ಬೆಂಗಳೂರುವಿದ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡ ನಿವಾರಿಸುವುದು, ಶೈಕ್ಷಣಿಕ ಮತ್ತು ಔದ್ಯೋಗಿಕವಾಗಿ ಉತ್ತಮ ಅವಕಾಶಗಳನ್ನು ಗಿಟ್ಟಿಸಿಕೊಡುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಿಂದಲೇ (2023-24) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 3 ವಾರ್ಷಿಕ ಪರೀಕ್ಷೆಗಳನ್ನು ನಡೆಸುವುದಾಗಿ ಘೋಷಿಸಿದೆ.
ಹಾಲಿ ಇರುವ ಪರೀಕ್ಷಾ ಪದ್ಧತಿಯು ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಆತಂಕವನ್ನು ಸೃಷ್ಟಿಸುತ್ತಿದೆ. ಇದರಿಂದ ವಿದ್ಯಾರ್ಥಿಗಳ ಜ್ಞಾನಾರ್ಜನೆ, ಅರ್ಥಪೂರ್ಣವಾದ ಕಲಿಕೆ, ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಪದ್ಧತಿಯಲ್ಲಿ ಕೆಲವು ಸುಧಾರಣೆಗಳನ್ನು ತರಲಾಗುತ್ತಿದೆ ಎಂದು ತಿಳಿಸಿದೆ.
ಪ್ರಸ್ತುತ ಜಾರಿಯಲ್ಲಿರುವ ಒಂದು ವಾರ್ಷಿಕ ಪರೀಕ್ಷೆ ಮತ್ತು 2 ಪೂರಕ ಪರೀಕ್ಷೆಗಳನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ನಡೆಸುತ್ತಿದೆ. ಮುಂದಿನ ವರ್ಷದಿಂದಲೂ ಪರೀಕ್ಷಾ ಪದ್ಧತಿ ಹೀಗೆಯೇ ಇರಲಿದೆ. ಆದರೆ, ಪೂರಕ ಪರೀಕ್ಷೆಗಳನ್ನು ಮುಖ್ಯ ಪರೀಕ್ಷೆಗಳೆಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದೆ.
ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಅಥವಾ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿ ಪ್ರಥಮ ಬಾರಿಗೆ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು (ರೆಗ್ಯುಲರ್ ) ಮೊದಲ ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗಬೇಕು. ಒಂದು ವೇಳೆ ಹಾಜರಾಗದಿದ್ದರೆ, 2 ಮತ್ತು 3ನೇ ಪರೀಕ್ಷೆಗೆ ಅವಕಾಶವಿರುವುದಿಲ್ಲ. ಅಂತಹ ವಿದ್ಯಾರ್ಥಿಗಳು ಮುಂದಿನ ವರ್ಷದ ಪರೀಕ್ಷೆವರೆಗೂ ಕಾಯಬೇಕು. ಆದರೆ, ಖಾಸಗಿ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳು ಯಾವುದೇ ಪರೀಕ್ಷೆಗೆ ಹಾಜರಾಗಬಹುದು. ಅವರಿಗೆ ಯಾವುದೇ ನಿರ್ಬಂಧಗಳಿರುವುದಿಲ್ಲ.
ಪ್ರಸ್ತುತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಯು ತಾನು ಗಳಿಸಿದ ಅಂಕಗಳಿಂದ ತೃಪ್ತರಾಗದಿದ್ದರೆ, ಅದನ್ನು ತಿರಸ್ಕರಿಸಿ ಪೂರಕ ಪರೀಕ್ಷೆ ಬರೆದರೆ, ಪೂರಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಮಾತ್ರ ಪರಿಗಣಿಸಲಾಗುತ್ತಿದೆ. ಒಂದು ವೇಳೆ ಪೂರಕ ಪರೀಕ್ಷೆಗಿಂತ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕ ಜಾಸ್ತಿಯಾಗಿದ್ದರೂ ಅದನ್ನು ಉಳಿಸಿಕೊಳ್ಳಲು ವಿದ್ಯಾರ್ಥಿಗೆ ಅವಕಾಶವಿಲ್ಲ. ಈ ಹಿನ್ನೆಲೆಯಲ್ಲಿ 1,2 ಮತ್ತು 3 ಪರೀಕ್ಷೆಗಳಲ್ಲಿ ತಳಿಸಿದ ವಿಷಯವಾರು ಉತ್ತಮ ಅಂಕವನ್ನು ಉಳಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ.
ವಿದ್ಯಾರ್ಥಿಗಳ ಕಲಿಕೆಯ ವೇಗ ಮತ್ತು ಶೈಲಿಯು ವಿಭಿನ್ನವಾಗಿದ್ದು, 3 ಪರೀಕ್ಷೆಗಳನ್ನು ನಡೆಸುವುದರಿಂದ ಅದವ ಕಲಿಕೆಯ ವೇಗಕ್ಕೆ ಹೊಂದಿಕೊಳ್ಳಲು ಮತ್ತು ಸಮಯದ ನಿರ್ಬಂಧಗಳಿಂದ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡಲಿದೆ.
‘ಪೂರಕ ಪರೀಕ್ಷೆ’ ಹೆಸರಿನ ಬದಲಿಗೆ ‘ವಾರ್ಷಿಕ ಪರೀಕ್ಷೆ’ ಎಂಬ ಹೆಸರಿನಲ್ಲಿ 3 ಅವಕಾಶಗಳನ್ನು ನೀಡುತ್ತಿರುವುದರಿಂದ ವಿದ್ಯಾರ್ಥಿಯ ಕಾರ್ಯಕ್ಷಮತೆ ಮತ್ತು ಸಕಾರಾತ್ಮಕ ಮನೋಭಾವ ಮನೋಭಾವವನ್ನು ಉತ್ತೇಜಿಸಿದಂತಾಗುತ್ತದೆ ಎಂದು ಹೇಳಿದೆ.
ಸಂಭವನೀಯ ವೇಳಾಪಟ್ಟಿ
ತರಗತಿ ಪರೀಕ್ಷೆ ಅವಧಿ ಲಿತಾಂಶ ಪ್ರಕಟ ಮರು ಮೌಲ್ಯಮಾಪನ ಲಿತಾಂಶದ್ವಿತೀಯ ಪಿಯು ಪರೀಕ್ಷೆ-1 2024ರ ಮಾ.1ರಿಂದ 25 ಏ.22 ಮೇ 10ಪರೀಕ್ಷೆ-2 ಮೇ 15ರಿಂದ ಜೂ.5 ಜೂ.11 ಜೂ.29ಪರೀಕ್ಷೆ-3 ಜು.12ರಿಂದ 30 ಆಗಸ್ಟ್ 16 ಆ.25ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಮಾ.30ರಿಂದ ಏ.15 ಮೇ 8 ಮೇ 23ಪರೀಕ್ಷೆ-2 ಜೂ.12ರಿಂದ 19 ಜೂ.29 ಜು.10ಪರೀಕ್ಷೆ-3 ಜು.29ರಿಂದ ಆ.5 ಆ.19 ಆ.26
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + three =
Remember me
