ಬೆಂಗಳೂರು:2024-25 ನೇ ಸಾಲಿನ ದೇವರಾಜ ಅರಸು ಪ್ರಶಸ್ತಿ ಘೋಷಣೆಯಾಗಿದೆ. ರಾಜ್ಯ ಸರ್ಕಾರ ಹಿರಿಯ ರಾಜಕಾರಣಿ, ಮಾಜಿ ಸಚಿವ ಎಸ್.ಕೆ. ಕಾಂತ ಅವರಿಗೆ ಪ್ರಶಸ್ತಿ ಘೋಷಣೆ ಮಾಡಿದೆ. ಆಗಸ್ಟ್ 20ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುತ್ತೆ.
ಇದನ್ನೂ ಓದಿ:ಗ್ಯಾರಂಟಿ ಯೋಜನೆಗಳಿಗೆ ಹಣ ಇಟ್ಟಾಗಿದೆ; ಪರಿಷ್ಕರಣೆ ಕುರಿತು ಚರ್ಚೆಯಾಗಿಲ್ಲ; ಸಚಿವ ಪರಮೇಶ್ವರ
ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಡಿ.ದೇವರಾಜ ಅರಸುರವರ ಜನ್ಮದಿನಾಚರಣೆಯನ್ನು ಪ್ರತಿ ವರ್ಷ ಆಗಸ್ಟ್‌ 20 ರಂದು ಆಚರಿಸಲಾಗುತ್ತಿದೆ.
ಬುಧವಾರ ವಿಕಾಸಸೌಧದಲ್ಲಿ ಈ ಕುರಿತು ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರು, ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಅವರ ನೇತೃತ್ವದ ಆಯ್ಕೆ ಸಮಿತಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ.
ಈ ಪ್ರಶಸ್ತಿಯು ರೂ.5.00 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಆ.20ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದರು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎಸ್. ಕೆ .ಕಾಂತ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆʼ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್​ನಿಂದ ಒಡೆದು ಆಳುವ ರಾಜಕೀಯ: ಸಿಎಂ ಯೋಗಿ ಆದಿತ್ಯನಾಥ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
