ಮಂಗಳೂರು:ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರಿಗೆ “ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು?” ಎಂದು ಕೇಳಿ ನೋಟೀಸ್ ನೀಡಲಾಗಿದೆ.
ಇಂದು ಆ ಮೂವರು ಬಜರಂಗದಳ ಕಾರ್ಯಕರ್ತರಿಗೆ ಕಾ‌ನೂನು ಸುವ್ಯವಸ್ಥೆ ಖಾತ್ರಿ ಪಡಿಸಲು ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಈ ಸಂದರ್ಭ ಅಧಿಕೃತವಾಗಿ ಒಂದು ವರ್ಷದ ಕಾಲ ಗಡೀಪಾರು ಮಾಡಿ ಆದೇಶ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆಗಬಹುದಾದ ಮೂವರು ಹಿಂದೂ ಕಾರ್ಯಕರ್ತರು ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ ಗಿರಿ ಕೇಸ್ ನಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಇವರು ಸುಲ್ತಾನ್ ಜ್ಯುವೆಲ್ಲರಿನಲ್ಲಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಹೀಗಾಗಿ ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್​ಗಳಿಂದ ಗಡಿಪಾರಿಗೆ ವರದಿಯನ್ನು ಕೇಳಲಾಗಿದೆ. ಹೀಗಾಗಿ ಅಧಿಕೃತವಾಗಿ ಕಾನೂನು ಪ್ರಕಾರ ಗಡೀಪಾರು ಅಸ್ತ್ರ ಪ್ರಯೋಗ ಮಾಡಲಾಗುತ್ತಿದೆ. ಇದೀಗ ನೋಟೀಸ್ ನೀಡಿ ಗಡೀಪಾರು ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಇಂದು ಆ ಮೂವರು ಡಿಸಿಪಿ ಎದುರು ಅವರು ಹಾಜರಾಗಿದ್ದು, ಇಂದು ಭವಿಷ್ಯ ನಿರ್ಣಯ ಆಗಲಿದೆ.
LIVE | ರಾಜ್ಯ ವಿಧಾನಮಂಡಲ ಅಧಿವೇಶನ ನೇರಪ್ರಸಾರ- 21/07/2023
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 20 =
Remember me
