ಬೆಂಗಳೂರುತರಕಾರಿ, ಹಣ್ಣು ಸೇರಿ ಬೀದಿಬದಿ ವ್ಯಾಪಾರ- ಉದ್ಯಮ ಆರಂಭಿಸಲು ಅಗತ್ಯವಿರುವ ಆರ್ಥಿಕ ನೆರವು ನೀಡುವ ಸಲುವಾಗಿ ‘ಅಸುರಕ್ಷಿತ ಆವರ್ತ ಸಾಲ ನಿಧಿ’ ಯೋಜನೆ ಪರಿಚಯಿಸಲು ಸಿಡ್ಬಿ ಚಿಂತನೆ ನಡೆಸಿದೆ ಎಂದು ಸಿಡ್ಬಿ ಉಪ ವ್ಯವಸ್ಥಾಪಕ ನಿರ್ದೇಶಕ ಸುದತ್ತ ಮಂಡಲ್ ತಿಳಿಸಿದರು.
ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದಲ್ಲಿ ಸಿಡ್ಬಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸಂಯುಕ್ತವಾಗಿ ಬುಧವಾರ ಹಮ್ಮಿಕೊಂಡಿದ್ದ ‘ಆರ್ಥಿಕ ಸಾಕ್ಷರತೆ ಕುರಿತು ಔಟ್‌ರೀಚ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸೂಕ್ಷ್ಮ, ಸಣ್ಣ ಕೈಗಾರಿಕೆಗಳಿಗೆ ಆರ್ಥಿಕ ನೆರವು ನೀಡುವ ಭಾರತೀಯ ಸಣ್ಣ ಉದ್ಯಮಗಳ ಅಭಿವೃದ್ಧಿ ಬ್ಯಾಂಕ್ (ಸಿಡ್ಬಿ) ಈಗ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ, ತರಕಾರಿ ಸೇರಿ ರಸ್ತೆಬದಿ ವ್ಯಾಪಾರಿಗಳಿಗೂ ಹಣಕಾಸಿನ ನೆರವು ನೀಡಲು ಉದ್ದೇಶಿಸಿದೆ. ಸದ್ಯದಲ್ಲಿಯೇ ಈ ಯೋಜನೆ ಅಸ್ತಿತ್ವಕ್ಕೆ ಬರಲಿದ್ದು, ಲಕ್ಷಾಂತರ ವ್ಯಾಪಾರಿಗಳಿಗೆ ಇದರಿಂದ ಹಣಕಾಸಿನ ನೆರವು ಸಿಗಲಿದೆ ಎಂದು ಮಾಹಿತಿ ನೀಡಿದರು.
ನ್ಯಾನೊ ಎಂಟರ್‌ಪ್ರೈಸಸ್ ಆರಂಭಿಸಲು ಲಕ್ಷಾಂತರ ರೂ. ಮೂಲ ಬಂಡವಾಳದ ಅವಶ್ಯಕತೆ ಇರುವುದಿಲ್ಲ. 10- 15 ದಿನಗಳ ಮಟ್ಟಿಗೆ 15ರಿಂದ 20 ಸಾವಿರ ರೂ. ಒದಗಿಸಿದರೆ ಸಾಕಾಗುತ್ತದೆ. ‘ಉದ್ಯಮ್’ ಅಡಿ ನೋಂದಣಿ ಮಾಡಿಕೊಂಡವರಿಗೆ ಯುಪಿಐ ವ್ಯವಸ್ಥೆ ಮೂಲಕ ನೇರವಾಗಿ ಈ ಹಣಕಾಸಿನ ನೆರವು ಒದಗಿಸಬಹುದಾಗಿದೆ. ಇದರ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ನಡೆದಿವೆ. ಶೀಘ್ರ ಇದರ ಉಪಯೋಗ ನ್ಯಾನೊ ಎಂಟರ್‌ಪ್ರೈಸಸ್ ವರ್ಗಕ್ಕೆ ತಲುಪಲಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − ten =
Remember me
