ವಿಜಯಪುರ:ಇಲ್ಲಿನ ಬಬಲೇಶ್ವರ ತಾಲೂಕಿನ ದೇವರಗೆಣ್ಣೂರ ಹಾಗೂ ಸುತಗುಂಡಿ ಪುನರ್ವಸತಿ ಕೇಂದ್ರದ ಬಳಿ ಕಂಡುಬಂದ ಹೆಜ್ಜೆಗುರುತು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.
ಸ್ಥಳಕ್ಕೆ ಆಗಮಿಸಿದ್ದ ವಿಜಯಪುರ ವಲಯ ಅರಣ್ಯಾಧಿಕಾರಿ ಪ್ರಭು ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಅದು ಯಾವುದರ ಹೆಜ್ಜೆ ಎಂಬ ಬಗ್ಗೆಯೇ ಚರ್ಚೆ ನಡೆಯುತ್ತಿದೆ.
ಇದನ್ನೂ ಓದಿ:ಕ್ವಾರಂಟೈನ್​ ಕೇಂದ್ರದಲ್ಲಿದ್ದವರಿಗೆ ಕೊಟ್ಟ ಅನ್ನದಲ್ಲಿ ಹುಳ: ಬಿಪಿ ಮಾತ್ರೆ ಕೇಳಿದ್ರೂ ಕೊಡ್ತಿಲ್ಲ…
ಎಮ್ಮೆ ಹಾಗೂ ಮೇಕೆಗಳ ಮೇಲೆ ಚಿರತೆ ದಾಳಿ ಮಾಡಿದೆ. ಅದು ಚಿರತೆಯದ್ದೇ ಹೆಜ್ಜೆಗುರುತು. ಒಂದಷ್ಟು ಜನ ಚಿರತೆಯನ್ನು ನೋಡಿ ಜೋರಾಗಿ ಕೂಗಿಕೊಂಡಿದ್ದಾರೆ. ಕೂಗು ಕೇಳಿ ಅದು ಓಡಿ ಹೋಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಅಲ್ಲದೆ, ಕೂಡಲೇ ಚಿರತೆಯನ್ನು ಸೆರೆ ಹಿಡಿಯಲು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸುತ್ತಿದ್ದಾರೆ.
ಆದರೆ ಅಧಿಕಾರಿಗಳು ಮಾತ್ರ ಇದು ಚಿರತೆಯದ್ದು ಅಲ್ಲವೇ ಅಲ್ಲ. ಕತ್ತೆ ಕಿರುಬ ಬಂದಿರುವ ಸಾಧ್ಯತೆ ಇದೆ ಎನ್ನುತ್ತಿದ್ದಾರೆ. ಅಲ್ಲಿ ಮೂಡಿರುವ ಹೆಜ್ಜೆ ಚಿರತೆಯದ್ದಾ? ಕತ್ತೆ ಕಿರುಬಂದಾ ಎಂಬ ಪರಿಶೀಲನೆ ನಡೆಯುತ್ತಿದೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಈಕೆ ‘ಹೆಪ್ಪುಗಟ್ಟಿದ ಮಹಿಳೆ’ ಎಂದೇ ಪ್ರಸಿದ್ಧ..; ಆದ್ರೆ ಈ ಹೆಸರು ಬರಲು ಕಾರಣವಾದ ಘಟನೆ ಮೈ ಜುಂ ಎನ್ನಿಸುವಷ್ಟು ಭಯಾನಕ..!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − four =
Remember me
