ಬೆಂಗಳೂರು:ಯುವತಿಯ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಗಲ್ ಪ್ರೇಮಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
17 ವರ್ಷದ ಯುವತಿಯನ್ನು ಪ್ರಕಾಶನಗರದ ಪ್ರಿಯಕರ ಮುನಿರಾಜು ಅಲಿಯಾಸ್ ಆದಿಗೌಡ ಸೋಮವಾರ ಸಂಜೆ ಹತ್ಯೆ ಮಾಡಿದ್ದ. ಇದಕ್ಕೆ ಸಹಕರಿಸಿದ ಆರೋಪದ ಮೇಲೆ ಆತನ ಸಹಚರರಾದ ಕಿರಣ್ ಹಾಗೂ ಚಂದ್ರಶೇಖರ್ ಎಂಬುವರನ್ನು ಇಂದು ಬಂಧಿಸಲಾಗಿದೆ.
ಇದನ್ನೂ ಓದಿ:ಪಾಲಕರೊಂದಿಗೆ ಪಿಕ್ನಿಕ್​ಗೆ ಹೋದ ಮಗುವಿಗೆ ಕಾದಿತ್ತು ದುರಂತ; ಗೊಂಬೆ ಹುಡುಕುತ್ತ ಹೋಗಿದ್ದೇ ತಪ್ಪಾಯ್ತು..!
ಮುನಿರಾಜು ಸೋಮವಾರ ರಾತ್ರಿ ಬಲವಂತವಾಗಿ ಪ್ರೇಯಸಿಗೆ ಅರಿಶಿಣದ ದಾರದ ತಾಳಿ ಕಟ್ಟಿ ಮದುವೆಯಾಗಲು ಯತ್ನಿಸಿದಾಗ ವಿರೋಧ ವ್ಯಕ್ತಪಡಿಸಿದ್ದಾಳೆ. ಕೆರಳಿದ ಮುನಿರಾಜು ಚೂರಿಯಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 6ಕ್ಕೂ ಹೆಚ್ಚು ಪ್ರಕರಣಗಳು ಮುನಿರಾಜು ಮೇಲಿವೆ.
ಪ್ರಕಾಶನಗರದಲ್ಲೇ ಯುವತಿಯ ಪಾಲಕರೂ ವಾಸಿಸುತ್ತಿದ್ದು, ಒಂದೇ ಏರಿಯಾದಲ್ಲಿ ವಾಸವಾಗಿದ್ದರಿಂದ ಆಕೆಗೆ ಮುನಿರಾಜು ಪರಿಚಯವಿತ್ತು. 3 ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಮುನಿರಾಜು ನಡವಳಿಕೆಯಿಂದ ಬೇಸತ್ತಿದ್ದ ಯುವತಿ, ಆತನಿಂದ ದೂರವಾಗಲು ಮುಂದಾಗಿದ್ದಳು. ಇದರಿಂದ ಕುಪಿತಗೊಂಡಿದ್ದ ಆತ, ಆಕೆಯ ಮನವೊಲೈಕೆಗೆ ಯತ್ನಿಸಿದ್ದ.
ಇದನ್ನೂ ಓದಿ:ಬಿಜೆಪಿ ಮುಖಂಡನ ಕೊಲೆ ಬೆನ್ನಲ್ಲೇ ಮತ್ತೊಬ್ಬ ಮುಖಂಡನ ಕಿಡ್ನಾಪ್‌!
ಇದರ ನಡುವೆ ಮಗಳು ನಾಪತ್ತೆಯಾಗಿದ್ದರಿಂದ ಕಂಗಾಲಾಗಿದ್ದ ಪಾಲಕರು ರಾಜಾಜಿನಗರ ಠಾಣೆಗೆ ದೂರು ನೀಡಿದ್ದರು. ಅಲ್ಲದೆ, ಮಗಳನ್ನು ಮುನಿರಾಜು ಅಪಹರಿಸಿಕೊಂಡು ಹೋಗಿದ್ದಾನೆ ಎಂದು ಆರೋಪಿಸಿದ್ದರು. ಈ ಬಗ್ಗೆ ರಾಜಾಜಿನಗರ ಪೊಲೀಸರು ತನಿಖೆ ಶುರು ಮಾಡಿದ್ದರು. ಅಷ್ಟರಲ್ಲಿ ಗಿರಿನಗರ ಪೊಲೀಸರಿಗೆ ಹೊಸಕೆರೆ ಸಮೀಪದ ದ್ವಾರಕನಗರದಲ್ಲಿ ಕೊಲೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು.
ಮದುವೆ ನಿರಾಕರಿಸಿದಕ್ಕೆ ಕುಪಿತನಾಗಿ ಪ್ರೇಯಸಿಯನ್ನು ಇರಿದು ಕೊಂದೇ ಬಿಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
