ದೊಡ್ಡಬಳ್ಳಾಪುರ:ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಾಣ ಹೋಮವಾಗಿದೆ. ಕಸಬಾ ಹೋಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ ನೀರು ಕೆರೆಗೆ ಸೇರಿರುವ ಪರಿಣಾಮ ಸಾವಿರಾರು ಮೀನುಗಳು ಮೃತಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಸಣ್ಣ ನೀರಾವರಿ ಇಲಾಖೆಗೆ ಸೇರಿದ ಕೆರೆಯಲ್ಲಿ ಸಾವಿರಾರು ಮೀನುಗಳ ಸಾವಿನಿಂದ ದರ್ವಾಸನೆ ಉಂಟಾಗಿದೆ. ಕಳೆದ ಎರಡು ಮೂರು ದಿನಗಳ ಹಿಂದೆ ಕೆರೆಗೆ ತ್ಯಾಜ್ಯ ನೀರನ್ನು ನೇರವಾಗಿ ಕಾರ್ಖಾನೆಗಳ ರಾಸಯನಿಕ ಮಿಶ್ರಿತ ತ್ಯಾಜ್ಯ ನೀರು ಹರಿದಿದ್ದರಿಂದ ಮೀನುಗಳು ಸಾವನ್ನಪ್ಪಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ತೆರವಾಗದ ಮೀನುಗಳು:ಕೆರೆಯಲ್ಲಿ ಮೀನುಗಳು ಮೃತಪಟ್ಟು ಈಗಾಗಲೇ ಮೂರು ದಿನಗಳು ಕಳೆದಿವೆ. ದಡಕ್ಕೆ ಬಂದು ಸೇರಿರುವ ರಾಶಿ ರಾಶಿ ಮೀನುಗಳು ಕೊಳೆತು ಗಬ್ಬುನಾರುತ್ತಿವೆ. ನೀರಿನಲ್ಲಿಯೇ ಹಾಗೆ ಬಿಟ್ಟರೆ ನೀರು ಮತ್ತಷ್ಟು ಮಲೀನಗೊಳ್ಳುವ ಆತಂಕ ಎದುರಾಗಿದೆ. ಮೀನುಗಾರಿಕೆ ಇಲಾಖೆ ಅಥವಾ ಸಂಬಂಧಟ್ಟ ಇಲಾಖೆಯವರು ಮೃತ ಮೀನುಗಳನ್ನು ಕೆರೆಯಿಂದ ತೆಗೆದು ವಿಲೇವಾರಿ ಮಾಡಬೇಕಿದೆ.
ಇದನ್ನೂ ಓದಿ:ಹುಲಿ ಉಗುರು ಪ್ರಕರಣ; ಎಚ್ಚರಿಸಬೇಕಿತ್ತು, ವೈರಲ್ ಮಾಡುವ ಅವಶ್ಯಕತೆ ಇರಲಿಲ್ಲ: ನಟ ಜಗ್ಗೇಶ್​
ತಾಲ್ಲೂಕಿಗೆ ಬಾರದ ಮಾಲಿನ್ಯ ನಿಯಂತ್ರಣ ಮಂಡಳಿ:ಏಷ್ಯಾದ ಎರಡನೇ ಅತಿ ದೊಡ್ಡ ಕೈಗಾರಿಕಾ ಕ್ಲಸ್ಟರ್ ಹೊಂದಿರುವ ಖ್ಯಾತಿ ದೊಡ್ಡಬಳ್ಳಾಪುರಕ್ಕೆ ಸಲ್ಲುತ್ತದೆ. ಸಾವಿರಾರು ಕೈಗಾರಿಕೆಗಳು, ಕಾರ್ಖಾನೆಗಳು, ಗಾರ್ಮೆಂಟ್ಸ್ ಗಳು ಚಾಲ್ತಿಯಲ್ಲಿವೆ. ಜಿಲ್ಲಾಧಿಕಾರಿಗಳ ಕಾರ್ಯಾಲಯವು ಜಿಲ್ಲೆಗೆ ಸ್ಥಳಾಂತರವಾಗಿದೆ.
ಆದರೆ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮಾತ್ರ ವರ್ಷಾನುಗಟ್ಟಲೆ ಕಳೆದರೂ ಸಹ ಬೆಂಗಳೂರಿನಿಂದ ಗ್ರಾಮಾಂತರಕ್ಕೆ ಬಂದಿಲ್ಲ. ಇಂತಹ ಘಟನೆಗಳು ಸಂಭವಿಸಿದಾಗ ದೂರು ಕೊಡಲು ಬೆಂಗಳೂರಿಗೆ ಹೋಗಿ ಬರುವಷ್ಟರಲ್ಲಿ ಘಟನೆ ಮಾಸಿ ಹೋಗಿರುತ್ತದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 5 =
Remember me
