ಬೆಂಗಳೂರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಆಸಕ್ತಿ ತೋರದಿರುವುದು ಸಾವಿರಾರು ಆಕಾಂಕ್ಷಿಗಳಲ್ಲಿ ನಿರಾಸೆ ಮೂಡಿಸಿದೆ. ಕೂಡಲೇ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಆಗ್ರಹಿಸಿದ್ದಾರೆ.
2020ರ ಜ.1ರಂದು ಹೊರಡಿಸಿದ್ದ ಕರ್ನಾಟಕ ಸಾಮಾನ್ಯ ಸೇವೆ (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಸರ್ಕಾರ ಶಾಖೆ), ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ನೇಮಕಾತಿ (ವಿಶೇಷ) ನಿಯಮಗಳು 2019 ಅನ್ನು ಕಳೆದ ಜು.15ರಂದು ಹಿಂಪಡೆಯಲಾಗಿತ್ತು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-1 ಮತ್ತು ಗ್ರೇಡ್-2, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದದ ನೇರ ನೇಮಕಾತಿ ಕೋಟಾದ ಖಾಲಿ ಹುದ್ದೆಗಳಿಗೆ ಕೆಪಿಎಸ್ಸಿ ಮೂಲಕ ಆಯ್ಕೆ ಮಾಡಿಕೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಅಧೀನ ಕಾರ್ಯದರ್ಶಿ ಅವರು ಆದೇಶ ಹೊರಡಿಸಿದ್ದರು.
ಆದರೆ, ಆದೇಶ ಹೊರಡಿಸಿ 4 ತಿಂಗಳಾಗುತ್ತಿದ್ದರೂ ಕೆಪಿಎಸ್ಸಿ ಹೊಸ ನೇಮಕ ಮಾಡಿಕೊಳ್ಳುವ ಬಗ್ಗೆ ಆಸಕ್ತಿ ತೋರಿಸುತ್ತಿಲ್ಲ. ಇದರಿಂದ ಸಾವಿರಾರು ಹುದ್ದೆ ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ಕೂಡಲೇ ಅಧಿಸೂಚನೆ ಹೊರಡಿಸಿ ನೇಮಕಾತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
