ಬೆಂಗಳೂರು:ಈ ಬಾರಿ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ಅಕ್ಟೋಬರ್ 3ರಿಂದ ಅ.12ರವರೆಗೆ ನಡೆಯಲಿದೆ. ಒಟ್ಟು 21 ದಿನಗಳ ಕಾಲ ದೀಪಾಲಂಕಾರ ಇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು.
ಇದನ್ನೂ ಓದಿ:ಪಶ್ಚಿಮ ಬಂಗಾಳ: ಭೀಕರ ಕಾರು ಅಪಘಾತದಲ್ಲಿ 6 ಮಂದಿ ದುರ್ಮರಣ: ಇಬ್ಬರ ಸ್ಥಿತಿ ಚಿಂತಾಜನಕ
ದಸರಾ ಮಹೋತ್ಸವ ಸಂಬಂಧ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಹೈ ಪವರ್ ಕಮಿಟಿ ಸಭೆಯಲ್ಲಿ ನಡೆಸಲಾಯ್ತು.ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಸಿಎಂ ಸಿದ್ದರಾಮಯ್ಯ ಅವರು, ಅಕ್ಟೋಬರ್ 3 ರಿಂದ 12 ದಿನಾಂಕದವರಿಗೆ ದಸರಾ ಮಹೋತ್ಸವ ನಡೆಯಲಿದೆ. ಅಕ್ಟೋಬರ್ 3ರಂದು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದ್ದು ಅ.12 ರಂದು ಜಂಬೂ ಸವಾರಿ ನಡೆಯಲಿದೆ.
ಈ ಬಾರಿ ದಸರಾ ಮಹೋತ್ಸವನ್ನು ಯಾರು ಉದ್ಘಾಟನೆ ಮಾಡಬೇಕು ಎಂಬುದು ತೀರ್ಮಾನ ಮಾಡಲು ಸಭೆಯಲ್ಲಿ ಸರ್ವಾನುಮತದಿಂದ ನನಗೆ ಅಧಿಕಾರ ಕೊಟ್ಟಿದ್ದಾರೆ. ಕಾರ್ಯಕಾರಿ ಸಮಿತಿ ಮಾಡಿ ಅಲ್ಲಿ ನಿರ್ಣಯ ಮಾಡ್ತಾರೆ. ದಸರಾ ಉತ್ಸವ ಜನರ ಉತ್ಸವ ಆಗಬೇಕು. ಕೊರೊನಾ – ಬರದ ಕಾರಣಕ್ಕೆ ಕಳೆದ ಬಾರಿ ವಿಜೃಂಭಣೆಯಿಂದ ಆಚರಣೆ ಮಾಡಲಾಗಲಿಲ್ಲ, ಆದರೆ ಈ ಬಾರಿಯ ದಸರಾ ಅದ್ಧೂರಿಯಾಗಿ ನಡೆಸೋಣ ಎಂದು ಹೇಳಿದರು.
ಮುಖ್ಯಮಂತ್ರಿ@siddaramaiahಅವರು ಇಂದು "ದಸರಾ ಮಹೋತ್ಸವ -2024" ರ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ, ರೂಪುರೇಷೆಗಳ ಕುರಿತು ಚರ್ಚಿಸಿದರು.
