ಬೆಂಗಳೂರು:ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಮೇಲಿಂದ ಮೇಲೆ ಬಂದು ಹೋಗುತ್ತಿರುವುದನ್ನು ನೋಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಪ್ರೇರಣೆಗೊಂಡಂತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ತರಲು ಸರ್ವ ಸಹಕಾರ ನೀಡುವುದಾಗಿ ಹೇಳಿರುವ ಅವರು, ಯಾವಾಗ ಕರೆದರೂ ನಾನು ರಾಜ್ಯಕ್ಕೆ ಬರಲು ಸಿದ್ಧ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಪಕ್ಷಕ್ಕಾಗಿ ದುಡಿದಿದ್ದಾನಂತೆ ಸೈಲೆಂಟ್ ಸುನೀಲ್; ಆತ ಪಕ್ಷದ ಸದಸ್ಯನೇ ಅಲ್ಲ ಎಂದ ಕಟೀಲ್
ಕೋಲಾರದಲ್ಲಿನ ಸಮಾವೇಶದ ಬಳಿಕ ಇಂದು ರಾಜಧಾನಿ ಬೆಂಗಳೂರಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ವಿಷಯ ತಿಳಿಸಿದರು. ದೇಶದಲ್ಲಿ ಬಿಜೆಪಿ ಏನು ಮಾಡುತ್ತಿದೆ, ಕಾಂಗ್ರೆಸ್ ಏನು ಮಾಡುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ ಎಂದ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿರುವ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ:ನಾಯಕರು ಯಾರೇ ಪಕ್ಷ ಬಿಟ್ಟರೂ ನಷ್ಟವಿಲ್ಲ; ಪಕ್ಷಕ್ಕೆ ಎಲ್ಲವನ್ನೂ ಜೀರ್ಣಿಸಿಕೊಳ್ಳುವ ಶಕ್ತಿ ಇದೆ: ಶೆಟ್ಟರ್​ ಬಗ್ಗೆ ಸಿಎಂ ಪ್ರತಿಕ್ರಿಯೆ
ಇಡೀ ದೇಶದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಇರೋದು 40% ಬಿಜೆಪಿ ಸರ್ಕಾರ. ಈ ಸಲ ಬಿಜೆಪಿಯನ್ನು ಗುಡಿಸಿಬಿಡಬೇಕು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ನಾನು ಎಲ್ಲಾ ಸಹಕಾರ ನೀಡುತ್ತೇನೆ. ನಮ್ಮ ಪಕ್ಷ 150 ಸೀಟ್​​ಗಳಿಂದ ಗೆಲುವು ಸಾಧಿಸಬೇಕು ಎಂದ ರಾಹುಲ್, ರಾಜ್ಯದಲ್ಲಿರುವ ಕಾಂಗ್ರೆಸ್​ ಅಲೆ ನೋಡಿದರೆ ಗೊತ್ತಾಗುತ್ತದೆ, ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ಸೇ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.
2023ರ ಅಂತಿಮ ಮತದಾರರ ಪಟ್ಟಿ: ಇಲ್ಲಿದೆ ಜಿಲ್ಲಾವಾರು, ಕ್ಷೇತ್ರವಾರು ವಿವರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
