ಮಂಗಳೂರು:ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಕಾರ್ತಿಕ್​ ಮೇರ್ಲ ಕೊಲೆ ಆರೋಪಿ ಚರಣ್ ಎಂಬಾತನನ್ನು ಹಾಡಹಗಲೇ ಕೊಚ್ಚಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ನರ್ಮೆಶ್ ರೈ, ನಿತಿಲ್ ಶೆಟ್ಟಿ, ವಿಜೇಶ್ ಬಂಧಿತ ಆರೋಪಿಗಳು. ಇವರನ್ನು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಲ್ಲತ್ತಡ್ಕ ಎಂಬಲ್ಲಿ ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿ ಎಂಬಲ್ಲಿ ನಿನ್ನೆ ಈ ಕೊಲೆ ನಡೆದಿತ್ತು.
2019ರ ಸೆ. 4ರಂದು ನಡೆದಿದ್ದ ಕಾರ್ತಿಕ್ ಮೇರ್ಲ ಕೊಲೆಗೆ ಸಂಬಂಧಿಸಿದಂತೆ ಪ್ರತೀಕಾರವಾಗಿ ಪ್ರಮುಖ ಆರೋಪಿಯಾಗಿದ್ದ ಚರಣ್​ ಎಂಬಾತನನ್ನು ನಿನ್ನೆ ಎರಡು ಬೈಕ್​ಗಳಲ್ಲಿ ಬಂದಿದ್ದ ಮೂವರು ಆರೋಪಿಗಳು ಕೊಚ್ಚಿ ಕೊಂದು ಪರಾರಿಯಾಗಿದ್ದರು. ಈ ಕುರಿತು ಬೆಳ್ಳಾರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇಂದು ಆರೋಪಿಗಳನ್ನು ಬಂಧಿಸಿದ್ದಾರೆ.
ಹಿಂದೂ ಸಂಘಟನೆ ಕಾರ್ಯಕರ್ತನ ಕೊಲೆಗೆ ಪ್ರತೀಕಾರ; ಸೇಡಿಗಾಗಿ ಹಾಡಹಗಲೇ ಕೊಚ್ಚಿ ಕೊಂದರು..

ಪ್ರವಾದಿ ಮುಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ; ವಕ್ತಾರರಿಬ್ಬರನ್ನು ಅಮಾನತುಗೊಳಿಸಿದ ಬಿಜೆಪಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 5 =
Remember me
