ದುಡ್ಡಿಲ್ಲದೇ ಹೋಗಿದ್ದರೆ 8 ತಿಂಗಳಲ್ಲಿ 5 ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಾಗುತ್ತಿತ್ತೇ? ವೇತನ ದೊರಕಿಲ್ಲ ಎಂದು ಸರ್ಕಾರಿ ನೌಕರರು ಹೇಳಿದ್ದಾರೆಯೇ? ಮೋದಿ ಅವರು ದೇಶದ ಪ್ರಧಾನಿಯಾಗಿ ಬರೀ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಇವರ ಸುಳ್ಳುಗಳನ್ನು ದೇಶದ ಜನ ಇನ್ನೂ ಎಷ್ಟು ವರ್ಷ ನಂಬಬೇಕು, ಮೋದಿ ಅವರ ರಾಜಕೀಯ ಅಂತ್ಯ ಕಾಲವಿದು. 2014 ರಲ್ಲಿ ಅನೇಕ ಭರವಸೆಗಳನ್ನು ನೀಡದ್ದು, ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಾಕುವುದಾಗಿ ಹೇಳಿದ್ದರು ಜೊತೆಗೆ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುಸಾಗಿ ಹೇಳಿ ನಾಮ‌ ಹಾಕಿದರು ಎಂದು ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ, ಅಗತ್ಯ ವಸ್ತುಗಳ ಬೆಲೆ ಇಳಿಸುವುದಾಗಿ, ರೂಪಾಯಿ ಬೆಲೆ ಹೆಚ್ಚು ಮಾಡುವುದಾಗಿ ಮಾತು ಕೊಟ್ಟಿದ್ದರು. ಮೋದಿಯವರ ಭಾಷಣದಲ್ಲಿದ್ದ ಅಚ್ಚೇ ದಿನ್ ಭಾರತಕ್ಕೆ ಬರಲೇ ಇಲ್ಲ. ಒಂದೇ ಒಂದು ಭರವಸೆಯೂ ಈಡೇರಲಿಲ್ಲ ಎಂದು ತಿರುಗೇಟು ನೀಡಿದರು.
ಬಿಜೆಪಿ ವಿರುದ್ಧ ಧ್ವನಿ ಎತ್ತಿದಕ್ಕೆ ಪ್ರಕರಣ ದಾಖಲು!: ಸಿಎಂ ರೇವಂತ್ ರೆಡ್ಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
