ಬೆಂಗಳೂರು:ಹಾಸನ ಸಂಸದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದೆ.
ಈ ಪ್ರಕರಣ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುಟುಂಬಕ್ಕೆ ಮುಜುಗರವನ್ನುಂಟು ಮಾಡಿದೆ. ಸರ್ಕಾರ ಪ್ರಕರಣವನ್ನು ಎಸ್‌ಐಟಿಗೆ ವಹಿಸಿಕೊಟ್ಟ ಮೇಲಂತೂ ದೊಡ್ಡ ಗೌಡರ ಕುಟುಂಬ ತತ್ತರಿಸಿದೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಎಚ್.ಡಿ.ಕುಮಾರಸ್ವಾಮಿ, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ.ನಾನಾಗಲಿ, ದೇವೇಗೌಡರಾಗಲಿ ಎಂದೂ ಸಹ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ಪರಿಹರಿಸಿ ಕಳುಹಿಸಿದ್ದೇವೆ. ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಗೌರವ ನೀಡಿದ್ದೇವೆ ಎಂದು ಹೇಳಿದರು.
ಸರ್ಕಾರ ಪ್ರಕರಣವನ್ನು ಎಸ್‌ಐಟಿ ಗೆ ನೀಡಿದೆ. ತನಿಖೆಯಿಂದ ವಾಸ್ತವಾಂಶ ಹೊರಗೆ ಬರಲಿ. ಈ ನೆಲದ ಕಾನೂನಿನಲ್ಲಿ ತಪ್ಪು ಯಾರೇ ಮಾಡಿದರೂ ತಪ್ಪೇ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ನಾವಂತೂ ಯಾವುದಕ್ಕೂ ತಪ್ಪು ಮಾಡಿದ ವಿಷಯದಲ್ಲಿ ಯಾರನ್ನೂ ಕ್ಷಮಿಸುವ ಪ್ರಶ್ನೆಯೇ ಇಲ್ಲ. ತನಿಖೆಯ ವರದಿ ಸಂಪೂರ್ಣ ಹೊರಗೆ ಬರಲಿ ಬಂದ ನಂತರ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣವನ್ನು ಸರ್ಕಾರ ಎಸ್‌ಐಟಿ ತನಿಖೆಗೆ ನೀಡಿದೆ . ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತ ಮಾಡುತ್ತೇನೆ. ಯಾರೇ ತಪ್ಪು ಮಾಡಿದರು ಶಿಕ್ಷೆ ಆಗಬೇಕು. ತಪ್ಪು ಸಾಬೀತಾದರೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ. ವಿಡಿಯೋಗಳನ್ನು ನಾನು ನೋಡಿಲ್ಲ. ಮಾಧ್ಯಮಗಳಲ್ಲಿ ಬಂದ ಸುದ್ದಿಯನ್ನು ಗಮನಿಸಿದ್ದೇನೆ.=ಜಿ.ಟಿ.ದೇವೇಗೌಡ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