ಉಪಮುಖ್ಯಮಂತ್ರಿ@DKShivakumar, ಸಚಿವರಾದ@CMahadevappa,@thekjgeorge,@HKPatilINC, ಕೆ. ವೆoಕಟೇಶ್, ಮುಖ್ಯಮoತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮೈಸೂರು, ಚಾಮರಾಜನಗರ,…pic.twitter.com/wsKvKIX3x6
— CM of Karnataka (@CMofKarnataka)August 12, 2024

ಗ್ಯಾರಂಟಿ ಯೋಜನೆಗಳು ಪ್ರತಿಬಿಂಬಿಸಲಿ:ಕಳೆದ ವರ್ಷ ಕೊರೋನಾ, ಬರಗಾಲ ಇತ್ಯಾದಿ ಕಾರಣಗಳಿಂದ ಮೈಸೂರು ದಸರಾವನ್ನು ಅದ್ಧೂರಿಯಾಗಿ ನಡೆಸಲು ಆಗಿರಲಿಲ್ಲ. ಆದರೆ, ಈ ಬಾರಿ ದಸರಾಕ್ಕೆ ಕೊರತೆ ಮಾಡುವುದು ಬೇಡ. ಈ ಬಾರಿ ಮೈಸೂರು ದಸರಾ ವಿಜ್ರಂಭನೆಯಿಂದ ನಡೆಯಲಿ. ಈ ಬಾರಿಯ ಮೈಸೂರು ದಸರಾದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ‌ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ. ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು. ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ ಸೇರಿ ಪ್ರತಿಯೊಂದೂ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು. ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾರ್ಥಕ‌ ಕೆಲಸಗಳ ಪ್ರದರ್ಶನ ಮತ್ತು ತಿಳಿವಳಿಕೆ ಮೂಡಿಸಬೇಕು ಎಂದು ಸಭೆಯಲ್ಲಿ ಸಿಎಂ ತಿಳಿಸಿದ್ದಾರೆ.
ದೀಪಾಲಂಕಾರ ಈ ಬಾರಿ 21 ದಿನ ಇರಲಿ:ದಸರಾ ಮಹೋತ್ಸವದ ವೇಳೆ ಸಾಂಸ್ಕೃತಿಕ ನಗರಿ ಮೈಸೂರು ಈ ಬಾರಿಯೂ ವಿದ್ಯುದ್ದೀಪಗಳಿಂದ ಝಗಮಗಿಸಲಿದೆ. ದೀಪಾಲಂಕಾರ ಈ ಬಾರಿ 21 ದಿನ ಇರಲಿ. ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆ ಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಗೋಲ್ಡ್ ಕಾರ್ಡ್ ಗಳನ್ನು ಮುಂಚಿತವಾಗಿ ಮಾಡಬೇಕು. ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು ಎಂದು ಸೂಚಿಸಿದರು.
‘ಕರ್ನಾಟಕ ಸಂಭ್ರಮ -50’ ನವೆಂಬರ್ ವರೆಗೂ ನಡೆಯಲಿದೆ. ದಸರಾದಲ್ಲಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಬೇಕು. ಏರ್ ಶೋಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. ಸ್ವಲ್ಪ ಹೆಚ್ಚಿನ ಸಮಯ ಏರ್ ಶೋ ನಡೆಸಲೂ ವಿನಂತಿಸಲಾಗುವುದು, ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ಮಾಮೂಲು ಹಳೆ ಪದ್ಧತಿಗಳಲ್ಲೇ ಆಯೋಜನೆ ಮಾಡುವುದಕ್ಕಿಂತ ಈ ಬಾರಿಯ ದಸರಾದಲ್ಲಿ ವಿಶೇಷತೆ ಇರಲಿ ಎಂದು ಸೂಚಿಸಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಸಿ ಮಹದೇವಪ್ಪ, ಕೆ.ಜೆ. ಜಾರ್ಜ್​, ಎಚ್.ಕೆ. ಪಾಟೀಲ್​ , ಕೆ. ವೆoಕಟೇಶ್, ಮುಖ್ಯಮoತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಯ ಶಾಸಕರುಗಳು ಹಾಗೂ ಮುಖ್ಯಮoತ್ರಿಯರ ಅಪರ ಮುಖ್ಯ ಕಾರ್ಯದರ್ಶಿಎಲ್.ಕೆ.ಅತೀಕ್ ಸೇರಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಅರಣ್ಯದಂಚಿನ ಜನರಿಗೆ ವಿಮೆ, ಚರ್ಚಿಸಿ ಕ್ರಮ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:3 × one =
Remember me
