ಕಲಬುರಗಿ:ಮಸೀದಿಯಲ್ಲಿದ್ದುಕೊಂಡು ರಾತ್ರಿ ಹೊತ್ತಿನಲ್ಲಿ ಕಳ್ಳತನ ಮಾಡುತ್ತಿದ್ದಾರೆ ಎಂಬ ಆರೋಪ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಆನೂರು ಗ್ರಾಮದಲ್ಲಿ ಕೇಳಿ ಬಂದಿದೆ. ಸದ್ಯ ಗ್ರಾಮದ ಜನರು ಮಸೀದಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾದಗಿರಿ ಜಿಲ್ಲೆಯ 9 ಜನ ಮುಸ್ಲಿಮರು ಆನೂರು ಗ್ರಾಮದ ಮಸೀದಿಯಲ್ಲಿ ಉಳಿದುಕೊಂಡಿದ್ದರು. ಇವರು ರಾತ್ರಿ ಹೊತ್ತಿನಲ್ಲಿ ಕಳ್ಳತನ ಕೃತ್ಯದಲ್ಲಿ ತೊಡಗುತ್ತಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದೀಗ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.
ನಿನ್ನೆ ರಾತ್ರಿ (ಅ.23) ಕಳ್ಳತನ ಮಾಡುವಾಗ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದಿದ್ದರು. ನಂತರ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿದ್ದಾರೆ. ಇದೀಗ ಸಿಕ್ಕ ಬಿದ್ದ ಕಳ್ಳರು ನಾವಲ್ಲ, ನಾವೆಲ್ಲಾ ಜಮಾತ್​ಗೆ ಬಂದಿದ್ದೇವೆ ಎಂದು ಪೊಲೀಸರಲ್ಲಿ ಹೇಳುತ್ತಿದ್ದಾರೆ. ಸದ್ಯ ಪೊಲೀಸರು 5 ಜನರನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 4 =
Remember me
