ಬೆಂಗಳೂರು:ರಾಜ್ಯದ ವಿವಿಧ ಸಾಹಿತಿಗಳಿಗೆ ಬೆದರಿಕೆಗಳು ಬಂದ ಹಿನ್ನೆಲೆಯಲ್ಲಿ ಕೆಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಇದೀಗ ಆ ಎಲ್ಲ ಪ್ರಕರಣಗಳ ತನಿಖೆಯ ಜವಾಬ್ದಾರಿಯನ್ನು ಸಿಸಿಬಿಗೆ ವಹಿಸಲಾಗಿದೆ. ಈ ಕುರಿತು ಇಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಬೆದರಿಕೆಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಲ್ಲದೆ, ಸಾಹಿತಿಗಳೆಲ್ಲ ಒಗ್ಗೂಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು. ಅಲ್ಲದೆ, ಸೂಕ್ತ ರಕ್ಷಣೆ ನೀಡಬೇಕು ಎಂದು ಕೂಡ ಮನವಿ ಮಾಡಿಕೊಂಡಿದ್ದರು.
ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ಮಹತ್ವದ ಬೆಳವಣಿಗೆ ಆಗಿದೆ. ವಿವಿಧ ಸಾಹಿತಿಗಳಿಗೆ ಬೆದರಿಕೆ ಹಿನ್ನೆಲೆಯಲ್ಲಿ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಸಿಸಿಬಿಗೆ ವರ್ಗಾವಣೆಗೊಳಿಸಿ ಡಿಜಿ-ಐಜಿಪಿ ಅಲೋಕ್ ಮೋಹನ್ ಆದೇಶಿಸಿದ್ದಾರೆ.
ಸಾಹಿತಿಗಳಾದ ಕುಂ. ವೀರಭದ್ರಪ್ಪ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಬಿ.ಎಲ್. ವೇಣು, ಬಂಜಗೆರೆ ಜಯಪ್ರಕಾಶ್ ಹಾಗೂ ವಸುಂಧರ ಭೂಪತಿ ಅವರಿಗೆ ಪತ್ರಗಳು ಹಾಗೂ ಕರೆಗಳ ಮೂಲಕ ಬೆದರಿಕೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಇವರಿಂದ ಒಟ್ಟು ಏಳು ಠಾಣೆಗಳಲ್ಲಿ ದೂರುಗಳು ದಾಖಲಾಗಿದ್ದವು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 1 =
Remember me
