ಬೆಂಗಳೂರು:ಬುರ್ಖಾ ಧರಿಸಿದ ಯುವತಿ ಮತ್ತು ಟೋಪಿ ಹಾಕಿದ್ದ ಯುವಕ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಮುಸ್ಲಿಂ ಯುವಕನೊಬ್ಬ ಇಬ್ಬರಿಗೂ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮುಸ್ಲಿಂ ಜೋಡಿ ಎನ್ನಲಾದ ಯುವಕ-ಯುವತಿ ಜೈಶ್ರೀರಾಮ್​ ಎಂದು ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದರ ಬೆನ್ನಲ್ಲೇ ಮುಸ್ಲಿಂ ಯುವಕನೊಬ್ಬ ಇಬ್ಬರಿಗೂ ಬೆದರಿಕೆ ಹಾಕಿದ್ದು, ಅವಾಚ್ಯ ಪದಗಳಿಂದ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಯುವಕನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಪಿಒಕೆಯಲ್ಲಿ ವಿದ್ಯುತ್ ದರ ಏರಿಕೆ ವಿರುದ್ಧ ಪ್ರತಿಭಟನೆ; ತಿಂಗಳ ಸಂಬಳಕ್ಕಿಂತಲೂ ಹೆಚ್ಚಿದೆಯಂತೆ ಕರೆಂಟ್ ಬಿಲ್!
ಬುರ್ಖಾ ತೆಗೆದು ಏನಾದ್ರು ಮಾತನಾಡಿ. ಮುಸ್ಲಿಂರನ್ನು ಮಧ್ಯ ಎಳೆದು ತಂದು ಜೈ ಶ್ರೀರಾಮ್​ ಎಂದು ಹೇಳಬೇಡಿ. ನೀವೇನಾದರೂ ನಿಜವಾದ ಮುಸ್ಲಿಮರ ಮುಂದೆ ಬಂದು ಈ ರೀತಿ ಮಾತನಾಡಿದರೆ ನಿಮ್ಮ ಕತ್ತು ಸೀಳ್ತಿವಿ ಎಂದು ಯುವಕ ಬೆದರಿಕೆ ಹಾಕಿದ್ದಾನೆ.
https://twitter.com/rightwing_guy/status/1696200395679469740?s=20
ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾಗಿದೆ. ಹೀಗಾಗಿ ವೈರಲ್​ ಆಗಿರುವ ವಿಡಿಯೋವನ್ನು ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪೊಲೀಸರು ಪರಿಶೀಲನೆ ಮಾಡುವುದಾಗಿ ರೀಟ್ವೀಟ್ ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್)
ರಕ್ಷಾಬಂಧನಕ್ಕೂ ಮುನ್ನವೇ ಸಹೋದರನಿಗೆ ಎಂದಿಗೂ ಮರೆಯದ ಕೊಡುಗೆ ನೀಡಿದ ಅಕ್ಕ..

ಪಿಒಕೆಯಲ್ಲಿ ವಿದ್ಯುತ್ ದರ ಏರಿಕೆ ವಿರುದ್ಧ ಪ್ರತಿಭಟನೆ; ತಿಂಗಳ ಸಂಬಳಕ್ಕಿಂತಲೂ ಹೆಚ್ಚಿದೆಯಂತೆ ಕರೆಂಟ್ ಬಿಲ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
