ಬೆಂಗಳೂರು:ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನೀವೇ ಆಗಬೇಕು ಎಂದು ಮಾಜಿ ಸಿಎಂ ಎಚ್..ಡಿ.ಕುಮಾರಸ್ವಾಮಿ ಅವರನ್ನು ಮಂಡ್ಯ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು ಒತ್ತಾಯಿಸಿದರು.
ಜೆ.ಪಿ.ನಗರದಲ್ಲಿರುವ ಕುಮಾರಸ್ವಾಮಿ ನಿವಾಸದ ಎದುರು ರಸ್ತೆಯಲ್ಲಿಯೇ ಕೂತು ಘೋಷಣೆ ಕೂಗಿದರು. ಚೆನ್ನೈನಲ್ಲಿ ಮೂರನೇ ಬಾರಿಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿದ ಅವರನ್ನು ನೋಡಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿದ್ದರು.
ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಕಾರ್ಯಕರ್ತರು, ಮುಖಂಡರು ಕುಮಾರಸ್ವಾಮಿ ಅವರೇ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಬೇಕು ಎಂದು ಪಟ್ಟು ಹಿಡಿದರು.
ಈ ವೇಳೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ತಂದೆಯವರು ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಈಗಷ್ಟೇ ಮನೆಗೆ ಬಂದಿದ್ದಾರೆ. ಅವರಿಗೆ ಒಂದು ದಿನ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿಕೊಂಡರು.
ಆಗ ಮಾತನಾಡಿದ ಕುಮಾರಸ್ವಾಮಿ, ಮಂಡ್ಯದಲ್ಲಿ ನಮಗೆ ವಿಶೇಷ ಪ್ರೀತಿ ವಿಶ್ವಾಸ ಸಿಕ್ಕಿದೆ. ಅದು ನನ್ನ ಭಾಗ್ಯ. ನಾನು ಈ ಭೂಮಿಯಲ್ಲಿ ಇರುವವರೆಗೂ ಈ ಪ್ರೀತಿಯನ್ನು ಮರೆಯಲು ಸಾಧ್ಯವಿಲ್ಲ. ನನಗೆ ಈವರೆಗೆ ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ನನ್ನ ಆರೋಗ್ಯವನ್ನು ನೋಡಿಕೊಂಡು ಪಕ್ಷದ ಕೆಲಸ, ಜನರ ಸೇವೆ ಮಾಡಬೇಕಿದೆ ಎಂದರು.
ಇದಕ್ಕೂ ಮೊದಲು ಮಂಡ್ಯ ಕಾರ್ಯಕರ್ತರ ಜತೆ ಮಾತನಾಡಿದ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಮಂಡ್ಯ ಕಾರ್ಯಕರ್ತರಾದ ತಾವೆಲ್ಲರೂ ಬಂದು ಒತ್ತಾಯ ಮಾಡುತ್ತಿದ್ದೀರಿ. ಸೋಮವಾರ ಚನ್ನಪಟ್ಟಣ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮಂಡ್ಯದಲ್ಲಿ ತಂದೆಯವರೇ ಚುನಾವಣೆಗೆ ನಿಲ್ಲಲಿ ಎಂಬ ಒತ್ತಡ ಇದೆ. ನಮ್ಮ ಕುಟುಂಬದಿಂದ ಚುನಾವಣೆ ಸ್ಪರ್ಧೆ ಬೇಡ ಅಂದುಕೊಂಡಿದ್ದೆವು. ಆದರೆ ಮಂಡ್ಯದ ಪರಿಸ್ಥಿತಿಯೇ ಬೇರೆ ಇದೆ. ಹೀಗಾಗಿ ಕುಮಾರಣ್ಣ ಅವರ ಮೇಲೆ ನೀವೆಲ್ಲ ಒತ್ತಡ ಹಾಕುತ್ತಿದ್ದೀರಿ. ತಂದೆಯವರು ಒಂದು ದಿನದ ಸಮಯಾವಕಾಶ ಕೇಳಿದ್ದಾರೆ. ಸೋಮವಾರ ಸಂಜೆಯೊಳಗೆ ಅಭ್ಯರ್ಥಿ ಯಾರೆಂದು ಅಂತಿಮ ಆಗಬಹುದು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
2019ರ ಲೊಕಸಭೆ ಚುನಾವಣೆಯಲ್ಲಿ ನನಗೆ ಕೆಲವರ ಕುತಂತ್ರದಿಂದ ಸೋಲಾಯಿತು. ಹಾಗಾಗಿ ಜಿಲ್ಲೆಯ ಜನರು, ಕಾರ್ಯಕರ್ತರು ನಾನು ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಕಳೆದ ಬಾರಿ ಸೊತಿದ್ದೀರಿ, ಈ ಬಾರಿ ಗೆಲ್ಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಸೋಮವಾರ ನಿರ್ಧಾರ ಗೊತ್ತಾಗಲಿದೆ ಎಂದು ತಿಳಿಸಿದರು.ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಶಾಸಕ ಎಚ್.ಟಿ.ಮಂಜುನಾಥ್, ಮಾಜಿ ಶಾಸಕ ಡಾ.ಕೆ.ಅನ್ನದಾನಿ,ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ಜಿಲ್ಲಾ ಯುವ ಜನತಾದಳ ಅಧ್ಯಕ್ಷ ರವಿಕುಮಾರ್, ಹಿರಿಯ ಮುಖಂಡ ರಾಮಚಂದ್ರ ಸೇರಿದಂತೆ ಸಾವಿರಾರು ಕಾರ್ಯಕರ್ತರು ಕುಮಾರಸ್ವಾಮಿ ನಿವಾಸದ ಮುಂದೆ ನೆರೆದಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 18 =
Remember me
